ಪ್ರಧಾನ ಮಂತ್ರಿಯವರ ಕಛೇರಿ
ಆಸ್ಟ್ರೇಲಿಯಾ ಪ್ರಧಾನ ಮಂತ್ರಿಯವರೊಂದಿಗೆ ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ
Posted On:
06 APR 2020 1:48PM by PIB Bengaluru
ಆಸ್ಟ್ರೇಲಿಯಾ ಪ್ರಧಾನ ಮಂತ್ರಿಯವರೊಂದಿಗೆ ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.
ಉಭಯ ನಾಯಕರು COVID-19 ಸಾಂಕ್ರಾಮಿಕ ರೋಗ ಮತ್ತು ಆಯಾ ಸರ್ಕಾರಗಳು ಅನುಸರಿಸುತ್ತಿರುವ ದೇಶೀಯ ಪ್ರತಿಕ್ರಿಯೆ ತಂತ್ರಗಳ ಬಗ್ಗೆ ಚರ್ಚಿಸಿದರು. ಈ ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ಸಹಭಾಗಿತ್ವದ ಸಂಶೋಧನಾ ಪ್ರಯತ್ನಗಳ ಮೂಲಕ ದ್ವಿಪಕ್ಷೀಯ ಅನುಭವ-ಹಂಚಿಕೆಯ ಮಹತ್ವವನ್ನು ಅವರು ಒಪ್ಪಿಕೊಂಡರು.
ಪ್ರಯಾಣ ನಿರ್ಬಂಧದಿಂದಾಗಿ ಭಾರತದಲ್ಲಿ ಸಿಲುಕಿರುವ ಆಸ್ಟ್ರೇಲಿಯಾದ ಯಾವುದೇ ನಾಗರಿಕರಿಗೆ ಅಗತ್ಯ ಸೌಲಭ್ಯ ಮತ್ತು ಬೆಂಬಲವನ್ನು ನೀಡಲು ಭಾರತ ಸರ್ಕಾರ ಸಿದ್ಧವಿದೆ ಎಂದು ಪ್ರಧಾನಿ ತಿಳಿಸಿದರು. ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಸಮುದಾಯವು ಆಸ್ಟ್ರೇಲಿಯಾ ಸಮಾಜದ ಒಂದು ಭಾಗವಾಗಿ ಮುಂದುವರಿಯುತ್ತದೆ ಎಂದು ಪ್ರಧಾನಿ ಮಾರಿಸನ್ ಭರವಸೆ ನೀಡಿದರು.
ಪ್ರಸ್ತುತ ಆರೋಗ್ಯ ಬಿಕ್ಕಟ್ಟನ್ನು ಪರಿಹರಿಸುವತ್ತ ಗಮನಹರಿಸಿದ್ದರೂ, ಇಂಡೋ-ಪೆಸಿಫಿಕ್ ಪ್ರದೇಶವನ್ನು ಒಳಗೊಂಡಂತೆ ಭಾರತ-ಆಸ್ಟ್ರೇಲಿಯಾ ಸಹಭಾಗಿತ್ವದ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಳ್ಳಲು ಉಭಯ ನಾಯಕರು ಸಮ್ಮತಿಸಿದರು.
***
(Release ID: 1611607)
Visitor Counter : 259
Read this release in:
English
,
Urdu
,
Marathi
,
Hindi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam