ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಹೊಸ ಮಾಹಿತಿ

Posted On: 11 MAY 2020 5:27PM by PIB Bengaluru

ಕೋವಿಡ್-19 ಹೊಸ ಮಾಹಿತಿ

ಇಲ್ಲಿಯವರೆಗೆ, 20,917 ಜನರನ್ನು ಗುಣಪಡಿಸಲಾಗಿದೆ; ಚೇತರಿಕೆಯ ಪ್ರಮಾಣವು 31.15% ಕ್ಕೆ ಏರಿಕೆ

 

ಈವರೆಗೆ ಒಟ್ಟು 20,917 ಜನರನ್ನು ಗುಣಪಡಿಸಲಾಗಿದೆ. ಇದು ಒಟ್ಟು ಚೇತರಿಕೆ ಪ್ರಮಾಣವನ್ನು 31.15% ಕ್ಕೆ ಏರಿಕೆಯಾಗಿದ್ದು ಒಟ್ಟು ದೃಢಪಡಿಸಿದ ಪ್ರಕರಣಗಳ ಸಂಖ್ಯೆ 67,152 ಆಗಿದೆ. ನಿನ್ನೆಯಿಂದ, ಭಾರತದಲ್ಲಿ ಕೋವಿಡ್-19 ದೃಢಪಡಿಸಿದ ಪ್ರಕರಣಗಳ ಸಂಖ್ಯೆಯಲ್ಲಿ 4,213 ರಷ್ಟು ಹೆಚ್ಚಳ ಕಂಡುಬಂದಿದೆ.

ವಿವಿಧ ವೈದ್ಯಕೀಯ ವೃತ್ತಿಪರರ ಕಾರ್ಯವನ್ನು ಶ್ಲಾಘಿಸಿದ ಡಾ.ಹರ್ಷ ವರ್ಧನ್, ಕೋವಿಡ್ -19 ರೊಂದಿಗೆ ವ್ಯವಹರಿಸುವಾಗ, ವಿಶೇಷವಾಗಿ ಕಳೆದ ಮೂರು ತಿಂಗಳಲ್ಲಿ ವೈದ್ಯರು ತೋರಿಸಿದ ಅವಿರತ ಶ್ರಮಕ್ಕಾಗಿ ದೇಶವು ಹೆಮ್ಮೆಪಡುತ್ತದೆ ಎಂದು ಹೇಳಿದರು. ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರನ್ನು ರೋಗದ ಕಾರಣದಿಂದಾಗಿ ಅವರಿಗೆ ಕಳಂಕ ತರಬಾರದು ಅಥವಾ ಅದಕ್ಕೆ ಗುರಿಯಾಗಿಸಬಾರದು ಎಂದು ಅವರು ಮತ್ತೆ ರಾಷ್ಟ್ರಕ್ಕೆ ಮನವಿ ಮಾಡಿದರು; ಬದಲಾಗಿ ಸಾರ್ವಜನಿಕರಿಗೆ ಹೆಚ್ಚಿನ ಸಹಾಯ ಮಾಡುವಲ್ಲಿ ಅವರು ಮಾಡಿದ ಪ್ರಯತ್ನವನ್ನು ಶ್ಲಾಘಿಸಬೇಕು. ಕೋವಿಡ್-19 ವಿರುದ್ಧದ ಹೋರಾಟವನ್ನು ಮುಂದುವರಿಸಲು ವೈದ್ಯರಿಗೆ, ದಾದಿಯರಿಗೆ, ಆರೋಗ್ಯ ಕಾರ್ಯಕರ್ತರಿಗೆ ನಮ್ಮ ಗೌರವ, ಬೆಂಬಲ ಮತ್ತು ಸಹಕಾರದ ಅಗತ್ಯವಿದೆ ಎಂದು ಅವರು ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಇಂದು ಕೋವಿಡ್-19ಗಾಗಿ ಜಿಲ್ಲಾ ಮಟ್ಟದ ಸೌಲಭ್ಯ ಆಧಾರಿತ ಕಣ್ಗಾವಲು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇದನ್ನು ಕೊಂಡಿಯಲ್ಲಿ ನೋಡಬಹುದು: https://www.mohfw.gov.in/pdf/DistrictlevelFacilitybasedsurveillanceforCOVID19.pdf

ಕೋವಿಡ್-19ಗೆ ಸಂಬಂಧಿತ ತಾಂತ್ರಿಕ ಸಮಸ್ಯೆಗಳು, ಮಾರ್ಗಸೂಚಿಗಳು ಮತ್ತು ಸಲಹೆಗಳ ಎಲ್ಲಾ ಅಧಿಕೃತ ಮತ್ತು ಹೊಸ ಮಾಹಿತಿಗಾಗಿ ದಯವಿಟ್ಟು ಇಲಾಖೆಯ ಜಾಲತಾಣಕ್ಕೆ ನಿಯಮಿತವಾಗಿ ಭೇಟಿ ನೀಡಿ: https://www.mohfw.gov.in

ಕೋವಿಡ್-19 ಗೆ ಸಂಬಂಧಿಸಿದ ತಾಂತ್ರಿಕ ಪ್ರಶ್ನೆಗಳನ್ನು technquery.covid19[at]gov[dot]in , ಇತರ ಪ್ರಶ್ನೆಗಳನ್ನು ಕೇಳಲು ncov2019[at]gov[dot]in ಗೆ ಇಮೇಲ್ ಮಾಡಬಹುದು ಮತ್ರು @CovidIndiaSeva ಗೆ ಟ್ವೀಟ್ ಮಾಡಬಹುದು.

ಕೋವಿಡ್-19 ಬಗ್ಗೆ ಯಾವುದೇ ಪ್ರಶ್ನೆಗಳಿದ್ದಲ್ಲಿ, ದಯವಿಟ್ಟು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: +91-11-23978046 ಅಥವಾ 1075 (ಟೋಲ್-ಫ್ರೀ). ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಕೋವಿಡ್-19ಗೆ ಸಂಬಂಧಿಸಿದ ಸಹಾಯವಾಣಿ ಸಂಖ್ಯೆಗಳ ಪಟ್ಟಿಯು https://www.mohfw.gov.in/pdf/coronvavirushelplinenumber.pdf ನಲ್ಲಿಯೂ ಲಭ್ಯವಿದೆ.

***


(Release ID: 1623117) Visitor Counter : 192