ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ
ಕೋವಿಡ್-19 ವಿರುದ್ಧ ಹೋರಾಡಲು ಪ್ರಧಾನಮಂತ್ರಿ ಪರಿಹಾರ ನಿಧಿಗೆ ಒಂದು ತಿಂಗಳ ವೇತನ ನೀಡಿದ ಕೇಂದ್ರ ಕಾರ್ಮಿಕ ಸಚಿವ ಶ್ರೀ ಸಂತೋಷ್ ಗಂಗ್ವಾರ್
ಪ್ರಕಟಣಾ ದಿನಾಂಕ:
27 MAR 2020 1:22PM by PIB Bengaluru
ಕೋವಿಡ್-19 ವಿರುದ್ಧ ಹೋರಾಡಲು ಪ್ರಧಾನಮಂತ್ರಿ ಪರಿಹಾರ ನಿಧಿಗೆ ಒಂದು ತಿಂಗಳ ವೇತನ ನೀಡಿದ ಕೇಂದ್ರ ಕಾರ್ಮಿಕ ಸಚಿವ ಶ್ರೀ ಸಂತೋಷ್ ಗಂಗ್ವಾರ್
ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ(ಸ್ವತಂತ್ರ ಹೊಣೆಗಾರಿಕೆ) ರಾಜ್ಯ ಸಚಿವ ಶ್ರೀ ಸಂತೋಷ್ ಗಂಗ್ವಾರ್ ಅವರು, ಕೋವಿಡ್-19 ವಿರುದ್ಧ ನಡೆಸುತ್ತಿರುವ ಹೋರಾಟ ಮತ್ತು ಪರಿಹಾರ ಕಾರ್ಯಗಳಿಗಾಗಿ ಪ್ರಧಾನಮಂತ್ರಿ ಪರಿಹಾರ ನಿಧಿಗೆ ಒಂದು ತಿಂಗಳ ವೇತನವನ್ನು ನೀಡಲು ನಿರ್ಧರಿಸಿದ್ದಾರೆ. ಈ ವಿಷಯವನ್ನು ಪ್ರಕಟಿಸಿರುವ ಶ್ರೀ ಗಂಗ್ವಾರ್ ಅವರು, “ಕೋವಿಡ್-19 ಉಂಟುಮಾಡಿರುವ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ನಾವು ಒಂದಲ್ಲಾ ಒಂದು ರೀತಿಯಲ್ಲಿ ಕೊಡುಗೆ ನೀಡುತ್ತಿದ್ದೇವೆ, ಈ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ಒಂದು ತಿಂಗಳ ವೇತನವನ್ನು ದೇಣಿಗೆಯಾಗಿ ನೀಡಲು ನಿರ್ಧರಿಸಿದ್ದೇನೆ” ಎಂದು ಹೇಳಿದ್ದಾರೆ.
ಅಲ್ಲದೆ ಗಂಗ್ವಾರ್ ಅವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸರ್ಕಾರ ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳೂತ್ತಿದೆ, ಸಾಮಾನ್ಯ ಜನರಿಗೆ ಅದರಲ್ಲೂ ವಿಶೇಷವಾಗಿ ಬಡವರು ಹಾಗೂ ಕಾರ್ಮಿಕರಿಗಾಗಿ ಸಕಾಲಿಕ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.
*********
(ಪ್ರಕಟಣೆ ಐ.ಡಿ.: 1608574)
ವಿಸಿಟರ್ ಕೌಂಟರ್ : 117
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
हिन्दी
,
Marathi
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam