ಪ್ರಧಾನ ಮಂತ್ರಿಯವರ ಕಛೇರಿ
ಅಮೆರಿಕ ಅಧ್ಯಕ್ಷ ಮತ್ತು ಪ್ರಥಮ ಮಹಿಳೆ: ಭಾರತ ಭೇಟಿ
Posted On:
11 FEB 2020 10:03AM by PIB Bengaluru
ಅಮೆರಿಕ ಅಧ್ಯಕ್ಷ ಮತ್ತು ಪ್ರಥಮ ಮಹಿಳೆ: ಭಾರತ ಭೇಟಿ
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಅಮೆರಿಕದ ಅಧ್ಯಕ್ಷ ಘನತೆವೆತ್ತ ಡೊನಾಲ್ಡ್ ಜೆ. ಟ್ರಂಪ್ ಹಾಗು ಅಮೆರಿಕದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಜತೆ ಭಾರತಕ್ಕೆ 2020 ಫೆಬ್ರವರಿ 24 ಮತ್ತು 25ರಂದು ಭೇಟಿ ನೀಡಲಿದ್ದಾರೆ.
ಈ ಭೇಟಿಯ ಸಂದರ್ಭದಲ್ಲಿ ಅಧ್ಯಕ್ಷ ಟ್ರಂಪ್ ಮತ್ತು ಮೆಲಾನಿಯಾ ಅವರು ನವದೆಹಲಿ ಹಾಗೂ ಗುಜರಾತಿನ ಅಹಮದಾಬಾದ್ ನಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಹಲವರ ಜತೆ ಸಮಾಲೋಚನೆ ನಡೆಸಲಿದ್ದಾರೆ.
ಭಾರತ ಮತ್ತು ಅಮೆರಿಕದ ಜಾಗತಿಕ ಸಹಭಾಗಿತ್ವ ವಿಶ್ವಾಸವು ಮೌಲ್ಯಗಳು, ಪರಸ್ಪರ ಗೌರವದ ಮೇಲೆ ಅವಲಂಬಿತವಾಗಿದೆ. ಜತೆಗೆ, ಉಭಯ ದೇಶಗಳ ಜನರ ಸ್ನೇಹ ಮತ್ತು ಪರಸ್ಪರ ಗೌರವದ ಮೇಲೆ ಅವಲಂಬಿತವಾಗಿದೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ಅವರ ನಾಯಕತ್ವದಲ್ಲಿ ಈ ಸಂಬಂಧವು ಮತ್ತಷ್ಟು ವೃದ್ಧಿಯಾಗಿದೆ. ವ್ಯಾಪಾರ, ರಕ್ಷಣೆ, ಭಯೋತ್ಪಾದನೆ ನಿಗ್ರಹ, ಇಂಧನ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳು ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲಾಗಿದೆ. ಅಮೆರಿಕ ಅಧ್ಯಕ್ಷರ ಭಾರತ ಭೇಟಿಯಿಂದ ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳನ್ನು ಪರಾಮರ್ಶಿಸಲು ಮತ್ತು ಸಹಭಾಗಿತ್ವವನ್ನು ವೃದ್ಧಿಸಲು ಅನುಕೂಲವಾಗುತ್ತದೆ.
***
(Release ID: 1602742)
Visitor Counter : 228