ಪ್ರಧಾನ ಮಂತ್ರಿಯವರ ಕಛೇರಿ

ಐದನೇ ಭಾರತ ಅಂತರರಾಷ್ಟ್ರೀಯ ವಿಜ್ಞಾನ ಉತ್ಸವವನ್ನು ಇಂದು ಪ್ರಧಾನಿ ಉದ್ಘಾಟಿಸಲಿದ್ದಾರೆ

Posted On: 05 NOV 2019 3:02PM by PIB Bengaluru

ಐದನೇ ಭಾರತ ಅಂತರರಾಷ್ಟ್ರೀಯ ವಿಜ್ಞಾನ ಉತ್ಸವವನ್ನು ಇಂದು ಪ್ರಧಾನಿ ಉದ್ಘಾಟಿಸಲಿದ್ದಾರೆ
 

ಐದನೇ ಭಾರತ ಅಂತರರಾಷ್ಟ್ರೀಯ ವಿಜ್ಞಾನ ಉತ್ಸವವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಸಂಜೆ 4:00 ಗಂಟೆಗೆ ಉದ್ಘಾಟಿಸಲಿದ್ದಾರೆ. ಕೋಲ್ಕತ್ತಾದಲ್ಲಿ ನಡೆಯುವ ಸಭೆಯನ್ನುದ್ದೇಶಿಸಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಜನರಲ್ಲಿ ವೈಜ್ಞಾನಿಕ ಮನೋಭಾವವನ್ನು ಹುಟ್ಟುಹಾಕುವುದು, ಎಸ್ & ಟಿ ಕ್ಷೇತ್ರದಲ್ಲಿ ಭಾರತದ ಕೊಡುಗೆಯನ್ನು ಪ್ರದರ್ಶಿಸುವುದು ಮತ್ತು ಜನರಿಗೆ ಅದರ ಪ್ರಯೋಜನಗಳನ್ನು ತಲುಪಿಸಲು ಪ್ರೋತ್ಸಾಹಿಸುವುದು ಉತ್ಸವದ ಮುಖ್ಯ ಉದ್ದೇಶವಾಗಿದೆ. ಇದು ವಿಜ್ಞಾನ ಮತ್ತು ತಂತ್ರಜ್ಞಾನದ ಅಂತರ್ಗತ ಪ್ರಗತಿಗೆ ತಂತ್ರವನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ.

ಈ ವರ್ಷದ ಉತ್ಸವದ ವಿಷಯ ರೈಸನ್ ಇಂಡಿಯಾ (RISEN India) ಸಂಶೋಧನೆ, ನಾವೀನ್ಯತೆ ಮತ್ತು ವಿಜ್ಞಾನದಿಂದ ಸಬಲೀಕರಣಗೊಳ್ಳುವ ರಾಷ್ಟ್ರ - ಭಾರತ



(Release ID: 1592627) Visitor Counter : 92