ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್ -19 ಹೊಸ ಮಾಹಿತಿ
Posted On:
03 JUN 2020 3:15PM by PIB Bengaluru
ಕೋವಿಡ್ -19 ಹೊಸ ಮಾಹಿತಿ
ಚೇತರಿಕೆಯ ಪ್ರಮಾಣ 48.31% ಕ್ಕೆ ಸುಧಾರಿಸಿದೆ
ಸಾವಿನ ಪ್ರಮಾಣವು 2.80% ಗೆ ಇಳಿಕೆ
ಕಳೆದ 24 ಗಂಟೆಗಳಲ್ಲಿ ಒಟ್ಟು 4,776 ಕೋವಿಡ್-19 ರೋಗಿಗಳನ್ನು ಗುಣಪಡಿಸಲಾಗಿದೆ. ಹೀಗಾಗಿ, ಈವರೆಗೆ ಒಟ್ಟು 1,00,303 ರೋಗಿಗಳನ್ನು ಕೋವಿಡ್-19ರಿಂದ ಗುಣಪಡಿಸಲಾಗಿದೆ. ಕೋವಿಡ್-19 ರೋಗಿಗಳಲ್ಲಿ ಚೇತರಿಕೆಯ ಪ್ರಮಾಣ 48.31% ಆಗಿದೆ. ಪ್ರಸ್ತುತ, 1,01,497 ಸಕ್ರಿಯ ಪ್ರಕರಣಗಳಿವೆ ಮತ್ತು ಎಲ್ಲವೂ ಸಕ್ರಿಯ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದೆ.
ಸಾವಿನ ಪ್ರಮಾಣವು 2.80% ಇದೆ.
480 ಸರ್ಕಾರಿ ಮತ್ತು 208 ಖಾಸಗಿ ಪ್ರಯೋಗಾಲಯಗಳ (ಒಟ್ಟು 688 ಪ್ರಯೋಗಾಲಯಗಳು) ಮೂಲಕ ಪರೀಕ್ಷಾ ಸಾಮರ್ಥ್ಯ ದೇಶದಲ್ಲಿ ಹೆಚ್ಚಾಗಿದೆ. ಒಟ್ಟಾರೆಯಾಗಿ, ಕೋವಿಡ್-19ಕ್ಕಾಗಿ ಇದುವರೆಗೆ 41,03,233 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 1,37,158 ಮಾದರಿಗಳನ್ನು ನಿನ್ನೆ ಪರೀಕ್ಷಿಸಲಾಗಿದೆ.
ಕೋವಿಡ್-19ರ ನಿರ್ವಹಣೆಗೆ ದೇಶದ ಆರೋಗ್ಯ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ, ಈಗಿನಂತೆ, 1,66,332 ಪ್ರತ್ಯೇಕ ಹಾಸಿಗೆಗಳು, 21,393 ಐಸಿಯು ಹಾಸಿಗೆಗಳು ಮತ್ತು 72,762 ಆಮ್ಲಜನಕದ ಸೌಲಭ್ಯದ ಹಾಸಿಗೆಗಳನ್ನು ಹೊಂದಿರುವ 952 ಮೀಸಲಾದ ಕೋವಿಡ್ ಆಸ್ಪತ್ರೆಗಳು ಲಭ್ಯವಿದೆ. 1,34,945 ಪ್ರತ್ಯೇಕ ಹಾಸಿಗೆಗಳೊಂದಿಗೆ 2,391 ಮೀಸಲಾದ ಕೋವಿಡ್ ಆರೋಗ್ಯ ಕೇಂದ್ರಗಳು; 11,027 ಐಸಿಯು ಹಾಸಿಗೆಗಳು ಮತ್ತು 46,875 ಆಕ್ಸಿಜನ್ ಸೌಲಭ್ಯವಿರುವ ಹಾಸಿಗೆಗಳನ್ನು ಕಾರ್ಯಗತಗೊಳಿಸಲಾಗಿದೆ. ಕೇಂದ್ರವು ರಾಜ್ಯಗಳಿಗೆ, ಕೇಂದ್ರಾಡಳಿತ ಪ್ರದೇಶಗಳಿಗೆ ಮತ್ತು ಕೇಂದ್ರ ಸಂಸ್ಥೆಗಳಿಗೆ 125.28 ಲಕ್ಷ ಎನ್ 95 ಮುಖಗವಸುಗಳು ಮತ್ತು 101.54 ಲಕ್ಷ ವೈಯಕ್ತಿಕ ರಕ್ಷಣಾ ಸಾಧನಗಳನ್ನು (ಪಿಪಿಇ) ಒದಗಿಸಿದೆ.
ಕೋವಿಡ್-19ಕ್ಕೆ ಸಂಬಂಧಿತ ತಾಂತ್ರಿಕ ಸಮಸ್ಯೆಗಳು, ಮಾರ್ಗಸೂಚಿಗಳು ಮತ್ತು ಸಲಹೆಗಳ ಎಲ್ಲಾ ಅಧಿಕೃತ ಮತ್ತು ಹೊಸ ಮಾಹಿತಿಗಾಗಿ ದಯವಿಟ್ಟು ಇಲಾಖೆಯ ಈ ಜಾಲತಾಣಕ್ಕೆ ನಿಯಮಿತವಾಗಿ ಭೇಟಿ ನೀಡಿರಿ: https://www.mohfw.gov.in
ಕೋವಿಡ್-19ಕ್ಕೆ ಸಂಬಂಧಿಸಿದ ತಾಂತ್ರಿಕ ಪ್ರಶ್ನೆಗಳನ್ನು technquery.covid19[at]gov[dot]in , ಇತರ ಪ್ರಶ್ನೆಗಳನ್ನು ಕೇಳಲು ncov2019[at]gov[dot]in ಗೆ ಇಮೇಲ್ ಮಾಡಬಹುದು ಮತ್ರು @CovidIndiaSeva ಗೆ ಟ್ವೀಟ್ ಮಾಡಬಹುದು.
ಕೋವಿಡ್-19 ಬಗ್ಗೆ ಯಾವುದೇ ಪ್ರಶ್ನೆಗಳಿದ್ದಲ್ಲಿ, ದಯವಿಟ್ಟು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ.: +91-11-23978046 ಅಥವಾ 1075 (ಟೋಲ್-ಫ್ರೀ). ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕೋವಿಡ್-19ಕ್ಕೆ ಸಂಬಂಧಿಸಿದ ಸಹಾಯವಾಣಿ ಸಂಖ್ಯೆಗಳ ಪಟ್ಟಿ https://www.mohfw.gov.in/pdf/coronvavirushelplinenumber.pdf ನಲ್ಲಿಯೂ ಲಭ್ಯವಿದೆ.
***
(Release ID: 1629539)
Visitor Counter : 231
Read this release in:
English
,
Urdu
,
Hindi
,
Marathi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam