ಪ್ರಧಾನ ಮಂತ್ರಿಯವರ ಕಛೇರಿ

ಪಿಎಂಎನ್ಆರ್ಎಫ್ ನಿಂದ ಉತ್ತರ ಭಾರತದಲ್ಲಿ ಧೂಳಿನಿಂದ ಕೂಡಿದ ಬಿರುಗಾಳಿಯ ಸಂತ್ರಸ್ತರಿಗೆ ಪರಿಹಾರ ಪ್ರಕಟಿಸಿದ ಪ್ರಧಾನಿ

प्रविष्टि तिथि: 04 MAY 2018 7:55PM by PIB Bengaluru

ಪಿಎಂಎನ್ಆರ್ಎಫ್ ನಿಂದ ಉತ್ತರ ಭಾರತದಲ್ಲಿ ಧೂಳಿನಿಂದ ಕೂಡಿದ ಬಿರುಗಾಳಿಯ ಸಂತ್ರಸ್ತರಿಗೆ ಪರಿಹಾರ ಪ್ರಕಟಿಸಿದ ಪ್ರಧಾನಿ 
 

ಮೇ 2, 2018ರಂದು ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಧೂಳಿನಿಂದ ಕೂಡಿದ ಬಿರುಗಾಳಿಯಿಂದಾಗಿ ಪ್ರಾಣ ಕಳೆದುಕೊಂಡ ಸಂತ್ರಸ್ತ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪ್ರಕಟಿಸಿದರು. 

ಬಿರುಗಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲೂ ಸಹ ಪ್ರಧಾನಮಂತ್ರಿಗಳು ಅನುಮೋದನೆ ನೀಡಿದ್ದಾರೆ

                                                .****


(रिलीज़ आईडी: 1531724) आगंतुक पटल : 80
इस विज्ञप्ति को इन भाषाओं में पढ़ें: English , Marathi , Bengali , Assamese , Gujarati , Tamil , Telugu