ಗೃಹ ವ್ಯವಹಾರಗಳ ಸಚಿವಾಲಯ
ಕೋವಿಡ್ – 19 ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ರಾಜ್ಯದ ಹೊರಗಿನಿಂದ ವಲಸೆ ಬಂದ ಕೆಲಸಗಾರರು, ವಿದ್ಯಾರ್ಥಿಗಳು ಮುಂತಾದವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಗೃಹ ಸಚಿವಾಲಯ ಸಲಹೆ
Posted On:
27 MAR 2020 3:16PM by PIB Bengaluru
ಕೋವಿಡ್ – 19 ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ರಾಜ್ಯದ ಹೊರಗಿನಿಂದ ವಲಸೆ ಬಂದ ಕೆಲಸಗಾರರು, ವಿದ್ಯಾರ್ಥಿಗಳು ಮುಂತಾದವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಗೃಹ ಸಚಿವಾಲಯ ಸಲಹೆ
ರಾಷ್ಟ್ರಾದ್ಯಂತ 21 ದಿನಗಳ ಕೋವಿಡ್ – 19 ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಬಂದ ಕೃಷಿ ಕಾರ್ಮಿಕರು, ಔದ್ಯೋಗಿಕ ಕೆಲಸಗಾರರು, ಮತ್ತು ಇತರ ಅಸಂಘಟಿತ ವಲಯದ ಕೆಲಸಗಾರರಿಗೆ ಆಹಾರ ಮತ್ತು ಆಶ್ರಯ, ಸೇರಿದಂತೆ ಎಲ್ಲ ಬಗೆಯ ನೆರವನ್ನು ಒದಗಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಗೃಹ ಸಚಿವಾಲಯದ ಕಾರ್ಯದರ್ಶಿಗಳು ಬರೆದಿದ್ದಾರೆ. ಅದೇ ರೀತಿ ಬೇರೆ ರಾಜ್ಯಗಳಿಂದ ಬಂದ ವಿದ್ಯಾರ್ಥಿಗಳು ಮತ್ತು ಉದ್ಯೋಗಸ್ಥ ಮಹಿಳೆಯರು ಮುಂತಾದವರನ್ನು ಅವರು ಇರುವ ಸ್ಥಳದಲ್ಲೇ ಇರುವುದನ್ನು ಮುಂದುವರಿಸುವುದನ್ನು ಖಚಿತಪಡಿಸುವಂತೆ ಕ್ರಮ ಕೈಗೊಳ್ಳಬೇಕೆಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದೆ.
ಅಸಂಘಟಿತ ವಲಯದ ಕಾರ್ಮಿಕರಿಗೆ ಅದರಲ್ಲೂ ವಿಶೇಷವಾಗಿ ಇಂಥ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಂತಹ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ಹಾಗೂ ಶುದ್ಧ ಕುಡಿಯುವ ನೀರು, ನೈರ್ಮಲ್ಯದಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು, ಎನ್ ಜಿ ಒ ಗಳು ಸೇರಿದಂತೆ ವಿವಿಧ ಜನ್ಸಿಗಳ ಮೂಲಕ ಕ್ರಮಗಳನ್ನು ಕೈಗೊಳ್ಳುವಂತೆ ಸಲಹಾ ಸಮೀತಿ ಸೂಚಿಸಿದೆ.
ಮುಂದೆ, ಉಚಿತ ಆಹಾರ ಧಾನ್ಯಗಳು ಮತ್ತು ಇತರ ಅವಶ್ಯಕ ವಸ್ತುಗಳನ್ನು ಪಿಡಿಎಸ್ ಹಾಗೂ ವಿತರಣಾ ವ್ಯವಸ್ಥೆಗಳ ಮೂಲಕ ನೀಡಲು ಸರ್ಕಾರ ತೆಗೆದುಕೊಳ್ಳುವ ಕ್ರಮಗಳ ಕುರಿತು ಈ ದುರ್ಬಲ ವರ್ಗದವರಿಗೆ ಜಾಗೃತಿ ಮೂಡಿಸಬೇಕೆಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಲಾಗಿದೆ. ಸಲಹಾ ಮಂಡಳಿ ಪ್ರಕಾರ ಇಂಥ ಜನರ ಓಡಾಟವನ್ನು ತಪ್ಪಿಸಲು ಇದು ಸಹಾಯ ಮಾಡುತ್ತದೆ.
ಹೋಟಲ್ ಗಳು, ಬಾಡಿಗೆ ತಾಣಗಳು ಹಾಸ್ಟೆಲ್ಗಳು ಮುಂತಾದವು ಕಾರ್ಯ ನಿರ್ವಹಿಸುವುದನ್ನು ಮುಂದುವರಿಸಬೇಕು ಮತ್ತು ಅಗತ್ಯ ಸಾಮಗ್ರಿಗಳ ವಿತರಣೆಯನ್ನು ವ್ಯವಸ್ಥಿತಗೊಳಿಸಬೇಕು ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಗೃಹ ಸಚಿವಾಲಯ ಆದೇಶ ನೀಡಿದೆ. ಇದರಿಂದ ಮುನ್ನೆಚ್ಚರಿಕೆ ನಿಗಾ ಜೊತೆಗೆ ವಿದ್ಯಾರ್ಥಿಗಳು, ಉದ್ಯೋಗಸ್ಥ ಮಹಿಳೆಯರು, ಹಾಸ್ಟೆಲ್ ನಲ್ಲಿರುವವರು, ಮುಂತಾದವರಿಗೆ ಪ್ರಸ್ತುತ ಸೌಲಭ್ಯಗಳ ಬಳಕೆಯನ್ನು ಮುಂದುವರಿಸಲು ಅನುವು ಮಾಡಿದಂತಾಗುವುದು.
ಅಗತ್ಯ ಸಾಮಗ್ರಿಗಳು ಮತ್ತು ಸೇವೆಗಳ ಪೂರೈಕೆಯನ್ನು ಖಚಿತಪಡಿಸುವುದರ ಜೊತೆಗೆ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ಇದನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನಿನ ವಿವಿಧ ನಿಯಮಗಳಡಿಯಲ್ಲಿ ಕ್ರಮ ಕೈಗೊಳ್ಳುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪದೇ ಪದೇ ನಿರ್ದೇಶಿಸಲಾಗುತ್ತಿದೆ. ಕೋವಿಡ್ – 19 ಹರಡುವಿಕೆಯನ್ನು ತಡೆಯಲು ಇದು ಕಡ್ಡಾಯವಾಗಿದೆ.
*************
(Release ID: 1608570)
Visitor Counter : 301
Read this release in:
English
,
Urdu
,
Hindi
,
Marathi
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam