ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ
ಶ್ರೀ ಧರ್ಮೇಂದ್ರ ಪ್ರಧಾನ್ ಅವರಿಂದ ಒಂದು ತಿಂಗಳ ಸಂಬಳ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ದೇಣಿಗೆ
ಪ್ರಕಟಣಾ ದಿನಾಂಕ:
29 MAR 2020 12:43PM by PIB Bengaluru
ಶ್ರೀ ಧರ್ಮೇಂದ್ರ ಪ್ರಧಾನ್ ಅವರಿಂದ ಒಂದು ತಿಂಗಳ ಸಂಬಳ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ದೇಣಿಗೆ
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಹಾಗು ಉಕ್ಕು ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಒಂದು ತಿಂಗಳ ವೇತನವನ್ನು ಕೋವಿಡ್ -19 ಹಾವಳಿಯ ಪರಿಹಾರ ಕಾರ್ಯಕ್ಕಾಗಿ ಪ್ರಧಾನ ಮಂತ್ರಿ ಅವರ ರಾಷ್ಟ್ರೀಯ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. “ಇಂತಹ ಕಠಿಣ ಸಂದರ್ಭದಲ್ಲಿ , ಬಹಳ ಅತ್ಯಗತ್ಯ , ಆವಶ್ಯಕತೆ ಇರುವವರ ಪರವಾಗಿ ನಿಲ್ಲೋಣ. ಕೋವಿಡ್ -19 ಜಾಗತಿಕ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ನಾನು ನನ್ನ ಒಂದು ತಿಂಗಳ ವೇತನವನ್ನು ದೇಣಿಗೆಯಾಗಿ ನೀಡಿದ್ದೇನೆ ಮತ್ತು ಎಂ.ಪಿ.ಲ್ಯಾಡ್ ನಿಧಿಯಿಂದ 1 ಕೋಟಿ ರೂಪಾಯಿಗಳನ್ನು ಪ್ರಧಾನ ಮಂತ್ರಿ ಅವರ ರಾಷ್ಟ್ರೀಯ ಪರಿಹಾರ ನಿಧಿಗೆ ಬಿಡುಗಡೆ ಮಾಡಿದ್ದೇನೆ. ಸಂತ್ರಸ್ತರಾಗುವವರ ಮುಖದಲ್ಲಿ ನಗು ಮೂಡಿಸುವ ನಿಟ್ಟಿನಲ್ಲಿ ಸಹಾಯಾರ್ಥವಾಗಿ ಈ ಕ್ರಮ ಕೈಗೊಂಡಿದ್ದೇನೆ” ಎಂದು ಶ್ರೀ ಪ್ರಧಾನ್ ಟ್ವೀಟ್ ಮಾಡಿದ್ದಾರೆ.
(ಪ್ರಕಟಣೆ ಐ.ಡಿ.: 1609174)
ವಿಸಿಟರ್ ಕೌಂಟರ್ : 158