ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಹೊಸ ಮಾಹಿತಿ
Posted On:
06 MAY 2020 6:18PM by PIB Bengaluru
ಕೋವಿಡ್-19 ಹೊಸ ಮಾಹಿತಿ
ಕೋವಿಡ್ 19 ನಿಂದ ಬಳಲುತ್ತಿದ್ದ 14,183 ಜನರನ್ನು ಗುಣಪಡಿಸಲಾಗಿದೆ
ಶ್ರೇಣೀಕೃತ, ಹತೋಟಿಯಲ್ಲಿಡುವ ಮತ್ತು ಸಕ್ರಿಯ ವಿಧಾನದ ಮೂಲಕ, ಕೋವಿಡ್-19ರ ತಡೆಗಟ್ಟುವಿಕೆಗೆ ಮತ್ತು ನಿರ್ವಹಣೆಗಾಗಿ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಭಾರತ ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇವುಗಳನ್ನು ನಿಯಮಿತವಾಗಿ ಉನ್ನತ ಮಟ್ಟದಲ್ಲಿ ಪರಿಶೀಲಿಸಲಾಗುತ್ತಿದೆ ಮತ್ತು ಮೇಲ್ವಿಚಾರಣೆ ಮಾಡಲಾಗುತ್ತಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷ್ ವರ್ಧನ್ ಅವರು ಇಂದು ಗುಜರಾತಿನ ಉಪ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಾದ ಶ್ರೀ ನಿತಿನ್ ಭಾಯ್ ಪಟೇಲ್ ಮತ್ತು ಮಹಾರಾಷ್ಟ್ರದ ಆರೋಗ್ಯ ಸಚಿವರಾದ ಶ್ರೀ ರಾಜೇಶ್ ಟೊಪೆ ಅವರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆಯವರ ಉಪಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಹಿರಿಯ ಅಧಿಕಾರಿಗಳೊಂದಿಗೆ ಎರಡೂ ರಾಜ್ಯಗಳಲ್ಲಿನ ಕೋವಿಡ್ ನ ಪರಿಸ್ಥಿತಿ, ಕ್ರಮಗಳು ಮತ್ತು ನಿರ್ವಹಣೆಗೆ ಸನ್ನದ್ಧತೆಯನ್ನು ಪರಿಶೀಲಿಸಲು ಸಭೆ ನಡೆಸಿದರು.
ಕೋವಿಡ್ ರಹಿತದ ಅಗತ್ಯ ಸೇವೆಗಳನ್ನು ನಿರ್ಲಕ್ಷಿಸದಂತೆ ನೋಡಿಕೊಳ್ಳುವ ಅಗತ್ಯವನ್ನು ಡಾ. ಹರ್ಷ್ ವರ್ಧನ್ ಒತ್ತಿ ಹೇಳಿದರು. ಅಲ್ಲದೆ, ತೀವ್ರವಾದ ತೀವ್ರ ಉಸಿರಾಟದ ಸೋಂಕುಗಳು (ಎಸ್ ಎ ಆರ್ ಐ), ಶೀತಜ್ವರ ಮಾದರಿಯ ಅನಾರೋಗ್ಯ (ಐಎಲ್ಐ) ಪ್ರಕರಣಗಳ ಸ್ಕ್ರೀನಿಂಗ್ ಮತ್ತು ಪರೀಕ್ಷೆಯನ್ನು ಕೈಗೊಳ್ಳಲಾಗಿದೆಯೆ ಎಂದು ರಾಜ್ಯಗಳು ಖಚಿತಪಡಿಸಿಕೊಳ್ಳಬೇಕು, ಇದು ಯಾವುದೇ ಮುಂದೆ ಆಗಬಹುದಾದ ಹಾಟ್ಸ್ಪಾಟ್ಗಳನ್ನು ಗುರುತಿಸಲು ಸಹಾಯ ಮಾಡುತ್ತದೆ ಮತ್ತು ಅವುಗಳ ನಿರ್ವಹಣೆಗೆ ಸಮಯೋಚಿತವಾಗಿ ಸೂಕ್ತವಾದ ಕಾರ್ಯತಂತ್ರವನ್ನು ನೀಡುತ್ತದೆ. ಕೋವಿಡ್-19 ರ ವಿರುದ್ಧದ ಕಳಂಕವನ್ನು ತೊಡೆದುಹಾಕಲು ಪರಿಣಾಮಕಾರಿಯಾದ ನಡವಳಿಕೆಯ ಬದಲಾವಣೆ ಸಂವಹನದ ಕಾರ್ಯವನ್ನು ಕೈಗೊಳ್ಳಬೇಕಿದೆ, ಇದು ಸಮಯೋಚಿತ ವರದಿ, ಕ್ಲಿನಿಕಲ್ ನಿರ್ವಹಣೆ ಮತ್ತು ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅವರು ಒತ್ತಿ ಹೇಳಿದರು.
ಈವರೆಗೆ ಒಟ್ಟು 14,183 ಜನರನ್ನು ಗುಣಪಡಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 1457 ರೋಗಿಗಳು ಗುಣಮುಖರಾಗಿದ್ದಾರೆ. ಇದರಿಂದಾಗಿ ಒಟ್ಟು ಗುಣಮುಖರಾದ ಪ್ರಮಾಣವು 28.72% ಆಗಿದೆ ದೃಢಪಡಿಸಿದ ಒಟ್ಟು ಪ್ರಕರಣಗಳ ಸಂಖ್ಯೆ ಈಗ 49,391 ಆಗಿದೆ. ನಿನ್ನೆಯಿಂದ, ಭಾರತದಲ್ಲಿ ಕೋವಿಡ್-19 ದೃಢಪಡಿಸಿದ ಪ್ರಕರಣಗಳ ಸಂಖ್ಯೆಯಲ್ಲಿ 2958 ಹೆಚ್ಚಳ ಕಂಡುಬಂದಿದೆ.
ಕೋವಿಡ್-19ಗೆ ಸಂಬಂಧಿತ ತಾಂತ್ರಿಕ ಸಮಸ್ಯೆಗಳು, ಮಾರ್ಗಸೂಚಿಗಳು ಮತ್ತು ಸಲಹೆಗಳ ಎಲ್ಲಾ ಅಧಿಕೃತ ಮತ್ತು ಹೊಸ ಮಾಹಿತಿಗಾಗಿ ದಯವಿಟ್ಟು ಇಲಾಖೆಯ ಜಾಲತಾಣಕ್ಕೆ ನಿಯಮಿತವಾಗಿ ಭೇಟಿ ನೀಡಿ: https://www.mohfw.gov.in
ಕೋವಿಡ್-19 ಗೆ ಸಂಬಂಧಿಸಿದ ತಾಂತ್ರಿಕ ಪ್ರಶ್ನೆಗಳನ್ನು technquery.covid19[at]gov[dot]in , ಇತರ ಪ್ರಶ್ನೆಗಳನ್ನು ಕೇಳಲು ncov2019[at]gov[dot]in ಗೆ ಇಮೇಲ್ ಮಾಡಬಹುದು ಮತ್ರು @CovidIndiaSeva ಗೆ ಟ್ವೀಟ್ ಮಾಡಬಹುದು.
ಕೋವಿಡ್-19 ಬಗ್ಗೆ ಯಾವುದೇ ಪ್ರಶ್ನೆಗಳಿದ್ದಲ್ಲಿ, ದಯವಿಟ್ಟು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ. : +91-11-23978046 ಅಥವಾ 1075 (ಟೋಲ್-ಫ್ರೀ). ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಕೋವಿಡ್-19ಗೆ ಸಂಬಂಧಿಸಿದ ಸಹಾಯವಾಣಿ ಸಂಖ್ಯೆಗಳ ಪಟ್ಟಿ https://www.mohfw.gov.in/pdf/coronvavirushelplinenumber.pdf ನಲ್ಲಿಯೂ ಲಭ್ಯವಿದೆ.
***
(Release ID: 1621635)
Visitor Counter : 214
Read this release in:
English
,
Urdu
,
Hindi
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam