ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ

ಆತ್ಮ ನಿರ್ಭರ ಭಾರತ ಅಭಿಯಾನದಡಿ 8 ಕೋಟಿ ವಲಸೆ ಕಾರ್ಮಿಕರಿಗೆ ಹಾಗು ಅವರ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲಾಗುವುದು

Posted On: 16 MAY 2020 5:20PM by PIB Bengaluru

ಆತ್ಮ ನಿರ್ಭರ ಭಾರತ ಅಭಿಯಾನದಡಿ 8 ಕೋಟಿ ವಲಸೆ ಕಾರ್ಮಿಕರಿಗೆ ಹಾಗು ಅವರ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲಾಗುವುದು

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಲಾದ ಆಹಾರ ಧಾನ್ಯಗಳ ಸಂಪೂರ್ಣ ವೆಚ್ಚವನ್ನು ಭಾರತ ಸರ್ಕಾರವು ಭರಿಸಲಿದೆ: ಶ್ರೀ ರಾಮ್ ವಿಲಾಸ್ ಪಾಸ್ವಾನ್

ಆಗಸ್ಟ್ 2020 ವೇಳೆಗೆ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಒಂದು ದೇಶ, ಒಂದು ಪಡಿತರ ಚೀಟಿ ಯೋಜನೆಯ ಭಾಗವಾಗಲಿವೆ: ಶ್ರೀ ಪಾಸ್ವಾನ್

 

ಮೋದಿ ಸರ್ಕಾರವು ವಲಸೆ ಕಾರ್ಮಿಕರ ಮತ್ತು ಬಡವರ ದುಃಸ್ಥಿತಿಯ ಬಗ್ಗೆ ಸೂಕ್ಷ್ಮತೆಯನ್ನು ಹೊಂದಿದೆ ಮತ್ತು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯವು ಯಾರೂ ಹಸಿವಿನಿಂದ ಬಳಲದೇ ಇರುವುದನ್ನು ಖಾತ್ರಿಪಡಿಸಿಕೊಳ್ಳಲು ಸರ್ವಪ್ರಯತ್ನವನ್ನೂ ಮಾಡುತ್ತಿದೆ. ಕೃಷಿ ಭವನದಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಧ್ಯಮದವರೊಡನೆ ಸಂವಾದದ ಸಂದರ್ಭದಲ್ಲಿ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಶ್ರೀ ರಾಮ್ ವಿಲಾಸ್ ಪಾಸ್ವಾನ್ ವಿಷಯವನ್ನು ತಿಳಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಅವರು 12 ಮೇ 2020ರಂದು 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಆರ್ಥಿಕ ಮತ್ತು ಸಮಗ್ರ ಪ್ಯಾಕೇಜ್ ಘೋಷಿಸಿದರು. ಆರ್ಥಿಕ ಕ್ರಮಗಳ ಭಾಗವಾಗಿ (ಆತ್ಮ ನಿರ್ಭರ ಭಾರತ್ ಅಭಿಯಾನ್) ಹಣಕಾಸು ಸಚಿವರಾದ ಶ್ರೀಮತಿ. ನಿರ್ಮಲಾ ಸೀತಾರಾಮನ್ ವಲಸೆ ಕಾರ್ಮಿಕರು ಸೇರಿದಂತೆ ಬಡವರನ್ನು ಬೆಂಬಲಿಸಲು ಅನೇಕ ಅಲ್ಪ ಮತ್ತು ದೀರ್ಘಾವಧಿಯ ಕ್ರಮಗಳನ್ನು ಘೋಷಿಸಿದರು. ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಥವಾ ರಾಜ್ಯ ಯೋಜನೆ ಪಿಡಿಎಸ್ ಕಾರ್ಡ್ಗಳ ವ್ಯಾಪ್ತಿಗೆ ಒಳಪಡದ 8 ಕೋಟಿ ವಲಸೆ ಕಾರ್ಮಿಕರಿಗೆ ತಿಂಗಳಿಗೆ 5 ಕೆಜಿಯಂತೆ ಎರಡು ತಿಂಗಳ (ಮೇ ಮತ್ತು ಜೂನ್, 2020).ಉಚಿತ ಆಹಾರ ಧಾನ್ಯಗಳು ಮತ್ತು ಬೇಳೆಕಾಳುಗಳ ವಿತರಣೆಯನ್ನು ಒಳಗೊಂಡಿದೆ.

ಇಂದು ನವದೆಹಲಿಯಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ಮೂಲಕ ಗ್ರಾಹಕ ವ್ಯವಹಾರ ಮತ್ತು ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಶ್ರೀ ರಾಮ್ ವಿಲಾಸ್ ಪಾಸ್ವಾನ್ ಪತ್ರಿಕಾಗೋಷ್ಠಿ ನಡೆಸಿದರು.

ಅನಿಶ್ಚಿತ ಕೋವಿಡ್-19 ಪರಿಸ್ಥಿತಿಯಲ್ಲಿ ವಲಸಿಗರ ದುಃಸ್ಥಿತಿಯನ್ನು ತಗ್ಗಿಸಲು ಮತ್ತು ಅವರಿಗೆ ಮತ್ತು ಅವರ ಕುಟುಂಬಗಳಿಗೆ ಆಹಾರ ಧಾನ್ಯಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು, 8 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಾಗಿದೆ ಮತ್ತು ರಾಜ್ಯದೊಳಗಿನ ಸಾರಿಗೆ, ವಿತರಕರ ಲಾಭ, ವಿತರಣೆಯ ವೆಚ್ಚ ಸೇರಿದಂತೆ ಭಾರತ ಸರ್ಕಾರವು ಇದರ ಸಂಪೂರ್ಣ ಭರಿಸಲಿದೆ ಎಂದು ಶ್ರೀ ಪಾಸ್ವಾನ್ ಹೇಳಿದರು.

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶವಾರು ಹಂಚಿಕೆಯ ಆದೇಶಗಳನ್ನು ಹೊರಡಿಸಲಾಗಿದೆ ಎಂದು ಅವರು ಹೇಳಿದರು. ನಿರ್ದಿಷ್ಟ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎನ್ಎಫ್ಎಸ್ ವ್ಯಾಪ್ತಿಗೆ ಒಳಪಡುವ ಒಟ್ಟು ಫಲಾನುಭವಿಗಳ 10%ರಷ್ಟು ಭಾಗವನ್ನು ಹಂಚಿಕೆ ಮಾಡಲಾಗಿದೆ. ಫಲಾನುಭವಿಗಳನ್ನು ಗುರುತಿಸುವುದು ಮತ್ತು ಅಂತಹ ಫಲಾನುಭವಿಗಳಿಗೆ ಆಹಾರ ಧಾನ್ಯಗಳನ್ನು ವಿತರಿಸುವುದು ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

 

ಹಂಚಿಕೆಯಾದ ಆಹಾರ ಧಾನ್ಯಗಳನ್ನು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯೊಂದಿಗೆ ಸಂಪೂರ್ಣವಾಗಿ ವಿತರಿಸಿದ ನಂತರ ತಮ್ಮ ವಿವರಗಳನ್ನು ಹಂಚಿಕೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರಲು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಳಿಗೆ ಮನವಿ ಮಾಡಲಾಗಿದೆ ಎಂದು ಶ್ರೀ ಪಾಸ್ವಾನ್ ತಿಳಿಸಿದರು. ಜುಲೈ 15, 2020 ಒಳಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಳಿಗೆ ವಿತರಣಾ ವಿವರಗಳನ್ನು ಉಳಿದ ಆಹಾರ ಧಾನ್ಯದ ವಿವರಣೆಗಳೊಂದಿಗೆ ಇಲಾಖೆಗೆ ವರದಿ ಮಾಡಬಹುದು. ಆಹಾರ ಧಾನ್ಯಗಳ ವಿತರಣೆಯನ್ನು ಪರಿಶೀಲಿಸಲು ಶ್ರೀ ಪಾಸ್ವಾನ್ ಅವರು ಮುಂದಿನ ವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಹಾರ ಮಂತ್ರಿಗಳ ಸಭೆ ಕರೆಯುವುದಾಗಿ ಹೇಳಿದರು.

ಇದಲ್ಲದೆ, ‘ಒಂದು ದೇಶ ಒಂದು ಪಡಿತರ ಚೀಟಿಯೋಜನೆಯಡಿ ಪಡಿತರ ಚೀಟಿಯ ರಾಷ್ಟ್ರೀಯಮಟ್ಟದ ವರ್ಗಾವಣೆಯನ್ನು ಖಚಿತಪಡಿಸಿಕೊಳ್ಳಲು ಇಲಾಖೆಯು ಸಾರ್ವಜನಿಕ ವಿತರಣಾ ವ್ಯವಸ್ಥೆಯ ಸಮಗ್ರ ನಿರ್ವಹಣೆಯನ್ನು (ಐಎಂ-ಪಿಡಿಎಸ್) ಪ್ರಾರಂಭಿಸಿದೆ ಎಂದು ಶ್ರೀ ಪಾಸ್ವಾನ್ ಹೇಳಿದರು. ಮೇ 1, 2020 ವೇಳೆಗೆ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಫಲಾನುಭವಿಗಳು ಒಂದು ದೇಶ ಒಂದು ಪಡಿತರ ಚೀಟಿ ಯೋಜನೆಯಲ್ಲಿ ಸೇರಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಜೂನ್ 2020 ವೇಳೆಗೆ ಇನ್ನೂ 3 ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳನ್ನು ಸೇರಿಸಲಾಗುವುದು ಮತ್ತು ಆಗಸ್ಟ್ 2020 ವೇಳೆಗೆ ಒಟ್ಟು 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಯೋಜನೆಯ ಭಾಗವಾಗಲಿದೆ ಎಂದು ಅವರು ಹೇಳಿದರು. ಮಾರ್ಚ್ 2021 ವೇಳೆಗೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಯೋಜನೆಯನ್ನು ಜಾರಿಗೆ ತರಲು ಡಿಒಎಫ್ಪಿಡಿ ಗುರಿ ಹೊಂದಿದೆ ಎಂದು ಅವರು ಹೇಳಿದರು. ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ, ವಲಸೆ ಕಾರ್ಮಿಕರು ಒಎನ್ಒಸಿ ಯೋಜನೆಯಿಂದ ಹೆಚ್ಚಿನ ಲಾಭ ಪಡೆಯುತ್ತಾರೆ ಏಕೆಂದರೆ ಒಂದು ದೇಶ ಒಂದು ಪಡಿತರ ಚೀಟಿ ವ್ಯಾಪ್ತಿಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಿಡಿಎಸ್ ಫಲಾನುಭವಿಗಳು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ಪರಿಶೀಲನೆಯೊಂದಿಗೆ ತಮ್ಮ ಪಡಿತರವನ್ನು ಯಾವುದೇ ಸಮಯದಲ್ಲಿ ತೆಗೆದುಕೊಳ್ಳಬಹುದು.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶವಾರು ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯಗಳ ಹೆಚ್ಚುವರಿ ಹಂಚಿಕೆಯ ವಿವರಣೆಗಾಗಿ ದಯವಿಟ್ಟು ಇಲ್ಲಿ ಕ್ಲಿಕ್ ಮಾಡಿರಿ

***



(Release ID: 1624576) Visitor Counter : 318