ಗೃಹ ವ್ಯವಹಾರಗಳ ಸಚಿವಾಲಯ

ಕೋವಿಡ್-19 ವಿರುದ್ಧ ಹೋರಾಡಲು ಲಾಕ್ ಡೌನ್ ನಿರ್ಬಂಧಗಳ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಕಷ್ಟದಲ್ಲಿ ಸಿಲುಕಿರುವ ಜನರ ಸಂಚಾರಕ್ಕಾಗಿ ವಿಶೇಷ ರೈಲುಗಳ ಕಾರ್ಯ ನಿರ್ವಹಣೆ

Posted On: 01 MAY 2020 4:47PM by PIB Bengaluru

ಕೋವಿಡ್-19 ವಿರುದ್ಧ ಹೋರಾಡಲು ಲಾಕ್ ಡೌನ್ ನಿರ್ಬಂಧಗಳ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಕಷ್ಟದಲ್ಲಿ ಸಿಲುಕಿರುವ ಜನರ ಸಂಚಾರಕ್ಕಾಗಿ ವಿಶೇಷ ರೈಲುಗಳ ಕಾರ್ಯ ನಿರ್ವಹಣೆ

 

ದೇಶದ ನಾನಾ ಭಾಗಗಳಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು, ಯಾತ್ರಾರ್ಥಿಗಳು, ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಇತರೆ ವ್ಯಕ್ತಿಗಳ ಸಂಚಾರಕ್ಕೆ ಅನುವಾಗುವಂತೆ ರೈಲ್ವೆ ಸಚಿವಾಲಯದಿಂದ(ಎಂಒಆರ್) ವಿಶೇಷ ರೈಲುಗಳ ಸಂಚಾರಕ್ಕೆ ಸಂಬಂಧಿಸಿದಂತೆ ಅನುಮತಿ ನೀಡಿ, ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ(ಎಂಎಚ್ಎ) ಆದೇಶ ಹೊರಡಿಸಿದೆ.

ರೈಲ್ವೆ ಸಚಿವಾಲಯ, ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದವರ ಸಂಚಾರಕ್ಕೆ ಅನುಕೂಲವಾಗುವಂತೆ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಿದೆ. ಅಲ್ಲದೆ ಇದು ಟಿಕೆಟ್ ಗಳ ಮಾರಾಟ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ರೈಲು ನಿಲ್ದಾಣ, ರೈಲ್ವೆ ಪ್ಲಾಟ್ ಫಾರಂ ಹಾಗೂ ರೈಲುಗಳೊಳಗೆ ಕೈಗೊಳ್ಳಬೇಕಾಗಿರುವ ಇತರೆ ಸುರಕ್ಷತಾ ಕ್ರಮಗಳ ಕುರಿತಂತೆ ವಿವರವಾದ ಮಾರ್ಗಸೂಚಿಯನ್ನು ಹೊರಡಿಸಲಿದೆ.

 

ಈ ಕುರಿತಂತೆ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಕಳುಹಿಸಿರುವ ಅಧಿಕೃತ ಸಂವಹನ ಪತ್ರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

 

***


(Release ID: 1620243) Visitor Counter : 242