ಪ್ರಧಾನ ಮಂತ್ರಿಯವರ ಕಛೇರಿ

ಹಾಕಿ ಆಟಗಾರ ಬಲ್ಬೀರ್ ಸಿಂಗ್ ಸೀನಿಯರ್ ಅವರ ನಿಧನಕ್ಕೆ ಪ್ರಧಾನಿ ಸಂತಾಪ

Posted On: 25 MAY 2020 2:30PM by PIB Bengaluru

ಹಾಕಿ ಆಟಗಾರ ಬಲ್ಬೀರ್ ಸಿಂಗ್ ಸೀನಿಯರ್ ಅವರ ನಿಧನಕ್ಕೆ ಪ್ರಧಾನಿ ಸಂತಾಪ

 

ಹಾಕಿ ಆಟಗಾರ ಪದ್ಮಶ್ರೀ ಬಲ್ಬೀರ್ ಸಿಂಗ್ ಸೀನಿಯರ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಪದ್ಮಶ್ರೀ ಶ್ರೀ ಬಲ್ಬೀರ್ ಸಿಂಗ್ ಸೀನಿಯರ್ ಅವರನ್ನು ಅವರ ಮರೆಯಲಾಗದ ಕ್ರೀಡಾ ಪ್ರದರ್ಶನಕ್ಕಾಗಿ ಸ್ಮರಿಸಲಾಗುವುದು. ಅವರು ದೇಶಕ್ಕೆ ಅಪಾರ ಹೆಮ್ಮೆ ಮತ್ತು ಗೌರವ ತಂದಿದ್ದಾರೆ. ನಿಸ್ಸಂದೇಹವಾಗಿ ಅವರೊಬ್ಬ ಅದ್ಭುತ ಹಾಕಿ ಆಟಗಾರ. ಅವರು ಉತ್ತಮ ಮಾರ್ಗದರ್ಶಕರಾಗಿಯೂ ಛಾಪು ಮೂಡಿಸಿದ್ದಾರೆ. ಅವರ ನಿಧನದಿಂದ ತೀವ್ರ ನೋವಾಗಿದೆ. ಶ್ರೀ ಬಲ್ಬೀರ್ ಸಿಂಗ್ ಸೀನಿಯರ್ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳುಎಂದು ಪ್ರಧಾನಿ ಹೇಳಿದ್ದಾರೆ.

 

***



(Release ID: 1627134) Visitor Counter : 112