ಸಂಪುಟ

ಭಾರತ ಮತ್ತು ಫ್ರಾನ್ಸ್ ನಡುವಿನ ವಲಸೆ ಮತ್ತು ಸಂಚಾರ ಪಾಲುದಾರಿಕೆ ಒಪ್ಪಂದಕ್ಕೆ ಸಂಪುಟದ ಅನುಮೋದನೆ

Posted On: 08 JAN 2020 3:13PM by PIB Bengaluru

ಭಾರತ ಮತ್ತು ಫ್ರಾನ್ಸ್ ನಡುವಿನ ವಲಸೆ ಮತ್ತು ಸಂಚಾರ ಪಾಲುದಾರಿಕೆ ಒಪ್ಪಂದಕ್ಕೆ ಸಂಪುಟದ ಅನುಮೋದನೆ

 

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಭಾರತ ಮತ್ತು ಫ್ರಾನ್ಸ್ ನಡುವಿನ ವಲಸೆ ಮತ್ತು ಸಂಚಾರ ಸಹಭಾಗಿತ್ವ ಒಪ್ಪಂದಕ್ಕೆ ಅನುಮೋದನೆ ನೀಡಿದೆ. ಫ್ರೆಂಚ್ ಅಧ್ಯಕ್ಷರ ಭಾರತ ಭೇಟಿಯ ಸಂದರ್ಭದಲ್ಲಿ ಮಾರ್ಚ್, 2018 ರಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು.

ಒಪ್ಪಂದವು ಜನರ ನಡುವಿನ ಸಂಪರ್ಕಗಳನ್ನು ಹೆಚ್ಚಿಸುವಲ್ಲಿ, ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು, ಸಂಶೋಧಕರು ಮತ್ತು ನುರಿತ ವೃತ್ತಿಪರರ ಸಂಚಾರವನ್ನು ಹೆಚ್ಚಿಸುವಲ್ಲಿ ಮತ್ತು ಎರಡೂ ಕಡೆಯ ಅನಿಯಮಿತ ವಲಸೆ ಮತ್ತು ಮಾನವ ಕಳ್ಳಸಾಗಣೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಹಕಾರವನ್ನು ಬಲಪಡಿಸುವ ಪ್ರಮುಖ ಮೈಲಿಗಲ್ಲಾಗಿದೆ. ಒಪ್ಪಂದವು ಫ್ರಾನ್ಸ್ನೊಂದಿಗೆ ಬೆಳೆಯುತ್ತಿರುವ ಭಾರತದ ಬಹುಮುಖಿ ಸಂಬಂಧಕ್ಕೆ ಸಾಕ್ಷಿಯಾಗಿದೆ ಮತ್ತು ಇದು ಎರಡೂ ದೇಶಗಳ ನಡುವೆ ಹೆಚ್ಚುತ್ತಿರುವ ನಂಬಿಕೆ, ವಿಶ್ವಾಸಕ್ಕೆ ಸಂಕೇತವಾಗಿದೆ.

ಒಪ್ಪಂದವು ಆರಂಭದಲ್ಲಿ ಏಳು ವರ್ಷಗಳ ಅವಧಿಯದ್ದಾಗಿರುತ್ತದೆ. ಜಂಟಿ ಕಾರ್ಯ ಸಮೂಹದ ಮೂಲಕ ಸ್ವಯಂಚಾಲಿತ ನವೀಕರಣ ಮತ್ತು ಮೇಲ್ವಿಚಾರಣಾ ಕಾರ್ಯವಿಧಾನವನ್ನು ಒಳಗೊಂಡಿರುತ್ತದೆ.



(Release ID: 1598768) Visitor Counter : 108