ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ

COVID- 19  ಹಿನ್ನೆಲೆಯಲ್ಲಿ ದೇಶಾದ್ಯಂತ ಹಲವಾರು ವಿಶ್ವವಿದ್ಯಾಲಯಗಳು, ಕಾಲೇಜುಗಳು ಮತ್ತು ಶಾಲೆಗಳ ಮುಖ್ಯಸ್ಥರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವರಿಂದ ವಿಡಿಯೋ ಕಾನ್ಫರೆನ್ಸ್ ಸಂವಾದ

Posted On: 03 APR 2020 8:40PM by PIB Bengaluru

COVID- 19  ಹಿನ್ನೆಲೆಯಲ್ಲಿ ದೇಶಾದ್ಯಂತ ಹಲವಾರು ವಿಶ್ವವಿದ್ಯಾಲಯಗಳು, ಕಾಲೇಜುಗಳು ಮತ್ತು ಶಾಲೆಗಳ ಮುಖ್ಯಸ್ಥರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವರಿಂದ ವಿಡಿಯೋ ಕಾನ್ಫರೆನ್ಸ್ ಸಂವಾದ

COVID-19 ವಿರುದ್ಧದ ಹೋರಾಟದಲ್ಲಿ ಸಕ್ರಿಯ ಪಾತ್ರ ವಹಿಸಿದ್ದಕ್ಕಾಗಿ ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಶ್ರೀ ನಿಶಾಂಕ್ ಅವರಿಂದ ಕೃತಜ್ಞತೆ

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ತನ್ನ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಕಷ್ಟದ ಸಮಯದಲ್ಲಿ ಬೆಂಬಲಕ್ಕೆ ನಿಂತಿದೆ - ಶ್ರೀ ರಮೇಶ್ ಪೋಖ್ರಿಯಲ್ ನಿಶಾಂಕ್

 

ಕೇಂದ್ರ ಮಾನವ ಸಂಪನ್ಮೂಲ ಸಚಿವ ಶ್ರೀ ರಮೇಶ್ ಪೋಖ್ರಿಯಾಲ್ 'ನಿಶಾಂಕ್' ದೇಶ ಮತ್ತು ವಿಶ್ವದಾದ್ಯಂತ ಹರಡಿರುವ ಕೊರೊನಾವೈರಸ್ ಬಗ್ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ದೇಶಾದ್ಯಂತದ ಹಲವಾರು ವಿಶ್ವವಿದ್ಯಾಲಯಗಳು, ಕಾಲೇಜುಗಳು ಮತ್ತು ಶಾಲೆಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸಿದರು.

ಕೇಂದ್ರ ಸಚಿವರು ಅವರ ಸಮಸ್ಯೆಗಳನ್ನು ಆಲಿಸಿದ್ದಲ್ಲದೆ, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವಲ್ಲಿ ಅವರ ಸಕ್ರಿಯ ಪಾತ್ರಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ದೇಶಾದ್ಯಂತದ 800 ಕ್ಕೂ ಹೆಚ್ಚು ಜನರು ಸಭೆಯಲ್ಲಿ ಭಾಗವಹಿಸಿದ್ದರು.

ವೈರಸ್ ಹರಡುವಿಕೆಯ ವಿರುದ್ಧ ಹೋರಾಡುವಲ್ಲಿ ಮಹತ್ವದ ಕೊಡುಗೆ ನೀಡಿದ ದೇಶಾದ್ಯಂತ 1,000 ವಿಶ್ವವಿದ್ಯಾಲಯಗಳು, 45,000 ಕಾಲೇಜುಗಳು, 1.5 ಮಿಲಿಯನ್ ವಿದ್ಯಾರ್ಥಿಗಳು, ಒಂದು ಕೋಟಿಗೂ ಹೆಚ್ಚು ಶಿಕ್ಷಕರು ಮತ್ತು 33 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳ ಶ್ರಮವನ್ನು ಶ್ರೀ ನಿಶಾಂಕ್ ಶ್ಲಾಘಿಸಿದರು. ಬಿಕ್ಕಟ್ಟಿನ ಸಮಯದಲ್ಲಿ ಎಲ್ಲರೂ ಅಭೂತಪೂರ್ವ ತಾಳ್ಮೆ ತೋರಿಸಿದ್ದಾರೆ. ಅಷ್ಟೇ ಅಲ್ಲದೇ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಮತ್ತು COVID-19 ಅನ್ನು ಎದುರಿಸಲು ಜನರಿಗೆ ಅರಿವು ಮೂಡಿಸಿದ್ದಾರೆ ಎಂದು ಅವರು ಹೇಳಿದರು.

ದೇಶದಲ್ಲಿ ಇಷ್ಟು ಕಡಿಮೆ ಸಮಯದಲ್ಲಿ ಆನ್ಲೈನ್ ಶಿಕ್ಷಣ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದೆ ಎಂಬುದು ಎಲ್ಲ ಶಿಕ್ಷಕರ ಬದ್ಧತೆಯ ಫಲವಾಗಿದೆ, ಇದರ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳು ಇದರ ಲಾಭ ಪಡೆಯುತ್ತಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದರು. ಕೊರೊನಾವೈರಸ್ ವಿರುದ್ಧದ ಹೋರಾಟದಲ್ಲಿ ಬಳಸಲು ವೈದ್ಯಕೀಯ ಉಪಕರಣಗಳ ಸಂಶೋಧನೆಗಾಗಿ ದೇಶಾದ್ಯಂತ ಐಐಟಿಗಳು ಸೇರಿದಂತೆ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಶ್ರೀ ಪೋಖ್ರಿಯಾಲ್ ಅಭಿನಂದಿಸಿದರು.

ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಶ್ರೀ ಪೋಖ್ರಿಯಾಲ್ ತಾಳ್ಮೆಯಿಂದ ಆಲಿಸಿದರು. ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಸಚಿವಾಲಯವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು. ತಾವು ಅಥವಾ ತಮ್ಮ ಕುಟುಂಬದ ಯಾವುದೇ ಸದಸ್ಯರು ದುರದೃಷ್ಟವಶಾತ್ ಅನಾರೋಗ್ಯಕ್ಕೆ ಒಳಗಾಗಿದ್ದರೆ ಅವರು ಕೂಡಲೇ ತಮ್ಮ ಪ್ರಾಂಶುಪಾಲರನ್ನು ಅಥವಾ ಉಪಕುಲಪತಿಯನ್ನು ಸಂಪರ್ಕಿಸಬೇಕು. ಎಲ್ಲಾ ವೈದ್ಯಕೀಯ ನೆರವನ್ನು ಸಚಿವಾಲಯದಿಂದ ನೀಡಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿದರು.

ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಆಯುಷ್ ಸಚಿವಾಲಯ ಹೊರಡಿಸಿದ ಸಲಹೆಯನ್ನು ಪಾಲಿಸಬೇಕು ಮತ್ತು ಅದನ್ನು ಅನುಸರಿಸಲು ಇತರರನ್ನು ಪ್ರೇರೇಪಿಸಬೇಕು ಎಂದು ಸಚಿವರು ಕರೆ ಕೊಟ್ಟರು. ಇಂದಿನ ವಿದ್ಯಾರ್ಥಿಗಳು ನಾಳಿನ ಭವಿಷ್ಯ ಮತ್ತು ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ಆರೋಗ್ಯವಾಗಿರಿಸಿಕೊಂಡರೆ ನಮ್ಮ ಭವಿಷ್ಯವೂ ಆರೋಗ್ಯಕರ ಮತ್ತು ಸುರಕ್ಷಿತವಾಗಿರುತ್ತದೆ ಎಂದು ಹೇಳಿದರು.

ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಹೊಸ ಶಕ್ತಿಯನ್ನು ಪಡೆಯಲು ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ ಮೇಣದಬತ್ತಿಗಳು, ಮೊಬೈಲ್ ಟಾರ್ಚ್ ಇತ್ಯಾದಿಗಳನ್ನು ಬೆಳಗಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸಬೇಕೆಂದು ಶ್ರೀ ಪೋಖ್ರಿಯಾಲ್ ಮನವಿ ಮಾಡಿದರು.



(Release ID: 1610980) Visitor Counter : 167