ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಸ್ಕಾಟ್ ಮಾರಿಸನ್ ಅವರೊಂದಿಗೆ ದೂರವಾಣಿ ಸಮಾಲೋಚನೆ

Posted On: 03 JAN 2020 7:30PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಸ್ಕಾಟ್ ಮಾರಿಸನ್ ಅವರೊಂದಿಗೆ ದೂರವಾಣಿ ಸಮಾಲೋಚನೆ

  

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರುಇಂದು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಸ್ಕಾಟ್ ಮಾರಿಸನ್ ಅವರೊಂದಿಗೆ ದೂರವಾಣಿ ಸಮಾಲೋಚನೆ ನಡೆಸಿದರು.

ಪ್ರಧಾನಮಂತ್ರಿ ಮೋದಿ ಅವರುಭಾರೀ ಹಾಗೂ ನಿರಂತರ ಕಾಡ್ಗಿಚ್ಚಿನಿಂದಾಗಿ ಆಸ್ಟ್ರೇಲಿಯಾದಲ್ಲಿ ಆಗಿರುವ ಜೀವ ಹಾಗೂ ಆಸ್ತಿ-ಪಾಸ್ತಿ ನಷ್ಟಕ್ಕೆ ಭಾರತೀಯರ ಪರವಾಗಿ ತಮ್ಮ ಹೃದಯಪೂರ್ವಕ ಸಂತಾಪವನ್ನು ತಿಳಿಸಿದರುಅವರು ಅನಿರೀಕ್ಷಿತ ನೈಸರ್ಗಿಕ ಪ್ರಕೋಪವನ್ನು ಧೈರ್ಯದಿಂದ ಎದುರಿಸುತ್ತಿರುವ  ಆಸ್ಟ್ರೇಲಿಯಾದ ಜನತೆಗೆಭಾರತ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ದ್ವಿಪಕ್ಷೀಯ ಸಂಬಂಧಗಳು ವೃದ್ಧಿಯಾಗುತ್ತಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಮೋದಿ ಅವರುಆಸ್ಟ್ರೇಲಿಯಾ ಜೊತೆಗಿನ ಕಾರ್ಯತಂತ್ರ ಪಾಲುದಾರಿಕೆ ಸಂಬಂಧ ಬಲವರ್ಧನೆಗೆ ಭಾರತ ಬದ್ಧವಿದೆ ಎಂದು ಪುನರುಚ್ಚರಿಸಿದರುಭಾರತದ ಕಡೆಯಿಂದ ತಾವು ಪರಸ್ಪರ ಸೂಕ್ತ ಸಂದರ್ಭದಲ್ಲಿ ಆದಷ್ಟು ಶೀಘ್ರ ಭಾರತಕ್ಕೆ ಭೇಟಿ ನೀಡಲಿರುವ ಆಸ್ಟ್ರೇಲಿಯಾದ ಪ್ರಧಾನಮಂತ್ರಿಗಳನ್ನು ಸ್ವಾಗತಿಸಲು ತಾವು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.

ಪ್ರಧಾನಮಂತ್ರಿ ಮಾರಿಸನ್ ಮತ್ತು ಆಸ್ಟ್ರೇಲಿಯಾದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ 2020ನೇ ವರ್ಷದ ಶುಭಾಶಯ ಕೋರಿದರು.

 

******




(Release ID: 1598435) Visitor Counter : 95