ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ

ತೈಲ ಮತ್ತು ನೈಸರ್ಗಿಕ ಅನಿಲ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಮತ್ತು ಬ್ರೆಜಿಲ್ ನಡುವಿನ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟದ ಅನುಮೋದನೆ

ಪ್ರಕಟಣಾ ದಿನಾಂಕ: 22 JAN 2020 3:37PM by PIB Bengaluru

ತೈಲ ಮತ್ತು ನೈಸರ್ಗಿಕ ಅನಿಲ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಮತ್ತು ಬ್ರೆಜಿಲ್ ನಡುವಿನ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟದ ಅನುಮೋದನೆ

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಗಣರಾಜ್ಯ ಮತ್ತು ಬ್ರೆಜಿಲ್ ಒಕ್ಕೂಟ ಗಣರಾಜ್ಯದ ನಡುವೆ ತೈಲ ಮತ್ತು ನೈಸರ್ಗಿಕ ಅನಿಲ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದಕ್ಕೆ ಅಂಕಿತ ಹಾಕಲು ತನ್ನ ಅನುಮೋದನೆ ನೀಡಿದೆ.

ಈ ತಿಳಿವಳಿಕೆ ಒಪ್ಪಂದವು ತೈಲ ಮತ್ತು ನೈಸರ್ಗಿಕ ಅನಿಲ ಕ್ಷೇತ್ರದಲ್ಲಿ ಎರಡೂ ರಾಷ್ಟ್ರಗಳ ಸಹಕಾರವನ್ನು ಹೆಚ್ಚಿಸಲಿದೆ. ಈ ತಿಳಿವಳಿಕೆ ಒಪ್ಪಂದದ ಅಡಿಯಲ್ಲಿ, ಬ್ರೆಜಿಲ್ ಮತ್ತು ಭಾರತದಲ್ಲಿ ಇ ಮತ್ತು ಪಿ ಉಪಕ್ರಮಗಳಲ್ಲಿ ಸಹಕಾರವನ್ನು ಸ್ಥಾಪಿಸಲು, ಈ ವಲಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ, ಬ್ರೆಜಿಲ್, ಭಾರತ ಮತ್ತು ಮೂರನೇ ರಾಷ್ಟ್ರಗಳಲ್ಲಿ ದ್ರವೀಕೃತ ನೈಸರ್ಗಿಕ ಅನಿಲ ಯೋಜನೆಗಳಲ್ಲಿ ಸಹಯೋಗವನ್ನು ಅನ್ವೇಷಿಸಲು, ಮತ್ತು ಇಂಧನ ದಕ್ಷತೆ, ಇಂಧನ ಸಂಶೋಧನ ಮತ್ತು ಅಭಿವೃದ್ಧಿ ಹಾಗೂ ಪ್ರಾದೇಶಿಕ ಇಂಧನ ಮೂಲಸೌಕರ್ಯ ಜಾಲಗಳ ವಿಸ್ತರಣೆ ಸೇರಿದಂತೆ ಇಂಧನ ನೀತಿಗಳೊಂದಿಗೆ ತೈಲ ಇಂಧನ ಹಾಗೂ ಪರಿಸರ ವಿಷಯಗಳ ಸಹಯೋಗವನ್ನು ಉತ್ತೇಜಿಸಲು ಎರಡೂ ರಾಷ್ಟ್ರಗಳು ಒಗ್ಗೂಡಿ ಕೆಲಸ ಮಾಡಲಿದ್ದಾರೆ.

ಈ ತಿಳಿವಳಿಕೆ ಒಪ್ಪಂದಕ್ಕೆ ಈ ಮಾಸಾಂತ್ಯದಲ್ಲಿ ಬ್ರೆಜಿಲ್ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಅಂಕಿತ ಹಾಕುವ ನಿರೀಕ್ಷೆ ಇದೆ.

*******


(ಪ್ರಕಟಣೆ ಐ.ಡಿ.: 1600128) ವಿಸಿಟರ್ ಕೌಂಟರ್ : 179
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Tamil , Telugu