ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ವೈದ್ಯಕೀಯ ಉತ್ಪನ್ನಗಳ ನಿಯಂತ್ರಣ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಮತ್ತು ಅರ್ಜೆಂಟೀನಾ ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟದ ಅನುಮೋದನೆ 

ಪ್ರಕಟಣಾ ದಿನಾಂಕ: 28 FEB 2019 11:05PM by PIB Bengaluru

ವೈದ್ಯಕೀಯ ಉತ್ಪನ್ನಗಳ ನಿಯಂತ್ರಣ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಮತ್ತು ಅರ್ಜೆಂಟೀನಾ ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟದ ಅನುಮೋದನೆ 
 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ಅರ್ಜೆಂಟೀನಾ ನಡುವೆ ಆಗಿರುವ ವೈದ್ಯಕೀಯ ಉತ್ಪನ್ನಗಳ ನಿಯಂತ್ರಣ ಕ್ಷೇತ್ರದಲ್ಲಿನ ಸಹಕಾರ ಕುರಿತ ತಿಳಿವಳಿಕೆ ಒಪ್ಪಂದಕ್ಕೆ ತನ್ನ ಪೂರ್ವಾನ್ವಯ ಅನುಮೋದನೆ ನೀಡಿದೆ. 

ಪ್ರಯೋಜನಗಳು: 

ಈ ಅನುಮೋದನೆಯು ಎರಡೂ ದೇಶಗಳ ನಡುವೆ ನಿಯಂತ್ರಣ ವಿಷಯಗಳನ್ನು ಚೆನ್ನಾಗಿ ಅರ್ಥೈಸಿಕೊಳ್ಳಲು ಅವಕಾಶ ನೀಡುತ್ತದೆ ಮತ್ತು ಅರ್ಜೆಂಟೀನಾಕ್ಕೆ ಭಾರತದಿಂದ ವೈದ್ಯಕೀಯ ಉತ್ಪನ್ನಗಳ ರಫ್ತನ್ನು ಹೆಚ್ಚಿಸುತ್ತದೆ ಹಾಗೂ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಉತ್ತಮ ಸಹಯೋಗ ಮೂಡಿಸುತ್ತದೆ. 


(ಪ್ರಕಟಣೆ ಐ.ಡಿ.: 1566982) ವಿಸಿಟರ್ ಕೌಂಟರ್ : 81
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Tamil