ರಕ್ಷಣಾ ಸಚಿವಾಲಯ

ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಹಾಗು ಅಮೆರಿಕ ರಕ್ಷಣಾ ಕಾರ್ಯದರ್ಶಿಗಳ ನಡುವೆ ದೂರವಾಣಿ ಸಂಭಾಷಣೆ

Posted On: 29 MAY 2020 6:48PM by PIB Bengaluru

ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಹಾಗು ಅಮೆರಿಕ ರಕ್ಷಣಾ ಕಾರ್ಯದರ್ಶಿಗಳ ನಡುವೆ ದೂರವಾಣಿ ಸಂಭಾಷಣೆ

ದ್ವಿಪಕ್ಷೀಯ ರಕ್ಷಣಾ ಸಹಕಾರ ವ್ಯವಸ್ಥೆಗಳ ಪ್ರಗತಿ ಪರಿಶೀಲನೆ

 

ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಅವರು ಇಂದು ಸಂಜೆ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಡಾ. ಮಾರ್ಕ್ ಟಿ ಎಸ್ಪರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು. ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಿದ ಆಯಾ ಅನುಭವದ ಬಗ್ಗೆ ಇಬ್ಬರು ಸಚಿವರು ಪರಸ್ಪರ ವಿವರಿಸಿದರು ಮತ್ತು ನಿಟ್ಟಿನಲ್ಲಿ ಅತ್ಯುತ್ತಮ ದ್ವಿಪಕ್ಷೀಯ ಸಹಕಾರವನ್ನು ಮುಂದುವರೆಸುವ ಪ್ರತಿಜ್ಞೆ ಮಾಡಿದರು. ಅವರು ವಿವಿಧ ದ್ವಿಪಕ್ಷೀಯ ರಕ್ಷಣಾ ಸಹಕಾರ ವ್ಯವಸ್ಥೆಗಳ ಪ್ರಗತಿಯನ್ನು ಪರಿಶೀಲಿಸಿದರು ಮತ್ತು ನಮ್ಮ ರಕ್ಷಣಾ ಸಹಭಾಗಿತ್ವವನ್ನು ಮತ್ತಷ್ಟು ಉತ್ತೇಜಿಸುವ ಬದ್ಧತೆಯನ್ನು ವ್ಯಕ್ತಪಡಿಸಿದರು. ನಿಟ್ಟಿನಲ್ಲಿ, ರಕ್ಷಣಾ ಸಚಿವರು ಕಾರ್ಯದರ್ಶಿ ಎಸ್ಪರ್ ಅವರನ್ನು ಪರಸ್ಪರ ಅನುಕೂಲದ ಸಮಯದಲ್ಲಿ ಆದಷ್ಟು ಬೇಗ ಭಾರತಕ್ಕೆ ಭೇಟಿ ನೀಡಲು ಆಹ್ವಾನ ನೀಡಿದರು, ಅದನ್ನು ಕಾರ್ಯದರ್ಶಿಯವರು ಸಂತೋಷದಿಂದ ಸ್ವೀಕರಿಸಿದರು.

ಇತ್ತೀಚೆಗೆ ಆಂಫಾನ್ ಚಂಡಮಾರುತದ ಸಂದರ್ಭದಲ್ಲಿ ಪೂರ್ವ ಭಾರತದಲ್ಲಿ ಜೀವ ಕಳೆದುಕೊಂಡವರ ಬಗ್ಗೆ ಕಾರ್ಯದರ್ಶಿ ಎಸ್ಪರ್ ಅವರು ಸಂತಾಪ ವ್ಯಕ್ತಪಡಿಸಿದ್ದನ್ನು ರಕ್ಷಣಾ ಸಚಿವರು ಶ್ಲಾಘಿಸಿದರು ಮತ್ತು ಭಾರತದ ಪರಿಹಾರ ಕಾರ್ಯಗಳ ಬಗ್ಗೆ ವಿವರಿಸಿದರು. ಹಂಚಿಕೆಯ ಭದ್ರತಾ ಆಸಕ್ತಿಯ ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಇಬ್ಬರು ಸಚಿವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

***(Release ID: 1628041) Visitor Counter : 37