ಪ್ರಧಾನ ಮಂತ್ರಿಯವರ ಕಛೇರಿ

ಬಾಂಗ್ಲಾದೇಶದ ಪ್ರಧಾನಿ ಶ್ರೀಮತಿ ಶೇಖ್ ಹಸೀನಾ ಅವರೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ದೂರವಾಣಿ ಮಾತುಕತೆ

प्रविष्टि तिथि: 25 MAY 2020 7:27PM by PIB Bengaluru

ಬಾಂಗ್ಲಾದೇಶದ ಪ್ರಧಾನಿ ಶ್ರೀಮತಿ ಶೇಖ್ ಹಸೀನಾ ಅವರೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ದೂರವಾಣಿ ಮಾತುಕತೆ

 

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಾಂಗ್ಲಾದೇಶದ ಪ್ರಧಾನಿ ಶ್ರೀಮತಿ ಶೇಖ್ ಹಸೀನಾ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದರು. ಪ್ರಧಾನಿ ಮೋದಿಯವರು ಪ್ರಧಾನಿ ಶೇಖ್ ಹಸೀನಾ ಮತ್ತು ಬಾಂಗ್ಲಾದೇಶದ ಜನತೆಗೆ ಈದ್-ಉಲ್-ಫಿತರ್ ಶುಭಾಶಯಗಳನ್ನು ತಿಳಿಸಿದರು.

ಉಭಯ ದೇಶಗಳಲ್ಲಿ ಆಂಫಾನ್ ಚಂಡಮಾರುತದಿಂದ ಉಂಟಾದ ಹಾನಿಯ ಬಗ್ಗೆ ಉಭಯ ನಾಯಕರು ಚರ್ಚಿಸಿದರು. ಕೋವಿಡ್-19 ಸಾಂಕ್ರಾಮಿಕದ ಪರಿಸ್ಥಿತಿ ಮತ್ತು ನಿಟ್ಟಿನಲ್ಲಿ ಉಭಯ ದೇಶಗಳ ನಡುವೆ ನಡೆಯುತ್ತಿರುವ ಸಹಯೋಗದ ಬಗ್ಗೆಯೂ ಚರ್ಚಿಸಿದರು. ಸವಾಲುಗಳನ್ನು ಎದುರಿಸಲು ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು.

ಪ್ರಧಾನಿ ಶೇಖ್ ಹಸೀನಾ ಮತ್ತು ಬಾಂಗ್ಲಾದೇಶದ ಸ್ನೇಹಮಯಿ ಜನರ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಪ್ರಧಾನಿ ಹಾರೈಸಿದರು.

***


(रिलीज़ आईडी: 1626870) आगंतुक पटल : 223
इस विज्ञप्ति को इन भाषाओं में पढ़ें: Telugu , English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Malayalam