ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಭಾರತದಲ್ಲಿ ಕಚೇರಿ ಹೊಂದಿರುವ ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾದ ಪ್ರಾದೇಶಿಕ ಕಚೇರಿ ಮತ್ತು ಭಾರತದ ನಡುವಿನ ಒಪ್ಪಂದಕ್ಕೆ ಸಂಪುಟ ಅನುಮೋದನೆ 

Posted On: 25 APR 2018 1:18PM by PIB Bengaluru

ಭಾರತದಲ್ಲಿ ಕಚೇರಿ ಹೊಂದಿರುವ ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾದ ಪ್ರಾದೇಶಿಕ ಕಚೇರಿ ಮತ್ತು ಭಾರತದ ನಡುವಿನ ಒಪ್ಪಂದಕ್ಕೆ ಸಂಪುಟ ಅನುಮೋದನೆ 
 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಭಾರತದಲ್ಲಿ ಕಚೇರಿ ಹೊಂದಿರುವ ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾದ ಪ್ರಾದೇಶಿಕ ಕಚೇರಿ ಮತ್ತು ಭಾರತದ ನಡುವಿನ ಒಪ್ಪಂದಕ್ಕೆ ಅನುಮೋದನೆ ನೀಡಲಾಯಿತು. ನವದೆಹಲಿಯಲ್ಲಿ 2018ರ ಮಾರ್ಚ್ 13ರಂದು ಒಡಂಬಡಿಕೆಗೆ ಸಹಿ ಹಾಕಲಾಯಿತು. 

ಈ ದ್ವಿಪಕ್ಷೀಯ ಒಪ್ಪಂದ ಭಾರತ ಮತ್ತು ವಿಶ್ವ ಆರೋಗ್ಯ ಸಂಸ್ಥೆ( ಡಬ್ಲೂಎಚ್ಒ) ನಡುವೆ ಸಹಕಾರ ಸಂಬಂಧಕ್ಕೆ ಉತ್ತೇಜನ ನೀಡುತ್ತದೆ. ಜೊತೆಗೆ ಇದು ಭಾರತದಲ್ಲಿನ ಜನರ ಸಾರ್ವಜನಿಕ ಆರೋಗ್ಯ ಸ್ಥಿತಿಗತಿ ಸುಧಾರಣೆಗೂ ಸಹಕಾರಿಯಾಗಲಿದೆ. 



(Release ID: 1530410) Visitor Counter : 59


Read this release in: English , Urdu , Tamil , Telugu