ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ
ತೈಲ ಮತ್ತು ಅನಿಲ ವಲಯದಲ್ಲಿನ ಸಹಕಾರಕ್ಕಾಗಿ ಭಾರತ ಮತ್ತು ಇಸ್ರೇಲ್ ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟದ ಅನುಮೋದನೆ
ಪ್ರಕಟಣಾ ದಿನಾಂಕ:
03 JAN 2018 2:42PM by PIB Bengaluru
ತೈಲ ಮತ್ತು ಅನಿಲ ವಲಯದಲ್ಲಿನ ಸಹಕಾರಕ್ಕಾಗಿ ಭಾರತ ಮತ್ತು ಇಸ್ರೇಲ್ ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ಇಸ್ರೇಲ್ ನಡುವೆ ತೈಲ ಮತ್ತು ಅನಿಲ ವಲಯದ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದಕ್ಕೆ ಅಂಕಿತ ಹಾಕಲು ತನ್ನ ಅನುಮೋದನೆ ನೀಡಿದೆ.
ಈ ತಿಳಿವಳಿಕೆ ಒಪ್ಪಂದವು ಇಂಧನ ವಲಯದಲ್ಲಿ ಭಾರತ – ಇಸ್ರೇಲ್ ಬಾಂಧವ್ಯಕ್ಕೆ ಶಕ್ತಿ ತುಂಬುವ ನಿರೀಕ್ಷೆ ಇದೆ. ಈ ಸಹಕಾರವು ಪರಸ್ಪರರ ರಾಷ್ಟ್ರಗಳಲ್ಲಿ ಹೂಡಿಕೆಯನ್ನು ಉತ್ತೇಜಿಸಲು, ತಂತ್ರಜ್ಞಾನ ವರ್ಗಾವಣೆ ಮಾಡಲು, ಆರ್ ಅಂಡ್ ಡಿ, ಜಂಟಿ ಅಧ್ಯಯನ ನಡೆಸಲು, ಮಾನವ ಸಂಪನ್ಮೂಲದ ಸಾಮರ್ಥ್ಯ ನಿರ್ಮಾಣ ಮಾಡಲು ಮತ್ತು ನವೋದ್ಯಮ ರಂಗದಲ್ಲಿನ ಸಹಯೋಗಕ್ಕೆ ಅವಕಾಶ ಕಲ್ಪಿಸುತ್ತದೆ.
***
(ಪ್ರಕಟಣೆ ಐ.ಡಿ.: 1515423)
ವಿಸಿಟರ್ ಕೌಂಟರ್ : 78