ಪ್ರಧಾನ ಮಂತ್ರಿಯವರ ಕಛೇರಿ

ವಿಜ್ಞಾನ ಮತ್ತು ತಂತ್ರಜ್ಞಾನಕ್ಕಾಗಿ ನಾಳೆ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ ಪ್ರದಾನ ಮಾಡಲಿರುವ ಪ್ರಧಾನಮಂತ್ರಿ

Posted On: 27 FEB 2019 6:53PM by PIB Bengaluru

ವಿಜ್ಞಾನ ಮತ್ತು ತಂತ್ರಜ್ಞಾನಕ್ಕಾಗಿ ನಾಳೆ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ ಪ್ರದಾನ ಮಾಡಲಿರುವ ಪ್ರಧಾನಮಂತ್ರಿ



ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಅಂದರೆ 2019ರ ಫೆಬ್ರವರಿ 28ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ವಿಜ್ಞಾನ ಮತ್ತು ತಂತ್ರಜ್ಞಾನಕ್ಕಾಗಿ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. 

ಪ್ರಧಾನಮಂತ್ರಿಯವರು ಪ್ರಶಸ್ತಿ ವಿಜೇತರಿಗೆ 2016, 2017 ಮತ್ತು 2018ನೇ ಸಾಲಿನ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿಯನ್ನು ವಿಜ್ಞಾನ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿಯ ಸ್ಥಾಪಕ ನಿರ್ದೇಶಕ ಡಾ. ಶಾಂತಿ ಸ್ವರೂಪ್ ಭಟ್ನಾಗರ್ ಅವರ ಹೆಸರಿನಲ್ಲಿ ನೀಡಲಾಗುತ್ತಿದೆ. ವಿಜ್ಞಾನ ಮತ್ತು ತಂತ್ರಜ್ಞಾನದ ವಿವಿಧ ರಂಗದಲ್ಲಿ ಭಾರತೀಯರ ಅನುಪಮ ಸೇವೆಗಾಗಿ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತದೆ.
 

***



(Release ID: 1566585) Visitor Counter : 185