ವಾರ್ತಾ ಮತ್ತು ಪ್ರಸಾರ ಸಚಿವಾಲಯ

ಭಯ ಉಂಟುಮಾಡುವ ಪರಿಶೀಲಿಸದ ಸುದ್ದಿಗಳನ್ನು ಪ್ರಸಾರ ಮಾಡಬೇಡಿ: ಮಾಧ್ಯಮಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ

Posted On: 01 APR 2020 3:34PM by PIB Bengaluru

ಭಯ ಉಂಟುಮಾಡುವ ಪರಿಶೀಲಿಸದ ಸುದ್ದಿಗಳನ್ನು ಪ್ರಸಾರ ಮಾಡಬೇಡಿ: ಮಾಧ್ಯಮಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ

 

ಹೊಣೆಗಾರಿಕೆಯನ್ನು ಕಾಪಾಡಿಕೊಳ್ಳುವಂತೆ ಮತ್ತು ಭಯವನ್ನು ಉಂಟುಮಾಡುವ ಪರಿಶೀಲಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಮೂರು ತಿಂಗಳಿಗಿಂತ ಹೆಚ್ಚು ಕಾಲ ಲಾಕ್ ಡೌನ್ ಮುಂದುವರಿಯುತ್ತದೆ ಎಂಬ ಸುಳ್ಳು ಸುದ್ದಿಯಿಂದ ಉಂಟಾದ ಭೀತಿಯು, ನಗರಗಳಲ್ಲಿ ಕೆಲಸ ಮಾಡುವ ಹೆಚ್ಚಿನ ಸಂಖ್ಯೆಯ ಕಾರ್ಮಿಕರ ವಲಸೆಗೆ ಕಾರಣವಾಯಿತು ಎಂಬುದನ್ನು ಸುಪ್ರೀಂ ಕೋರ್ಟ್ ಗಮನಿಸಿತು. ಎಲೆಕ್ಟ್ರಾನಿಕ್, ಮುದ್ರಣ ಅಥವಾ ಸಾಮಾಜಿ ಮಾಧ್ಯಮಗಳ ಸುಳ್ಳು ಸುದ್ದಿಗಳ ಭೀತಿಯನ್ನು ಕಡೆಗಣಿಸುವುದು ಸಾಧ್ಯವಿಲ್ಲ. ಏಕೆಂದರೆ ಇಂತಹ ಸುದ್ದಿಗಳಿಂದ ಭಯಭೀತರಾಗಿ ವಲಸೆ ಹೊರಟವರಿಗೆ ಅಪಾರವಾದ ನಷ್ಟಗಳಾಗಿವೆ,  ಕೆಲವರು ತಮ್ಮ ಪ್ರಾಣವನ್ನೂ ಕಳೆದುಕೊಂಡಿದ್ದಾರೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ಸಾಂಕ್ರಾಮಿಕ ರೋಗ ಕುರಿತ ಮುಕ್ತ ಚರ್ಚೆಯಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶವಿಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿರುವ ನ್ಯಾಯಾಲಯವು, ಆದರೆ ಮಾಧ್ಯಮಗಳು ರೋಗದ ಬೆಳವಣಿಗೆಗಳ ಬಗ್ಗೆ ಅಧಿಕೃತ ಆವೃತ್ತಿಯನ್ನು ಉಲ್ಲೇಖಿಸಿ ಸುದ್ದಿ ಪ್ರಕಟಿಸಬೇಕು ಎಂದು ನಿರ್ದೇಶಿಸಿದೆ.

 

ಆದೇಶದ ಪೂರ್ಣ ಪಠ್ಯವನ್ನು URL ನಲ್ಲಿ ಓದಬಹುದು:

https://mib.gov.in/sites/default/files/OM%20dt.1.4.2020%20along%20with%20Supreme%20Court%20Judgement%20copy.pdf

***


(Release ID: 1610026) Visitor Counter : 173