ಪ್ರಧಾನ ಮಂತ್ರಿಯವರ ಕಛೇರಿ

ಮುಂಬೈ ಅಗ್ನಿ ದುರಂತದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ

ಪ್ರಕಟಣಾ ದಿನಾಂಕ: 29 DEC 2017 10:44AM by PIB Bengaluru

ಮುಂಬೈ ಅಗ್ನಿ ದುರಂತದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ 
 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈ ಅಗ್ನಿ ದುರಂತದಲ್ಲಿ ಉಂಟಾದ ಜೀವ ಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ. 

“ಮುಂಬೈ ಅಗ್ನಿ ಅನಾಹುತದಿಂದ ದುಃಖಿತನಾಗಿದ್ದೇನೆ. ಈ ಸಂಕಷ್ಟದ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬದವರೊಂದಿಗೆ ನನ್ನ ಸಂವೇದನೆ ಇದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ”, ಎಂದು ಪ್ರಧಾನಿ ತಿಳಿಸಿದ್ದಾರೆ. 


(ಪ್ರಕಟಣೆ ಐ.ಡಿ.: 1514944) ವಿಸಿಟರ್ ಕೌಂಟರ್ : 113
ಪ್ರಕಟಣೆಯನ್ನು ಇದರಲ್ಲಿ ಓದಿ: English , हिन्दी