ಈಶಾನ್ಯ ರಾಜ್ಯಗಳ ಅಭಿವೃಧ್ಧಿ ಸಚಿವಾಲಯ

ಈಶಾನ್ಯದ ಎಂಟು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಕೋವಿಡ್ ತಡೆಗಾಗಿ ಅನುಸರಣೆ ಕ್ರಮಗಳ ಬಗ್ಗೆ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಚರ್ಚೆ

Posted On: 16 MAY 2020 9:00PM by PIB Bengaluru

ಈಶಾನ್ಯದ ಎಂಟು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ

ಕೋವಿಡ್ ತಡೆಗಾಗಿ ಅನುಸರಣೆ ಕ್ರಮಗಳ ಬಗ್ಗೆ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಚರ್ಚೆ

 

ಕೇಂದ್ರ ಈಶಾನ್ಯ ಪ್ರದೇಶದ ಅಭಿವೃದ್ಧಿ (ಸ್ವತಂತ್ರ ಉಸ್ತುವಾರಿ), ಪ್ರಧಾನಮಂತ್ರಿ ಕಾರ್ಯಾಲಯ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ನಿವಾರಣೆ ಮತ್ತು ಪಿಂಚಣಿ, ಪರಮಾಣು ಶಕ್ತಿ ಮತ್ತು ಬಾಹ್ಯಾಕಾಶ ರಾಜ್ಯ ಖಾತೆ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಈಶಾನ್ಯ ಪ್ರದೇಶದ ಎಂಟು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಕೋವಿಡ್ ತಡೆಗಾಗಿ ರೂಪಿಸಿದ ಅನುಸರಣೆ ಕ್ರಮಗಳ ಕುರಿತು ಚರ್ಚೆ ನಡೆಸಿದರು

ಒಂದು ಗಂಟೆ ಸುದೀರ್ಘ ವಿಡಿಯೋ ಸಂವಾದ ಸಭೆಯಲ್ಲಿ, ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರ ಸರ್ಕಾರಗಳ ಪ್ರತಿನಿಧಿಗಳು ದೇಶದ ಕೆಲವು ಭಾಗಗಳಲ್ಲಿರುವ ತಮ್ಮ ರಾಜ್ಯಗಳ ವಲಸೆ ಕಾರ್ಮಿಕರ ಮತ್ತು ಇತರರ ಚಲನವಲನಗಳಿಗೆ ಸಂಬಂಧಿಸಿದಂತೆ ಹಾಗೂ ಪ್ರಧಾನಮಂತ್ರಿಯ ರೂ. 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಪರಿಣಾಮ ಮತ್ತು ಮುಂದಿನ ದಿನಗಳಲ್ಲಿ ನೀಡಬೇಕಾದ ವಿನಾಯಿತಿಗಳ ಬಗ್ಗೆ ಮೌಲ್ಯಮಾಪನ ಹಾಗೂ ಪ್ರಸ್ತುತ ಸನ್ನಿವೇಶಕ್ಕೆ ಸಂಬಂಧಿಸಿದಂತೆ ತಮ್ಮ ಪರಿಧಿಯ ಒಳಹರಿವು ನೀಡಿದರು.

ಕೊರೊನ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯ ಸರ್ಕಾರಗಳು ನ್ಯಾಯಯುತವಾಗಿ ಮತ್ತು ಬುದ್ಧಿವಂತಿಕೆಯಿಂದ ನಡೆದುಕೊಂಡ ರೀತಿಯ ಬಗ್ಗೆ ಕೇಂದ್ರ ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವ ಡಾ.ಜಿತೇಂದ್ರ ಸಿಂಗ್ ತಮ್ಮ ಮೆಚ್ಚುಗೆಯನ್ನು ಸೂಚಿಸಿದ್ದಾರೆ. ಇವರ ಉತ್ತಮ ಕ್ರಮವ್ಯವಸ್ಥೆಗಳ ಪರಿಣಾಮವಾಗಿ, ಕೊರೊನದ ಹರಡುವಿಕೆಯನ್ನು ನಿಯಂತ್ರಿಸುವಲ್ಲಿ ಈಶಾನ್ಯ ರಾಜ್ಯಗಳನ್ನು ದೇಶದ ಎಲ್ಲೆಡೆ ಪ್ರಶಂಸಿಸಲಾಗುತ್ತಿದೆ ಎಂದು ಡಾ.ಜಿತೇಂದ್ರ ಸಿಂಗ್ ಹೇಳಿದರು.

ದೇಶದ ವಿವಿಧ ಭಾಗಗಳಿಂದ ಈಶಾನ್ಯರಾಜ್ಯಗಳಿಗೆ ಹರಿದು ಬಂದ ಜನರ ಚಲನವಲನ ಕುರಿತು ಚರ್ಚಿಸುವಾಗ, ಡಾ.ಜಿತೇಂದ್ರ ಸಿಂಗ್, ಆಯಾ ರಾಜ್ಯ ಸರ್ಕಾರಗಳಿಂದ ಪ್ರಯಾಣಿಕರ ಪಟ್ಟಿಯನ್ನು ಸ್ವೀಕರಿಸಲು ಯಾಂತ್ರಿಕ ವ್ಯವಸ್ಥೆಯನ್ನು ರೂಪಿಸಲಾಗಿದೆ ಮತ್ತು ಸುಗಮ ಸಾಗಾಟ ಪ್ರಕ್ರಿಯೆಗಾಗಿ ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವಾಲಯವು ನಿವಾಸಿ ಆಯುಕ್ತರು ಮತ್ತು ನೋಡಲ್ ಅವರೊಂದಿಗೆ ಸದಾ ಸಮನ್ವಯಗೊಳಿಸುತ್ತದೆ. ಉದಾಹರಣೆಗಾಗಿ, ಗುಜರಾತಿನಿಂದ ಗುವಾಹಟಿಗೆ ತೆರಳುವ ರೈಲು ಮೇಘಾಲಯ ಸೇರಿದಂತೆ ವಿವಿಧ ರಾಜ್ಯಗಳ ಹಲವಾರು ಪ್ರಯಾಣಿಕರಿಗೆ ಸ್ಥಳಾವಕಾಶ ಕಲ್ಪಿಸಿದಾಗ, ಆಯಾಯ ರಾಜ್ಯ ಸರ್ಕಾರದ ಪ್ರತಿ ಕೋರಿಕೆಯನ್ನು ಗಂಭೀರವಾಗಿ ಅನುಸರಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಗುವಾಹಟಿಗೆ ವಿಮಾನ ಹಾರಾಟವನ್ನು ಪುನರಾರಂಭಿಸಬೇಕೆಂದು ಕೆಲವು ರಾಜ್ಯಗಳು ಮಾಡಿದ ಬೇಡಿಕೆಗೆ ಪ್ರತಿಕ್ರಿಯೆಯಾಗಿ ಸಚಿವ ಡಾ.ಜಿತೇಂದ್ರ ಸಿಂಗ್, ಕೇಂದ್ರ ಗೃಹ ವ್ಯವಹಾರ ಸಚಿವಾಲಯ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಿದೆ. ಹಾಗೂ ಹೆಚ್ಚಿನ ಸಂಖ್ಯೆಯ ರೈಲುಗಳನ್ನು ಪುನರಾರಂಭಿಸುವ ಬಗ್ಗೆ ಅವರು ವಿಷಯವನ್ನು ಈಗಾಗಲೇ ಕೇಂದ್ರ ರೈಲ್ವೆ ಸಚಿವಾಲಯದೊಂದಿಗೆ ಕೈಗೆತ್ತಿಗೊಳ್ಳಲಾಗಿದೆ ಮತ್ತು ನಿಟ್ಟಿನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ್ದಾರೆ ಎಂದು ಸಚಿವರು ಹೇಳಿದರು. .

ಮುಂದಿನ ದಿನಗಳಲ್ಲಿ ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವಾಲಯದ ಆದ್ಯತೆಗಳಲ್ಲಿ ಒಂದಾದ, ಪ್ರದೇಶದ ಅಭಿವೃದ್ಧಿ ಯೋಜನೆಗಳ ಕೆಲಸವನ್ನು ಕೂಡಲೇ ಪುನರಾರಂಭಿಸುವುದಾಗಿದೆ ಹಾಗೂ ನಿಗದಿತ ಸಮಯವನ್ನು ಪೂರೈಸಲು ಸಾಧ್ಯವಾಗುವಂತೆ ಅದನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಲು ಪ್ರಯತ್ನಿಸಲಾಗುವುದು ಎಂದು ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಹೇಳಿದರು. ನಿಟ್ಟಿನಲ್ಲಿ, ಈಶಾನ್ಯ ಕೌನ್ಸಿಲ್ ಮತ್ತು ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವಾಲಯವು ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್ಡೌನ್ ಹಿನ್ನೆಲೆಯಲ್ಲಿ ಕಳೆದುಹೋದ ಸಮಯವನ್ನು ಸರಿದೂಗಿಸಲು ಬಳಕೆ (ಯುಟಿಲೈಸೇಶನ್) ಪ್ರಮಾಣಪತ್ರಗಳು ಮತ್ತು ಇತರ ಸಂಬಂಧಿತ ದಾಖಲೆಗಳನ್ನು ತ್ವರಿತವಾಗಿ ಸಲ್ಲಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಮೂಲಕ ಒತ್ತಾಯಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮುಂದಿನ ದಿನಗಳಲ್ಲಿ ಆಯಾ ರಾಜ್ಯಗಳಲ್ಲಿ ಮತ್ತು ವಿವಿಧ ಪ್ರದೇಶಗಳಲ್ಲಿ ವಿನಾಯಿತಿಯಾಗುವ ಸಾಧ್ಯತೆಯ ಬಗ್ಗೆ ತಮ್ಮ ಮೌಲ್ಯಮಾಪನ ಹಾಗೂ ಮಾಹಿತಿಯನ್ನು ನೀಡಿದ ಮುಖ್ಯ ಕಾರ್ಯದರ್ಶಿಗಳು ಅವರು, ತಡೆಹಿಡಿಯಲಾದ ಯೋಜನೆಗಳನ್ನು ಪುನರಾರಂಭಿಸಲು ಉತ್ಸುಕತೆ ವ್ಯಕ್ತಪಡಿಸಿದರು. ಸಭೆಯಲ್ಲಿ ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಹಾಗೂ ಶ್ರೀ ಇಂದರ್ಜಿತ್ ಸಿಂಗ್, ಕಾರ್ಯದರ್ಶಿ ಈಶಾನ್ಯ ಕೌನ್ಸಿಲ್ ಮೋಸೆಸ್ ಮತ್ತು ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವಾಲಯದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು

***



(Release ID: 1624588) Visitor Counter : 783