ಗೃಹ ವ್ಯವಹಾರಗಳ ಸಚಿವಾಲಯ

ಭಾರತದಲ್ಲಿ COVID-19 ಹರಡುವುದನ್ನು ತಡೆಗಟ್ಟಲು ಹಾಗೂ ಜನರಲ್ಲಿ ಭೀತಿ ಹುಟ್ಟಿಸುವ ಸುಳ್ಳು ಸುದ್ದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಗೃಹ ಇಲಾಖೆಯಿಂದ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ

Posted On: 02 APR 2020 10:09AM by PIB Bengaluru

ಭಾರತದಲ್ಲಿ COVID-19 ಹರಡುವುದನ್ನು ತಡೆಗಟ್ಟಲು ಹಾಗೂ ಜನರಲ್ಲಿ ಭೀತಿ ಹುಟ್ಟಿಸುವ ಸುಳ್ಳು ಸುದ್ದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಗೃಹ ಇಲಾಖೆಯಿಂದ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ

 

ಗೌರವಾನ್ವಿತ ಸುಪ್ರೀಂ ಕೋರ್ಟ್ ರಿಟ್ ಅರ್ಜಿ ವಿಚಾರಣೆ ನಡೆಸುವಾಗ, ಕಾರ್ಮಿಕರ ಸಾಮೂಹಿಕ ವಲಸೆಗೆ ಕಾರಣವಾದ ಸುಳ್ಳು ಸುದ್ದಿ ಸೃಷ್ಟಿಸಿದ ಭೀತಿಯನ್ನು ಗಂಭೀರವಾಗಿ ಗಮನಿಸಿತು.. ಇದು ಜನರ ಅಪಾರ ಯಾತನೆಗೆ ಕಾರಣವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ನ್ಯಾಯಾಲಯದ ಅಭಿಪ್ರಾಯಗಳನ್ನು ಅನುಸರಿಸಿ, ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಶ್ರೀ ಅಜಯ್ ಕುಮಾರ್ ಭಲ್ಲಾ ಅವರು, ಸುಳ್ಳು ಸುದ್ದಿಗಳ ವಿರುದ್ಧ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎಲ್ಲಾ ರಾಜ್ಯ / ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ. ಜನರು ಸತ್ಯವನ್ನು ತಿಳಿದುಕೊಳ್ಳಲು ಮತ್ತು ಪರಿಶೀಲಿಸದ ಸುದ್ದಿಗಳನ್ನು ತ್ವರಿತವಾಗಿ ಪರಿಶೀಲಿಸಲು ಭಾರತ ಸರ್ಕಾರವು ವೆಬ್ ಪೋರ್ಟಲ್ ಅನ್ನು ರೂಪಿಸುತ್ತಿದೆ. ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳು ಇದೇ ರೀತಿಯ ಕಾರ್ಯವಿಧಾನವನ್ನು ರೂಪಿಸಿಕೊಳ್ಳುವಂತೆ ವಿನಂತಿಸಲಾಗಿದೆ.

ವಲಸೆ ಕಾರ್ಮಿಕರಿಗೆ ಪರಿಹಾರ ಕೇಂದ್ರಗಳಲ್ಲಿ ಆಹಾರ, ಔಷಧಿಗಳಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ವೋಚ್ಛ ನ್ಯಾಯಾಲಯವು ನಿರ್ದೇಶನಗಳನ್ನು ನೀಡಿದೆ. ದೇಶದಲ್ಲಿ COVID-19 ಹರಡುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ನೀಡಿರುವ ನಿರ್ದೇಶನಗಳು / ಸಲಹೆಗಳು / ಆದೇಶಗಳನ್ನು ಅನುಸರಿಸಲು ರಾಜ್ಯಗಳು  ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಲಾಗಿದೆ.

Click here to see Communication to States/ UTs



(Release ID: 1610223) Visitor Counter : 232