ಪ್ರಧಾನ ಮಂತ್ರಿಯವರ ಕಛೇರಿ

ಜಮ್ಮು ಮತ್ತು ಕಾಶ್ಮೀರ ಜನತೆಯ ಮೇಲಿನ ನಂಬಿಕೆಯಿಂದ ಸರ್ಕಾರ  370 ನೇ ವಿಧಿ ರದ್ದು ಮಾಡಿತು  

Posted On: 06 FEB 2020 5:07PM by PIB Bengaluru

ಜಮ್ಮು ಮತ್ತು ಕಾಶ್ಮೀರ ಜನತೆಯ ಮೇಲಿನ ನಂಬಿಕೆಯಿಂದ ಸರ್ಕಾರ  370 ನೇ ವಿಧಿ ರದ್ದು ಮಾಡಿತು  

ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನ ಮಂತ್ರಿಯವರ ಉತ್ತರ

 

370 ನೇ ವಿಧಿ ರದ್ದತಿಯು ಜಮ್ಮು ಮತ್ತು ಕಾಶ್ಮೀರವನ್ನು ದೇಶದ ಇತರ ಭಾಗಗಳೊಂದಿಗೆ ಸಂಪೂರ್ಣವಾಗಿ ಸೇರಿಸಲು ಕಾರಣವಾಗಿದೆ ಎಂದು ಪ್ರಧಾನಿ ಹೇಳಿದರು.

ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದ ಅವರು ಜಮ್ಮು ಮತ್ತು ಕಾಶ್ಮೀರ ಭಾರತದ ಕಿರೀಟ ಎಂದು ಬಣ್ಣಿಸಿದರು. ಎಲ್ಲಾ ಧರ್ಮಗಳ ಬಗೆಗಿನ ಸಮಾನತಾ ಮನೋಭಾವ ಮತ್ತು ಸೂಫಿ ಸಂಪ್ರದಾಯ ಜಮ್ಮು ಮತ್ತು ಕಾಶ್ಮೀರದ ನಿಜವಾದ ಗುರುತಾಗಿದೆ ಎಂದು ಪ್ರಧಾನಿ ಹೇಳಿದರು.

ಬಂದೂಕು, ಬಾಂಬ್, ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಕ್ಕೆ ಹೆಸರಿಸುತ್ತಿದ್ದ ಜಮ್ಮು ಮತ್ತು ಕಾಶ್ಮೀರವನ್ನು ಹಿಂದುಳಿಯಲು ಬಿಡುವುದಿಲ್ಲ. ಎಂದು ಪ್ರಧಾನಿ ಹೇಳಿದರು.

1990 ರ ಜನವರಿ 19 ರ ಘಟನೆಯ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿಯವರು, ಜಮ್ಮು ಮತ್ತು ಕಾಶ್ಮೀರದಿಂದ ಹೊರಹಾಕಲ್ಪಟ್ಟಿದ್ದರಿಂದ ಹಲವಾರು ಜನರು ತಮ್ಮ ಗುರುತನ್ನು ಕಳೆದುಕೊಳ್ಳಬೇಕಾಯಿತು ಎಂದರು.

ಪ್ರಧಾನ ಮಂತ್ರಿಯವರು ತಮ್ಮ ಸುದೀರ್ಘ ಉತ್ತರದಲ್ಲಿ, ಈ ಪ್ರದೇಶವನ್ನು ಬಾಧಿಸುತ್ತಿರುವ ಪರಿಸ್ಥಿತಿಯ ಬಗ್ಗೆ ಪ್ರಸ್ತಾಪಿಸಿದರು. ಸಂವಿಧಾನದ 370 ನೇ ವಿಧಿಯನ್ನು ಜಮ್ಮು ಮತ್ತು ಕಾಶ್ಮೀರದ ಜನರ ಮೇಲಿನ ಸಂಪೂರ್ಣ ನಂಬಿಕೆಯೊಂದಿಗೆ ರದ್ದುಪಡಿಸಲಾಗಿದೆ ಮತ್ತು ಈ ಪ್ರದೇಶದ ಅಭಿವೃದ್ಧಿಯು ಈಗ ವೇಗ ಪಡೆದುಕೊಂಡಿದೆ ಎಂದು ಹೇಳಿದರು.

ಈ ಪ್ರದೇಶದ ಮೇಲೆ ವಿಧಿಸಲಾದ ನಿರ್ಬಂಧಗಳನ್ನು ತೆಗೆದುಹಾಕಲಾಗುತ್ತಿದೆ. ಕೇಂದ್ರ ಸಚಿವರು ಕೇಂದ್ರಾಡಳಿತ ಪ್ರದೇಶದ ವಿವಿಧ ಭಾಗಗಳಿಗೆ ಹೋಗುತ್ತಿದ್ದಾರೆ ಮತ್ತು ಜನರಿಂದ ನೇರವಾಗಿ ಅಹವಾಲುಗಳನ್ನು ಆಲಿಸುತ್ತಿದ್ದಾರೆ. ಜನರ ಅಹವಾಲುಗಳ ಮೇಲೆ ಸರ್ಕಾರ ಖಂಡಿತವಾಗಿಯೂ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಜನರ ಕಲ್ಯಾಣಕ್ಕಾಗಿ ಮತ್ತು ಅದರ ಸರ್ವತೋಮುಖ ಅಭಿವೃದ್ಧಿಗೆ ಕೆಲಸ ಮಾಡಲು ತಮ್ಮ ಸರ್ಕಾರ  ಬದ್ಧವಾಗಿದೆ ಎಂದು ಪ್ರಧಾನಿ ಹೇಳಿದರು.

ಲಡಾಖ್ ಅನ್ನು ಇಂಗಾಲ ರಹಿತ ಕೇಂದ್ರಾಡಳಿತ ಪ್ರದೇಶವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರಧಾನಿ ಹೇಳಿದರು.

***


(Release ID: 1602255) Visitor Counter : 256