ಪ್ರಧಾನ ಮಂತ್ರಿಯವರ ಕಛೇರಿ

ಪ್ಯಾಲೆಸ್ಟೈನ್ ಅಧ್ಯಕ್ಷರೊಂದಿಗೆ ದೂರವಾಣಿ ಮಾತುಕತೆ ನಡೆಸಿದ ಪ್ರಧಾನಿ

Posted On: 14 APR 2020 7:05PM by PIB Bengaluru

ಪ್ಯಾಲೆಸ್ಟೈನ್ ಅಧ್ಯಕ್ಷರೊಂದಿಗೆ ದೂರವಾಣಿ ಮಾತುಕತೆ ನಡೆಸಿದ ಪ್ರಧಾನಿ

 

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ಯಾಲೆಸ್ಟೈನ್ ಅಧ್ಯಕ್ಷ ಶ್ರೀ ಮಹಮೂದ್ ಅಬ್ಬಾಸ್ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದರು.

ಪ್ರಧಾನಿಯವರು ಮುಂಬರುವ ಪವಿತ್ರ ರಂಜಾನ್ ಮಾಸಕ್ಕಾಗಿ ಅಧ್ಯಕ್ಷರು ಮತ್ತು ಪ್ಯಾಲೆಸ್ಟೈನ್ ಜನತೆಗೆ ಶುಭಾಶಯಗಳನ್ನು ತಿಳಿಸಿದರು.

ಕೋವಿಡ್-19 ಸಾಂಕ್ರಾಮಿಕದಿಂದ ಎದುರಾಗಿರುವ ಸವಾಲುಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ತಮ್ಮ ದೇಶಗಳಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಪರಸ್ಪರ ತಿಳಿಸಿದರು.

ತಮ್ಮ ಜನರನ್ನು ವೈರಸ್ನಿಂದ ರಕ್ಷಿಸಲು ಪ್ಯಾಲೆಸ್ಟೈನ್ ಅಧಿಕಾರಿಗಳು ಮಾಡುತ್ತಿರುವ ಪ್ರಯತ್ನಗಳನ್ನು ಪ್ರಧಾನಿಯವರು ಶ್ಲಾಘಿಸಿದರು ಮತ್ತು ಪ್ರಯತ್ನಗಳಿಗೆ ಭಾರತದಿಂದ ಸಾಧ್ಯವಿರುವ ಎಲ್ಲ ಬೆಂಬಲದ ಭರವಸೆ ನೀಡಿದರು.

ಸವಾಲಿನ ಸಮಯದಲ್ಲಿ ಸಹಕಾರದ ಮಾರ್ಗಗಳನ್ನು ಹುಡುಕಲು ಸೂಕ್ತ ಮಟ್ಟದಲ್ಲಿ ಸಂಪರ್ಕದಲ್ಲಿರಲು ಉಭಯ ನಾಯಕರು ಒಪ್ಪಿದರು.

***(Release ID: 1614579) Visitor Counter : 140