ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ
ಕೊರೊನಾ ಸಾಂಕ್ರಾಮಿಕದ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಪವಿತ್ರ ರಂಜಾನ್ ತಿಂಗಳಲ್ಲಿ ಲಾಕ್ ಡೌನ್ ಮತ್ತು ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಶ್ರೀ ಮುಖ್ತಾರ್ ಅಬ್ಬಾಸ್ ನಖ್ವಿ ಭಾರತೀಯ ಮುಸ್ಲಿಮರಿಗೆ ಮನವಿ ಮಾಡಿದರು
Posted On:
13 APR 2020 5:07PM by PIB Bengaluru
ಕೊರೊನಾ ಸಾಂಕ್ರಾಮಿಕದ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಪವಿತ್ರ ರಂಜಾನ್ ತಿಂಗಳಲ್ಲಿ ಲಾಕ್ ಡೌನ್ ಮತ್ತು ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಶ್ರೀ ಮುಖ್ತಾರ್ ಅಬ್ಬಾಸ್ ನಖ್ವಿ ಭಾರತೀಯ ಮುಸ್ಲಿಮರಿಗೆ ಮನವಿ ಮಾಡಿದರು
ಪವಿತ್ರ ರಂಜಾನ್ ತಿಂಗಳು ಏಪ್ರಿಲ್ 24 ರಿಂದ ಪ್ರಾರಂಭವಾಗಲಿದೆ
ಮುಖ್ತಾರ್ ಅಬ್ಬಾಸ್ ನಖ್ವಿ --- ಪ್ರಾರ್ಥನೆ ಮತ್ತು ಇತರ ಧಾರ್ಮಿಕ ವಿಧಿಗಳನ್ನು ಮನೆಗಳ ಒಳಗೆಯೇ ಉಳಿದುಕೊಂಡು ನೆರವೇರಿಸುವುದು
ಕೊರೊನಾ ಸಾಂಕ್ರಾಮಿಕದ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ಮುಸ್ಲಿಮರು ಪವಿತ್ರ ರಂಜಾನ್ ತಿಂಗಳಲ್ಲಿ ಲಾಕ್ ಡೌನ್ ಮತ್ತು ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಮತ್ತು ಪ್ರಾಮಾಣಿಕವಾಗಿ ಪಾಲಿಸಬೇಕು. ಪ್ರಾರ್ಥನೆ ಮತ್ತು ಇತರ ಧಾರ್ಮಿಕ ಆಚರಣೆಗಳನ್ನು ತಮ್ಮ ಮನೆಗಳೊಳಗೆಯೇ ಮಾಡಬೇಕು ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಶ್ರೀ ಮುಖ್ತಾರ್ ಅಬ್ಬಾಸ್ ನಖ್ವಿ ಯವರು ಮನವಿ ಮಾಡಿದರು .
ಭಾರತದ ರಾಜ್ಯ ವಕ್ಫ್ ಮಂಡಳಿಗಳ ನಿಯಂತ್ರಕ ಸಂಸ್ಥೆಯಾದ ಸೆಂಟ್ರಲ್ ವಕ್ಫ್ ಕೌನ್ಸಿಲ್ ಅಧ್ಯಕ್ಷರೂ ಆಗಿರುವ ಶ್ರೀ ನಖ್ವಿಯವರು, 7 ಲಕ್ಷಕ್ಕೂ ಹೆಚ್ಚು ನೋಂದಾಯಿತ ಮಸೀದಿಗಳು, ಈದ್ಗಾ, ಇಮಾಮ್ ಬಾಡಾ, ದರ್ಗಾ ಮತ್ತು ಇತರ ಧಾರ್ಮಿಕ ಸಂಸ್ಥೆಗಳು ದೇಶಾದ್ಯಂತ ರಾಜ್ಯ ವಕ್ಫ್ ಮಂಡಳಿಗಳ ಅಡಿಯಲ್ಲಿ ಬರುತ್ತವೆ ಎಂದು ಮಾಹಿತಿ ನೀಡಿದರು. .
ಸೌದಿ ಅರೇಬಿಯಾ ಸೇರಿದಂತೆ ಹೆಚ್ಚಿನ ಮುಸ್ಲಿಂ ರಾಷ್ಟ್ರಗಳು ರಂಜಾನ್ ಸಮಯದಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಸಾಮೂಹಿಕ ಸಭೆಯನ್ನು ನಿಲ್ಲಿಸಿರುವುದನ್ನು ಗಮನಿಸಬೇಕು.
ಶ್ರೀ ನಖ್ವಿ ಅವರು ವಿವಿಧ ಧಾರ್ಮಿಕ ಮುಖಂಡರು, ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಸಂಸ್ಥೆಗಳ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ರಾಜ್ಯ ವಕ್ಫ್ ಮಂಡಳಿಗಳ ಇತರ ಪದಾಧಿಕಾರಿಗಳೊಂದಿಗೆ ಮಾತನಾಡಿರುವರು ಮತ್ತು ಮನವಿ ಮಾಡಿರುವರು ಎಂದು ಅವರು ಹೇಳಿದರು. ಕೊರೊನಾ ಸಾಂಕ್ರಾಮಿಕದ ದೃಷ್ಟಿಯಿಂದ ಪವಿತ್ರ ರಂಜಾನ್ ತಿಂಗಳಲ್ಲಿ ಲಾಕ್‌ಡೌನ್ ಮತ್ತು ಸಾಮಾಜಿಕ ಅಂತರದ ಮಾರ್ಗಸೂಚಿಗಳ ಅನುಷ್ಠಾನವನ್ನು ಅವರು ಎಲ್ಲಾ ಗಂಭೀರತೆ ಮತ್ತು ಪ್ರಾಮಾಣಿಕತೆಯೊಂದಿಗೆ ಮಾಡಬೇಕು. ರಂಜಾನ್ ಹಬ್ಬದ ಎಲ್ಲಾ ಧಾರ್ಮಿಕ ವಿಧಿಗಳನ್ನು ಜನರು ತಮ್ಮ ಮನೆಗಳಲ್ಲಿಯೇ ನಡೆಸಬೇಕು ಎನ್ನುವುದನ್ನುಅವರು ಖಚಿತಪಡಿಸಿಕೊಳ್ಳಬೇಕು.
ಪವಿತ್ರ ರಂಜಾನ್ ತಿಂಗಳಲ್ಲಿ ಯಾವುದೇ ಸಂದರ್ಭದಲ್ಲೂ ಜನರು ಧಾರ್ಮಿಕ ಮತ್ತು ಇತರ ಸ್ಥಳಗಳಲ್ಲಿ ಸೇರದಂತೆ ನೋಡಿಕೊಳ್ಳಲು ರಾಜ್ಯ ವಕ್ಫ್ ಮಂಡಳಿಗಳಿಗೆ ಕೇಂದ್ರ ವಕ್ಫ್ ಮಂಡಳಿಯ ಮೂಲಕ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸಲಾಗಿದೆ ಎಂದು ಶ್ರೀ ನಖ್ವಿ ಹೇಳಿದರು. ಈ ನಿಟ್ಟಿನಲ್ಲಿ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಸ್ಥೆಗಳು, ಜನರು ಮತ್ತು ಸ್ಥಳೀಯ ಆಡಳಿತದ ಸಹಾಯ ಪಡೆಯುವ ಅವಶ್ಯಕತೆಯಿದೆ. ಈ ಧಾರ್ಮಿಕ ಮತ್ತು ಸಾಮಾಜಿಕ ಸಂಸ್ಥೆಗಳು ಮತ್ತು ವ್ಯಕ್ತಿಗಳು ಪವಿತ್ರ ರಂಜಾನ್ ತಿಂಗಳಲ್ಲಿ ಲಾಕ್ ಡೌನ್ ಮತ್ತು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಸ್ಥಳೀಯ ಆಡಳಿತದೊಂದಿಗೆ ಸಹಕರಿಸಬೇಕಾಗಿದೆ ಎಂದು ಹೇಳಿದರು.
ರಾಜ್ಯ ವಕ್ಫ್ ಮಂಡಳಿಗಳು ಮತ್ತು ಧಾರ್ಮಿಕ-ಸಾಮಾಜಿಕ ಸಂಘಟನೆಗಳ ಸಕ್ರಿಯ, ಪರಿಣಾಮಕಾರಿ ಮತ್ತು ಸಕಾರಾತ್ಮಕ ಪ್ರಯತ್ನಗಳು ದೇಶದ ಮುಸ್ಲಿಮರು ಏಪ್ರಿಲ್ 8 ಮತ್ತು 9 ರಂದು ಅವರ ಮನೆಗಳ ಒಳಗೆಯೇ ಶಬ್-ಎ-ಬರಾತ್ ಆಚರಿಸುವುದನ್ನು ಎಂದು ಶ್ರೀ ನಖ್ವಿ ಹೇಳಿದರು.. ಕೊರೊನಾ ಸಾಂಕ್ರಾಮಿಕದ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು, ಶಬ್-ಎ-ಬರಾತ್ ಸಂದರ್ಭದಲ್ಲಿ ಕಟ್ಟುನಿಟ್ಟಾಗಿ ಮತ್ತು ಪ್ರಾಮಾಣಿಕವಾಗಿ ಲಾಕ್ ಡೌನ್ ಮತ್ತು ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಲ್ಲಿ ಭಾರತೀಯ ಮುಸ್ಲಿಮರ ಸಹಕಾರ ಶ್ಲಾಘನೀಯವಾಗಿದೆ.
ಕೊರೊನಾ ಸಾಂಕ್ರಾಮಿಕದ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ದೇಶದ ಎಲ್ಲಾ ದೇವಾಲಯಗಳು, ಮಸೀದಿಗಳು, ಗುರುದ್ವಾರಗಳು, ಚರ್ಚುಗಳು ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿನ ಎಲ್ಲಾ ಧಾರ್ಮಿಕ ಚಟುವಟಿಕೆಗಳನ್ನು ರದ್ದುಪಡಿಸಲಾಗಿದೆ ಎಂದು ಶ್ರೀ ನಖ್ವಿ ಹೇಳಿದರು. ಲಾಕ್ ಡೌನ್ ಮತ್ತು ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಅನುಸರಿಸಲಾಗುತ್ತಿದೆ.
ಭಾರತದಲ್ಲಿಯೂ, ಪವಿತ್ರ ರಂಜಾನ್ ತಿಂಗಳಿನಲ್ಲಿ ಸಾಂಪ್ರದಾಯಿಕವಾಗಿ ಜನರು ಲಕ್ಷಾಂತರ ಮಸೀದಿಗಳು, ದರ್ಗಾ, ಇಮಾಮ್ ಬಾಡಾ, ಈದ್ಗಾ, ಮದರಾಸ ಮತ್ತು ದೇಶಾದ್ಯಂತದ ಇತರ ಧಾರ್ಮಿಕ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು "ಇಫ್ತಾರ್" ಸೇರಿದಂತೆ ಇತರ ಧಾರ್ಮಿಕ ವಿಧಿಗಳನ್ನು ನೆರವೇರಿಸುತ್ತಾರೆ ಎಂದು ಶ್ರೀ ನಖ್ವಿ ಹೇಳಿದರು. ಆದರೆ ಕೊರೊನಾ ಸಾಂಕ್ರಾಮಿಕದ ಕಾರಣ ಲಾಕ್ ಡೌನ್, ಕರ್ಫ್ಯೂ, ಸಾಮಾಜಿಕ ಅಂತರವನ್ನು ಕೇಂದ್ರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳು ಜಾರಿಗೆ ತಂದಿವೆ.
ಪವಿತ್ರ ರಂಜಾನ್ ತಿಂಗಳಲ್ಲಿ ತಮ್ಮ ಮನೆಗಳೊಳಗೆಯೇ ಉಳಿದುಕೊಂಡು ಎಲ್ಲಾ ಧಾರ್ಮಿಕ ವಿಧಿಗಳನ್ನು ನೆರವೇರಿಸಲು ಮತ್ತು ಲಾಕ್‌ಡೌನ್ ಮತ್ತು ಸಾಮಾಜಿಕ ಅಂತರವನ್ನು ಅನುಸರಿಸಲು ಜನರಿಗೆ ಅರಿವು ಮೂಡಿಸುವ ಅವಶ್ಯಕತೆಯಿದೆ ಎಂದು ಶ್ರೀ ನಖ್ವಿ ಹೇಳಿದರು. ಇಂತಹ ಪ್ರಯತ್ನಗಳು ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಮಾತ್ರವಲ್ಲದೆ ಇತರ ಸಾರ್ವಜನಿಕರ ಜೊತೆಗೆ ಪವಿತ್ರ ರಂಜಾನ್ ತಿಂಗಳಲ್ಲಿ ಮುಸ್ಲಿಮರು ಧಾರ್ಮಿಕ ವಿಧಿಗಳನ್ನು ನೆರವೇರಿಸುವ ಸ್ಥಳಗಳಲ್ಲಿಯೂ ಸಹ ಅಗತ್ಯವಾಗಿರುತ್ತದೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಮನವಿಯ ಮೇರೆಗೆ ಇಡೀ ದೇಶವು ಲಾಕ್ ಡೌನ್ ಮತ್ತು ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಗಂಭೀರವಾಗಿ ಮತ್ತು ಪ್ರಾಮಾಣಿಕವಾಗಿ ಅನುಸರಿಸುತ್ತಿದೆ ಎಂದು ಶ್ರೀ ನಖ್ವಿ ಹೇಳಿದರು. ಯಾವುದೇ ರೀತಿಯ ಅಜಾಗರೂಕತೆಯು ನಮಗೆ, ನಮ್ಮ ಕುಟುಂಬಕ್ಕೆ, ಸಮಾಜಕ್ಕೆ ಮತ್ತು ಇಡೀ ದೇಶಕ್ಕೆ ಹಾನಿಕಾರಕವಾಗಿದೆ. ಕೊರೊನಾವನ್ನು ತೊಲಗಿಸಲು ಎಲ್ಲಾ ಗಂಭೀರತೆ ಮತ್ತು ಪ್ರಾಮಾಣಿಕತೆಯಿಂದ ನಾವು ಆಡಳಿತದ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಅವರು ಹೇಳಿದರು.
***
(Release ID: 1614105)
Visitor Counter : 256
Read this release in:
English
,
Urdu
,
Hindi
,
Marathi
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam