ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್ - 19 ಹೊಸ ಮಾಹಿತಿ

Posted On: 28 MAY 2020 5:28PM by PIB Bengaluru

ಕೋವಿಡ್ - 19 ಹೊಸ ಮಾಹಿತಿ

 

ಶ್ರೇಣೀಕೃತ, ಪೂರ್ವಭಾವಿ ಮತ್ತು ಸಕ್ರಿಯ ವಿಧಾನದ ಮೂಲಕ, ಕೋವಿಡ್-19 ತಡೆಗಟ್ಟುವಿಕೆ, ನಿಯಂತ್ರಣ ಮತ್ತು ನಿರ್ವಹಣೆಗಾಗಿ ಭಾರತ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇವುಗಳನ್ನು ನಿಯಮಿತವಾಗಿ ಉನ್ನತ ಮಟ್ಟದಲ್ಲಿ ಪರಿಶೀಲಿಸಲಾಗುತ್ತಿದೆ ಮತ್ತು ಮೇಲ್ವಿಚಾರಣೆ ಮಾಡಲಾಗುತ್ತಿದೆ.

ಸಕ್ರಿಯ ವೈದ್ಯಕೀಯ ಮೇಲ್ವಿಚಾರಣೆಯಲ್ಲಿರುವ ಪ್ರಕರಣಗಳ ಸಂಖ್ಯೆ 86,110 ಆಗಿದೆ. ಇಲ್ಲಿಯವರೆಗೆ, ಒಟ್ಟು 67,691 ಜನರನ್ನು ಗುಣಪಡಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 3,266 ರೋಗಿಗಳು ಗುಣಮುಖರಾಗಿದ್ದಾರೆ. ಇದು ನಮ್ಮ ಒಟ್ಟು ಚೇತರಿಕೆಯ ಪ್ರಮಾಣವನ್ನು 42.75%ನ್ನಾಗಿ ಮಾಡಿದೆ .

ಕೋವಿಡ್-19ಕ್ಕೆ ಸಂಬಂಧಿತ ತಾಂತ್ರಿಕ ಸಮಸ್ಯೆಗಳು, ಮಾರ್ಗಸೂಚಿಗಳು ಮತ್ತು ಸಲಹೆಗಳ ಎಲ್ಲಾ ಅಧಿಕೃತ ಮತ್ತು ಹೊಸ ಮಾಹಿತಿಗಾಗಿ ದಯವಿಟ್ಟು ಇಲಾಖೆಯ ಜಾಲತಾಣಕ್ಕೆ ನಿಯಮಿತವಾಗಿ ಭೇಟಿ ನೀಡಿರಿ: https://www.mohfw.gov.in

ಕೋವಿಡ್-19ಕ್ಕೆ ಸಂಬಂಧಿಸಿದ ತಾಂತ್ರಿಕ ಪ್ರಶ್ನೆಗಳನ್ನು technquery.covid19[at]gov[dot]in , ಇತರ ಪ್ರಶ್ನೆಗಳನ್ನು ಕೇಳಲು ncov2019[at]gov[dot]in ಗೆ ಇಮೇಲ್ ಮಾಡಬಹುದು ಮತ್ರು @CovidIndiaSeva ಗೆ ಟ್ವೀಟ್ ಮಾಡಬಹುದು.

ಕೋವಿಡ್-19 ಬಗ್ಗೆ ಯಾವುದೇ ಪ್ರಶ್ನೆಗಳಿದ್ದಲ್ಲಿ, ದಯವಿಟ್ಟು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ.: +91-11-23978046 ಅಥವಾ 1075 (ಟೋಲ್-ಫ್ರೀ). ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕೋವಿಡ್-19ಕ್ಕೆ ಸಂಬಂಧಿಸಿದ ಸಹಾಯವಾಣಿ ಸಂಖ್ಯೆಗಳ ಪಟ್ಟಿ https://www.mohfw.gov.in/pdf/coronvavirushelplinenumber.pdf ನಲ್ಲಿಯೂ ಲಭ್ಯವಿದೆ.

***



(Release ID: 1628019) Visitor Counter : 166