ಗೃಹ ವ್ಯವಹಾರಗಳ ಸಚಿವಾಲಯ
ಕೋವಿಡ್-19 ವಿರುದ್ಧ ಹೋರಾಡುತ್ತಿರುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಲು ಎಲ್ಲ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ನಿರ್ದೇಶನ
प्रविष्टि तिथि:
11 APR 2020 8:18PM by PIB Bengaluru
ಕೋವಿಡ್-19 ವಿರುದ್ಧ ಹೋರಾಡುತ್ತಿರುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಲು ಎಲ್ಲ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ನಿರ್ದೇಶನ
ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆದಿರುವ ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್ಎ) ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮತ್ತು ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ಕೋವಿಡ್-19 ಪತ್ತೆಯಾದ ಆಸ್ಪತ್ರೆಗಳಲ್ಲಿ ಮತ್ತು ಶಂಕಿತರನ್ನು ಕ್ವಾರಂಟೈನ್ ನಲ್ಲಿಡಲಾದ ಜಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಬೇಕು ಎಂದು ನಿರ್ದೇಶನ ನೀಡಿದೆ.
ರೋಗದ ಗುಣಲಕ್ಷಣಗಳುಳ್ಳ ಜನರನ್ನು ತಪಾಸಣೆ ಮಾಡುತ್ತಿರುವ ಸ್ಥಳಗಳಿಗೆ ಭೇಟಿ ನೀಡುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೂ ಸಹ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಸಂಬಂಧಿಸಿದ ಎಲ್ಲರಿಗೂ ಮಾಹಿತಿ ನೀಡಲಾಗಿದೆ.
*****
(रिलीज़ आईडी: 1613466)
आगंतुक पटल : 201
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam