ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಹೊಸ ಮಾಹಿತಿ
Posted On:
02 MAY 2020 4:36PM by PIB Bengaluru
ಕೋವಿಡ್-19 ಹೊಸ ಮಾಹಿತಿ
ಶ್ರೇಣೀಕೃತ, ಹತೋಟಿಯಲ್ಲಿಡುವ ಮತ್ತು ಸಕ್ರಿಯ ವಿಧಾನದ ಮೂಲಕ, ಕೋವಿಡ್-19ರ ತಡೆಗಟ್ಟುವಿಕೆಗೆ ಮತ್ತು ನಿರ್ವಹಣೆಗಾಗಿ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಭಾರತ ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇವುಗಳನ್ನು ನಿಯಮಿತವಾಗಿ ಉನ್ನತ ಮಟ್ಟದಲ್ಲಿ ಪರಿಶೀಲಿಸಲಾಗುತ್ತಿದೆ ಮತ್ತು ಮೇಲ್ವಿಚಾರಣೆ ಮಾಡಲಾಗುತ್ತಿದೆ.
ವೈಯಕ್ತಿಕ ರಕ್ಷಣಾ ಸಾಧನಗಳ ತರ್ಕಬದ್ಧ ಬಳಕೆಯ ಕುರಿತು ಹೆಚ್ಚುವರಿ ಮಾರ್ಗಸೂಚಿಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ನಿನ್ನೆ ಹೊರಡಿಸಿದೆ. ಈ ಮಾರ್ಗಸೂಚಿಗಳು ‘ವೈಯಕ್ತಿಕ ರಕ್ಷಣಾ ಸಲಕರಣೆಗಳ ತರ್ಕಬದ್ಧ ಬಳಕೆ’ ಕುರಿತು ಈ ಹಿಂದೆ ನೀಡಲಾದ ಮಾರ್ಗಸೂಚಿಗಳ ಮುಂದುವರೆದ ಭಾಗವಾಗಿದೆ. ವಿವರವಾದ ಮಾರ್ಗಸೂಚಿಗಳನ್ನು ಇಲ್ಲಿ ನೋಡಬಹುದು: https://www.mohfw.gov.in/pdf/AdditionalguidelinesonrationaluseofPersonalProtectiveEquipmentsettingapproachforHealthfunctionariesworkinginnonCOVIDareas.pdf
ಈವರೆಗೆ ಒಟ್ಟು 9950 ಜನರನ್ನು ಗುಣಪಡಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ, 1061 ರೋಗಿಗಳು ಗುಣಮುಖರಾಗಿದ್ದಾರೆ. ಇದು ನಮ್ಮ ಒಟ್ಟು ಚೇತರಿಕೆ ಪ್ರಮಾಣವು 26.65% ಆಗಿದೆ. ದೃಢಪಡಿಸಿದ ಒಟ್ಟು ಪ್ರಕರಣಗಳ ಸಂಖ್ಯೆ ಈಗ 37,336 ಆಗಿದೆ. ನಿನ್ನೆಯಿಂದ, ಭಾರತದಲ್ಲಿ ಕೋವಿಡ್-19 ದೃಢಪಡಿಸಿದ ಪ್ರಕರಣಗಳ ಸಂಖ್ಯೆಯಲ್ಲಿ 2293 ಹೆಚ್ಚಳ ಕಂಡುಬಂದಿದೆ.
ಕೋವಿಡ್-19ಗೆ ಸಂಬಂಧಿತ ತಾಂತ್ರಿಕ ಸಮಸ್ಯೆಗಳು, ಮಾರ್ಗಸೂಚಿಗಳು ಮತ್ತು ಸಲಹೆಗಳ ಎಲ್ಲಾ ಅಧಿಕೃತ ಮತ್ತು ಹೊಸ ಮಾಹಿತಿಗಾಗಿ ದಯವಿಟ್ಟು ಇಲಾಖೆಯ ಜಾಲತಾಣಕ್ಕೆ ನಿಯಮಿತವಾಗಿ ಭೇಟಿ ನೀಡಿ: https://www.mohfw.gov.in
ಕೋವಿಡ್-19 ಗೆ ಸಂಬಂಧಿಸಿದ ತಾಂತ್ರಿಕ ಪ್ರಶ್ನೆಗಳನ್ನು technquery.covid19[at]gov[dot]in , ಇತರ ಪ್ರಶ್ನೆಗಳನ್ನು ಕೇಳಲು ncov2019[at]gov[dot]in ಗೆ ಇಮೇಲ್ ಮಾಡಬಹುದು ಮತ್ರು @CovidIndiaSeva ಗೆ ಟ್ವೀಟ್ ಮಾಡಬಹುದು.
ಕೋವಿಡ್-19 ಬಗ್ಗೆ ಯಾವುದೇ ಪ್ರಶ್ನೆಗಳಿದ್ದಲ್ಲಿ, ದಯವಿಟ್ಟು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ. : +91-11-23978046 ಅಥವಾ 1075 (ಟೋಲ್-ಫ್ರೀ). ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಕೋವಿಡ್-19ಗೆ ಸಂಬಂಧಿಸಿದ ಸಹಾಯವಾಣಿ ಸಂಖ್ಯೆಗಳ ಪಟ್ಟಿ https://www.mohfw.gov.in/pdf/coronvavirushelplinenumber.pdf ನಲ್ಲಿಯೂ ಲಭ್ಯವಿದೆ.
***
(Release ID: 1620518)
Visitor Counter : 173
Read this release in:
English
,
Urdu
,
Hindi
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam