ಸಂಪುಟ

ಕೇಂದ್ರೀಯ ವಿಶ್ವವಿದ್ಯಾಲಯಗಳ ಕಾಯಿದೆ 2009ರಡಿಯಲ್ಲಿ ಬಿಹಾರ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ (ಎರಡು), ಜಾರ್ಖಂಡ್, ಕರ್ನಾಟಕ, ಕೇರಳ, ಒಡಿಶಾ, ಪಂಜಾಬ್, ರಾಜಸ್ಥಾನ ಮತ್ತು ತಮಿಳುನಾಡು ರಾಜ್ಯಗಳಲ್ಲಿ 13 ಹೊಸ ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಪರಿಷ್ಕೃತ ವೆಚ್ಚದ ಅಂದಾಜಿಗೆ (ಆರ್.ಸಿ.ಇ.) ಸಂಪುಟದ ಅನುಮೋದನೆ

Posted On: 16 JAN 2019 4:05PM by PIB Bengaluru

ಕೇಂದ್ರೀಯ ವಿಶ್ವವಿದ್ಯಾಲಯಗಳ ಕಾಯಿದೆ 2009ರಡಿಯಲ್ಲಿ ಬಿಹಾರ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ (ಎರಡು), ಜಾರ್ಖಂಡ್, ಕರ್ನಾಟಕ, ಕೇರಳ, ಒಡಿಶಾ, ಪಂಜಾಬ್, ರಾಜಸ್ಥಾನ ಮತ್ತು ತಮಿಳುನಾಡು ರಾಜ್ಯಗಳಲ್ಲಿ 13 ಹೊಸ ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಪರಿಷ್ಕೃತ ವೆಚ್ಚದ ಅಂದಾಜಿಗೆ (ಆರ್.ಸಿ.ಇ.) ಸಂಪುಟದ ಅನುಮೋದನೆ 
 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, 13 ಹೊಸ ಕೇಂದ್ರೀಯ ವಿಶ್ವವಿದ್ಯಾಲಯಗಳ ಕ್ಯಾಂಪಸ್ ಪೂರ್ಣಗೊಳಿಸಲು ಮರುಕಳಿಸುವ ವೆಚ್ಚ ಮತ್ತು ಅಗತ್ಯ ಮೂಲಭೂತ ಸೌಕರ್ಯಗಳ ಸೃಷ್ಟಿಗಾಗಿ 3639.32 ಕೋಟಿ ರೂಪಾಯಿಗಳ ಪರಿಷ್ಕೃತ ವೆಚ್ಚದ ಅಂದಾಜಿಗೆ ತನ್ನ ಅನುಮೋದನೆ ನೀಡಿದೆ. ಈ ಕಾಮಗಾರಿಗಳು 36 ತಿಂಗಳುಗಳ ಅವಧಿಯಲ್ಲಿ ಪೂರ್ಣಗೊಳ್ಳಲಿವೆ. 

ಅಲ್ಲದೆ ಸಂಪುಟವು ಈ ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಈ ಹಿಂದೆ ಅನುಮೋದಿಸಿದ್ದ 3000 ಕೋಟಿ ರೂಪಾಯಿಗಿಂತ ಮಿಗಿಲಾಗಿ ವೆಚ್ಚ ಮಾಡಲು 1474.65 ಕೋಟಿ ರೂಪಾಯಿಗಳ ಮೊತ್ತಕ್ಕೆ ತನ್ನ ಪೂರ್ವಾನ್ವಯ ಅನುಮತಿ ನೀಡಿದೆ. 

ಬಿಹಾರ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ (ಎರಡು), ಜಾರ್ಖಂಡ್, ಕರ್ನಾಟಕ, ಕೇರಳ, ಒಡಿಶಾ, ಪಂಜಾಬ್, ರಾಜಸ್ಥಾನ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಹೊಸ ಕೇಂದ್ರೀಯ ವಿಶ್ವವಿದ್ಯಾಲಯಗಳನ್ನು ಕೇಂದ್ರೀಯ ವಿಶ್ವವಿದ್ಯಾಲಯಗಳ ಕಾಯಿದೆ 2009ರಡಿಯಲ್ಲಿ ಸ್ಥಾಪಿಸಲಾಗುವುದು. ಇವುಗಳಲ್ಲಿ ಈ ಕೆಳಗಿನವು ಸೇರಿವೆ:

i. ದಕ್ಷಿಣ ಬಿಹಾರದ ಕೇಂದ್ರೀಯ ವಿಶ್ವವಿದ್ಯಾಲಯ, ಗಯಾ, ಬಿಹಾರ್

ii. ಹರಿಯಾಣದ ಕೇಂದ್ರೀಯ ವಿಶ್ವವಿದ್ಯಾಲಯ, ಮಹೇಂದ್ರಗರ್

iii. ಜಮ್ಮುವಿನ ಕೇಂದ್ರೀಯ ವಿಶ್ವವಿದ್ಯಾಲಯ, ಜಮ್ಮು

iv. ಜಾರ್ಖಂಡ್ ನ ಕೇಂದ್ರೀಯ ವಿಶ್ವವಿದ್ಯಾಲಯ, ರಾಂಚಿ

v. ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯ, ಶ್ರೀನಗರ

vi. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಗುರ್ಲರ್ಗಾ

vii. ಕೇರಳದ ಕೇಂದ್ರೀಯ ವಿಶ್ವವಿದ್ಯಾಲಯ, ಕಾಸರಗೋಡು

viii. ಒಡಿಶಾ ಕೇಂದ್ರೀಯ ವಿಶ್ವವಿದ್ಯಾಲಯ, ಕೋರಾಪುಟ್

ix. ಪಂಜಾಬ್ ಕೇಂದ್ರೀಯ ವಿಶ್ವವಿದ್ಯಾಲಯ, ಭಟಿಂಡಾ

x. ರಾಜಸ್ಥಾನ ಕೇಂದ್ರೀಯ ವಿಶ್ವವಿದ್ಯಾಲಯ, ಬಂದೇರ್ ಸಿಂದ್ರಿ, ರಾಜಸ್ಥಾನ 

xi. ತಮಿಳುನಾಡು ಕೇಂದ್ರೀಯ ವಿಶ್ವವಿದ್ಯಾಲಯ, ತಿರುವಾರೂರ್ 

xii. ಗುಜರಾತ್ ಕೇಂದ್ರೀಯ ವಿಶ್ವವಿದ್ಯಾಲಯ, ಗುಜರಾತ್

xiii. ಹಿಮಾಚಲ ಪ್ರದೇಶ ಕೇಂದ್ರೀಯ ವಿಶ್ವವಿದ್ಯಾಲಯ ಪರಿಣಾಮ: 

ಇವು ಉನ್ನತ ಶಿಕ್ಷಣದ ಪ್ರವೇಶಾವಕಾಶ ಹೆಚ್ಚಿಸಲಿವೆ ಮತ್ತು ಇತರ ವಿಶ್ವವಿದ್ಯಾಲಯಗಳಿಗೆ ಅನುಕರಣೀಯವಾದ ಗುಣಮಟ್ಟವನ್ನು ರೂಪಿಸುತ್ತವೆ. ಶೈಕ್ಷಣಿಕ ಸೌಲಭ್ಯದಲ್ಲಿ ಪ್ರಾದೇಶಿಕ ಅಸಮತೋಲನವನ್ನು ತಗ್ಗಿಸಲು ಇದು ನೆರವಾಗಲಿದೆ.
 

***



(Release ID: 1560276) Visitor Counter : 95