ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್ -19 ಹೊಸ ಮಾಹಿತಿ

Posted On: 04 JUN 2020 4:45PM by PIB Bengaluru

ಕೋವಿಡ್ -19 ಹೊಸ ಮಾಹಿತಿ

 

ಕಳೆದ 24 ಗಂಟೆಗಳಲ್ಲಿ ಒಟ್ಟು 3,804 ಕೋವಿಡ್-19 ರೋಗಿಗಳನ್ನು ಗುಣಪಡಿಸಲಾಗಿದೆ. ಹೀಗಾಗಿ, ಈವರೆಗೆ ಒಟ್ಟು 1,04,107 ರೋಗಿಗಳನ್ನು ಕೋವಿಡ್-19ರಿಂದ ಗುಣಪಡಿಸಲಾಗಿದೆ. ಕೋವಿಡ್ -19 ರೋಗಿಗಳಲ್ಲಿ ಚೇತರಿಕೆಯ ಪ್ರಮಾಣ 47.99% ಆಗಿದೆ. ಪ್ರಸ್ತುತ, 1,06,737 ಸಕ್ರಿಯ ಪ್ರಕರಣಗಳಿವೆ ಮತ್ತು ಎಲ್ಲಾ ಸಕ್ರಿಯ ಪ್ರಕರಣಗಳು ವೈದ್ಯಕೀಯ ಮೇಲ್ವಿಚಾರಣೆಯಲ್ಲಿದೆ.

ಸೋಂಕಿತ ವ್ಯಕ್ತಿಗಳಲ್ಲಿ ನಾವೆಲ್ ಕೊರೊನಾವೈರಸ್ ಅನ್ನು ಕಂಡುಹಿಡಿಯುವ ಪರೀಕ್ಷಾ ಸಾಮರ್ಥ್ಯವನ್ನು ಐಸಿಎಂಆರ್ ಮತ್ತಷ್ಟು ಹೆಚ್ಚಿಸಿದೆ. ಕಳೆದ 24 ಗಂಟೆಗಳಲ್ಲಿ ಸರ್ಕಾರಿ ಪ್ರಯೋಗಾಲಯಗಳ ಸಂಖ್ಯೆಯನ್ನು 498 ಕ್ಕೆ ಮತ್ತು ಖಾಸಗಿ ಪ್ರಯೋಗಾಲಯಗಳನ್ನು 212ಕ್ಕೆ ಏರಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 1,39,48 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇಲ್ಲಿಯವರೆಗೆ ಪರೀಕ್ಷಿಸಿದ ಒಟ್ಟು ಮಾದರಿಗಳ ಸಂಖ್ಯೆ 42,42,718.

ಕೋವಿಡ್-19 ಸಾಂಕ್ರಾಮಿಕದಲ್ಲಿ ಅನುಸರಿಸಬೇಕಾದ ಸುರಕ್ಷಿತ ಕಿವಿ ಮೂಗು ಗಂಟಲು (ಇಎನ್ ಟಿ) ಅಭ್ಯಾಸಗಳ ಬಗ್ಗೆ ಸಚಿವಾಲಯವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ವಿವರಗಳನ್ನು https://www.mohfw.gov.in/pdf/ENTCOVID0306.pdf ನಲ್ಲಿ ಕಾಣಬಹುದು.

ಕೋವಿಡ್-19ಕ್ಕೆ ಸಂಬಂಧಿತ ತಾಂತ್ರಿಕ ಸಮಸ್ಯೆಗಳು, ಮಾರ್ಗಸೂಚಿಗಳು ಮತ್ತು ಸಲಹೆಗಳ ಎಲ್ಲಾ ಅಧಿಕೃತ ಮತ್ತು ಹೊಸ ಮಾಹಿತಿಗಾಗಿ ದಯವಿಟ್ಟು ಇಲಾಖೆಯ ಜಾಲತಾಣಕ್ಕೆ ನಿಯಮಿತವಾಗಿ ಭೇಟಿ ನೀಡಿರಿ: https://www.mohfw.gov.in

ಕೋವಿಡ್-19ಕ್ಕೆ ಸಂಬಂಧಿಸಿದ ತಾಂತ್ರಿಕ ಪ್ರಶ್ನೆಗಳನ್ನು technquery.covid19[at]gov[dot]in , ಇತರ ಪ್ರಶ್ನೆಗಳನ್ನು ಕೇಳಲು ncov2019[at]gov[dot]in ಗೆ ಇಮೇಲ್ ಮಾಡಬಹುದು ಮತ್ರು @CovidIndiaSeva ಗೆ ಟ್ವೀಟ್ ಮಾಡಬಹುದು.

ಕೋವಿಡ್-19 ಬಗ್ಗೆ ಯಾವುದೇ ಪ್ರಶ್ನೆಗಳಿದ್ದಲ್ಲಿ, ದಯವಿಟ್ಟು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: +91-11-23978046 ಅಥವಾ 1075 (ಟೋಲ್-ಫ್ರೀ). ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕೋವಿಡ್-19ಕ್ಕೆ ಸಂಬಂಧಿಸಿದ ಸಹಾಯವಾಣಿ ಸಂಖ್ಯೆಗಳ ಪಟ್ಟಿ https://www.mohfw.gov.in/pdf/coronvavirushelplinenumber.pdf ನಲ್ಲಿಯೂ ಲಭ್ಯವಿದೆ.

***


(Release ID: 1629541) Visitor Counter : 193