ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಹೊಸ ಮಾಹಿತಿ - 1

Posted On: 25 MAY 2020 4:36PM by PIB Bengaluru

ಕೋವಿಡ್ -19 ಹೊಸ ಮಾಹಿತಿ - 1

ಚೇತರಿಕೆಯ ಪ್ರಮಾಣವು 41.57% ಕ್ಕೆ ಸುಧಾರಿಸಿದೆ

 

ಶ್ರೇಣೀಕೃತ, ಪೂರ್ವಭಾವಿ ಮತ್ತು ಸಕ್ರಿಯ ವಿಧಾನದ ಮೂಲಕ, ಕೋವಿಡ್-19 ತಡೆಗಟ್ಟುವಿಕೆ ಮತ್ತು ನಿರ್ವಹಣೆಗಾಗಿ ಭಾರತ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇವುಗಳನ್ನು ನಿಯಮಿತವಾಗಿ ಉನ್ನತ ಮಟ್ಟದಲ್ಲಿ ಪರಿಶೀಲಿಸಲಾಗುತ್ತಿದೆ ಮತ್ತು ಮೇಲ್ವಿಚಾರಣೆ ಮಾಡಲಾಗುತ್ತಿದೆ.

ಈವರೆಗೆ ಒಟ್ಟು 57,720 ಜನರನ್ನು ಗುಣಪಡಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 3280 ರೋಗಿಗಳು ಗುಣಮುಖರಾಗಿದ್ದಾರೆ. ಒಟ್ಟು ಚೇತರಿಕೆಯ ಪ್ರಮಾಣ 41.57% ಆಗಿದೆ. ಸೋಂಕು ದೃಢಪಡಿಸಿದ ಒಟ್ಟು ಪ್ರಕರಣಗಳ ಸಂಖ್ಯೆ ಈಗ 1,38,845 ಆಗಿದೆ. ಸಕ್ರಿಯ ವೈದ್ಯಕೀಯ ಮೇಲ್ವಿಚಾರಣೆಯಲ್ಲಿರುವ ಪ್ರಕರಣಗಳ ಸಂಖ್ಯೆಯು 77,103 ಆಗಿದೆ.

ಕೋವಿಡ್-19ಗೆ ಸಂಬಂಧಿತ ತಾಂತ್ರಿಕ ಸಮಸ್ಯೆಗಳು, ಮಾರ್ಗಸೂಚಿಗಳು ಮತ್ತು ಸಲಹೆಗಳ ಎಲ್ಲಾ ಅಧಿಕೃತ ಮತ್ತು ಹೊಸ ಮಾಹಿತಿಗಾಗಿ ದಯವಿಟ್ಟು ಇಲಾಖೆಯ ಜಾಲತಾಣಕ್ಕೆ ನಿಯಮಿತವಾಗಿ ಭೇಟಿ ನೀಡಿ: https://www.mohfw.gov.in

ಕೋವಿಡ್-19 ಗೆ ಸಂಬಂಧಿಸಿದ ತಾಂತ್ರಿಕ ಪ್ರಶ್ನೆಗಳನ್ನು technquery.covid19[at]gov[dot]in , ಇತರ ಪ್ರಶ್ನೆಗಳನ್ನು ಕೇಳಲು ncov2019[at]gov[dot]in ಗೆ ಇಮೇಲ್ ಮಾಡಬಹುದು ಮತ್ರು @CovidIndiaSeva ಗೆ ಟ್ವೀಟ್ ಮಾಡಬಹುದು.

ಕೋವಿಡ್-19 ಬಗ್ಗೆ ಯಾವುದೇ ಪ್ರಶ್ನೆಗಳಿದ್ದಲ್ಲಿ, ದಯವಿಟ್ಟು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ. : +91-11-23978046 ಅಥವಾ 1075 (ಟೋಲ್-ಫ್ರೀ). ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಕೋವಿಡ್-19ಗೆ ಸಂಬಂಧಿಸಿದ ಸಹಾಯವಾಣಿ ಸಂಖ್ಯೆಗಳ ಪಟ್ಟಿ https://www.mohfw.gov.in/pdf/coronvavirushelplinenumber.pdf ನಲ್ಲಿಯೂ ಲಭ್ಯವಿದೆ.

***


(Release ID: 1626813) Visitor Counter : 203