ಗೃಹ ವ್ಯವಹಾರಗಳ ಸಚಿವಾಲಯ

ಕೋವಿಡ್-19 ನಿರ್ವಹಣೆ ಸ್ಥಿತಿಗತಿ ಕುರಿತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಆರೋಗ್ಯ ಕಾರ್ಯದರ್ಶಿಗಳೊಂದಿಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ ಸಂಪುಟ ಕಾರ್ಯದರ್ಶಿ

प्रविष्टि तिथि: 10 MAY 2020 2:51PM by PIB Bengaluru

ಕೋವಿಡ್-19 ನಿರ್ವಹಣೆ ಸ್ಥಿತಿಗತಿ ಕುರಿತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಆರೋಗ್ಯ ಕಾರ್ಯದರ್ಶಿಗಳೊಂದಿಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ ಸಂಪುಟ ಕಾರ್ಯದರ್ಶಿ


ಸಂಪುಟ ಕಾರ್ಯದರ್ಶಿ ಶ್ರೀ ರಾಜೀವ್ ಗೌಬಾ ಅವರು, ಕೋವಿಡ್-19 ನಿರ್ವಹಣೆ ಸ್ಥಿತಿಗತಿ ಕುರಿತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಆರೋಗ್ಯ ಕಾರ್ಯದರ್ಶಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಂಪುಟ ಕಾರ್ಯದರ್ಶಿಗಳು, ಸುಮಾರು 3.5 ಲಕ್ಷ ವಲಸೆ ಕಾರ್ಮಿಕರ ಸಂಚಾರಕ್ಕೆ ರೈಲ್ವೆ 350ಕ್ಕೂ ಅಧಿಕ ಶ್ರಮಿಕ ವಿಶೇಷ ರೈಲುಗಳ ಸಂಚಾರ ನಡೆಸಿರುವುದನ್ನು ಉಲ್ಲೇಖಿಸಿದರು. ಅವರು ಹೆಚ್ಚಿನ ಶ್ರಮಿಕ ವಿಶೇಷ ರೈಲುಗಳ ಸಂಚಾರ ಕೈಗೊಳ್ಳಲು ರಾಜ್ಯ ಸರ್ಕಾರಗಳು ಸಹಕಾರ ನೀಡಬೇಕು ಎಂದು ಕೋರಿದರು. ಅಲ್ಲದೆ, ವಂದೇ ಭಾರತ್ ಮಿಷನ್ ಅಡಿ ವಿದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ವಾಪಸ್ ಕರೆತರಲು ರಾಜ್ಯಗಳು ಸಹಕಾರ ನೀಡುತ್ತಿರುವುದನ್ನು ಉಲ್ಲೇಖಿಸಿದರು.

ಸಂಪುಟ ಕಾರ್ಯದರ್ಶಿಗಳು, ವೈದ್ಯರು, ನರ್ಸ್ ಗಳು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಸಂಚಾರಕ್ಕೆ ಯಾವುದೇ ಅಡೆತಡೆ ಆಗದಂತೆ ನೋಡಿಕೊಳ್ಳಬೇಕು ಎಂದು ಪ್ರತಿಪಾದಿಸಿದ ಅವರು, ಕೊರೊನಾ ಯೋಧರ ರಕ್ಷಣೆಗೆ ಮತ್ತು ಅವರಿಗೆ ನೆರವಾಗಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ತಮ್ಮ ತಮ್ಮ ರಾಜ್ಯಗಳಲ್ಲಿನ ಸ್ಥಿತಿಯನ್ನು ವಿವರಿಸಿದರು ಮತ್ತು ಕೋವಿಡ್-19 ರಕ್ಷಣೆಗೆ ಕ್ರಮಗಳನ್ನು ಕೈಗೊಳ್ಳುವಾಗ ಆರ್ಥಿಕ ಚಟುವಟಿಕೆಗಳನ್ನು ಕೂಡ ಹಂತ ಹಂತವಾಗಿ ಚುರುಕುಗೊಳಿಸುವ ಅಗತ್ಯವಿದೆ ಎಂದು ಹೇಳಿದರು.


***


(रिलीज़ आईडी: 1622782) आगंतुक पटल : 268
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Punjabi , Odia , Tamil , Telugu , Malayalam