ಪ್ರಧಾನ ಮಂತ್ರಿಯವರ ಕಛೇರಿ

ಕೊರೊನಾ ವೈರಸ್ ವಿರುದ್ಧ ಹೋರಾಡಲು ಕಾರ್ಯತಂತ್ರ ರೂಪಿಸುವಂತೆ ಸಾರ್ಕ್ ರಾಷ್ಟ್ರಗಳಿಗೆ ಪ್ರಧಾನಿ ಕರೆ

Posted On: 13 MAR 2020 1:51PM by PIB Bengaluru

ಕೊರೊನಾ ವೈರಸ್ ವಿರುದ್ಧ ಹೋರಾಡಲು ಕಾರ್ಯತಂತ್ರ ರೂಪಿಸುವಂತೆ ಸಾರ್ಕ್ ರಾಷ್ಟ್ರಗಳಿಗೆ ಪ್ರಧಾನಿ ಕರೆ

 

ಕೊರೊನಾ ವೈರಸ್ ವಿರುದ್ಧ ಹೋರಾಡಲು ಬಲವಾದ ಕಾರ್ಯತಂತ್ರವನ್ನು ರೂಪಿಸುವಂತೆ  ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸಾರ್ಕ್ ರಾಷ್ಟ್ರಗಳಿಗೆ ಕರೆ ನೀಡಿದ್ದಾರೆ. ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ತಂತ್ರಗಳನ್ನು ಚರ್ಚಿಸಬಹುದು ಮತ್ತು ಸಾರ್ಕ್ ರಾಷ್ಟ್ರಗಳು ಒಟ್ಟಾಗಿ ಜಗತ್ತಿಗೆ ಒಂದು ಮಾದರಿಯಾಗಬಹುದು  ಮತ್ತು ಆರೋಗ್ಯಕರ ಗ್ರಹಕ್ಕೆ ಕೊಡುಗೆ ನೀಡಬಹುದು ಎಂದು ಅವರು ಸಲಹೆ ನೀಡಿದ್ದಾರೆ.

ಗಮನಾರ್ಹ ಪ್ರಮಾಣದ ಜಾಗತಿಕ ಜನಸಂಖ್ಯೆಯನ್ನು ಹೊಂದಿರುವ ದಕ್ಷಿಣ ಏಷ್ಯಾವು ತನ್ನ ಜನರ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಧಾನಿ ಸರಣಿ ಟ್ವೀಟ್ಗಳಲ್ಲಿ ಹೇಳಿದ್ದಾರೆ. COVID-19 ಕೊರೊನಾ ವೈರಸ್ ಎದುರಿಸಲು ಸರ್ಕಾರವು ವಿವಿಧ ಹಂತಗಳಲ್ಲಿ ಉತ್ತಮ ಪ್ರಯತ್ನವನ್ನು ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

 

@narendramodi

ನಮ್ಮ ಗ್ರಹವು COVID-19 ಕೊರೊನಾ ವೈರಸ್ ನೊಂದಿಗೆ ಹೋರಾಡುತ್ತಿದೆ. ವಿವಿಧ ಹಂತಗಳಲ್ಲಿ, ಸರ್ಕಾರಗಳು ಮತ್ತು ಜನರು ಇದನ್ನು ಎದುರಿಸಲು ತಮ್ಮ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದಾರೆ.

ಜಾಗತಿಕ ಜನಸಂಖ್ಯೆಯ ಗಮನಾರ್ಹ ಪ್ರಮಾಣದ ನೆಲೆಯಾಗಿರುವ ದಕ್ಷಿಣ ಏಷ್ಯಾವು, ನಮ್ಮ ಜನರು ಆರೋಗ್ಯವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು.

 

@narendramodi

ಕೊರೊನಾ ವೈರಸ್ ವಿರುದ್ಧ ಹೋರಾಡಲು ಸಾರ್ಕ್ ರಾಷ್ಟ್ರಗಳ ನಾಯಕತ್ವ ಬಲವಾದ ಕಾರ್ಯತಂತ್ರವನ್ನು ರೂಪಿಸಬೇಕು ಎಂದು ನಾನು ಪ್ರಸ್ತಾಪಿಸಲು ಬಯಸುತ್ತೇನೆ.

ನಮ್ಮ ನಾಗರಿಕರನ್ನು ಆರೋಗ್ಯವಾಗಿಡುವ ಮಾರ್ಗಗಳನ್ನು ನಾವು ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಚರ್ಚಿಸಬಹುದು.

ನಾವು ಒಟ್ಟಾಗಿ, ಜಗತ್ತಿಗೆ ಒಂದು ಮಾದರಿಯಾಗಬಹುದು ಮತ್ತು ಆರೋಗ್ಯಕರ ಗ್ರಹಕ್ಕೆ ಕೊಡುಗೆ ನೀಡಬಹುದು.

***



(Release ID: 1606278) Visitor Counter : 137