ಪ್ರಧಾನ ಮಂತ್ರಿಯವರ ಕಛೇರಿ

ರಾಜ್ಯದ ಕೆಲವು ಭಾಗದಲ್ಲಿನ ಪ್ರವಾಹ ಪರಿಸ್ಥಿತಿ ಕುರಿತಂತೆ ಕರ್ನಾಟಕ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ ಪ್ರಧಾನಮಂತ್ರಿ

Posted On: 19 AUG 2018 5:35PM by PIB Bengaluru

ರಾಜ್ಯದ ಕೆಲವು ಭಾಗದಲ್ಲಿನ ಪ್ರವಾಹ ಪರಿಸ್ಥಿತಿ ಕುರಿತಂತೆ ಕರ್ನಾಟಕ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ ಪ್ರಧಾನಮಂತ್ರಿ

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಕೆಲವು ಭಾಗಗಳಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ಕುರಿತಂತೆ ಮುಖ್ಯಮಂತ್ರಿ ಶ್ರೀ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದರು.

 

 “ಕರ್ನಾಟಕದ ಮುಖ್ಯಮಂತ್ರಿ ಶ್ರೀ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ರಾಜ್ಯದ ಕೆಲವು ಭಾಗಗಳಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ಕುರಿತಂತೆ ಮಾತನಾಡಿದ್ದೇನೆ. ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಎಲ್ಲ ಸಾಧ್ಯ ಬೆಂಬಲ ನೀಡುವುದಾಗಿ ತಿಳಿಸಿದ್ದೇನೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿರುವ ಜನರ ಕ್ಷೇಮಕ್ಕಾಗಿ ಮತ್ತು ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ.”, ಎಂದು ಪ್ರಧಾನಿ ಹೇಳಿದ್ದಾರೆ.



(Release ID: 1543483) Visitor Counter : 67