ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಹೊಸ ಮಾಹಿತಿ

Posted On: 06 JUN 2020 1:30PM by PIB Bengaluru

ಕೋವಿಡ್-19 ಹೊಸ ಮಾಹಿತಿ

 

ಕಳೆದ 24 ಗಂಟೆಗಳಲ್ಲಿ ಒಟ್ಟು 4,611 ಕೋವಿಡ್-19 ರೋಗಿಗಳನ್ನು ಗುಣಪಡಿಸಲಾಗಿದೆ. ಹೀಗಾಗಿ, ಈವರೆಗೆ ಒಟ್ಟು 1,14,073 ರೋಗಿಗಳನ್ನು ಕೋವಿಡ್-19ರಿಂದ ಗುಣಪಡಿಸಲಾಗಿದೆ. ಕೋವಿಡ್-19 ರೋಗಿಗಳಲ್ಲಿ ಚೇತರಿಕೆಯ ಪ್ರಮಾಣ 48.20% ಆಗಿದೆ. ಪ್ರಸ್ತುತ, 1,15,942 ಸಕ್ರಿಯ ಪ್ರಕರಣಗಳಿವೆ ಮತ್ತು ಎಲ್ಲಾ ಪ್ರಕರಣಗಳು ಸಕ್ರಿಯ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದೆ.

ಸೋಂಕಿತ ವ್ಯಕ್ತಿಗಳಲ್ಲಿ ನಾವೆಲ್ ಕೊರೊನಾವೈರಸ್ಸನ್ನು ಕಂಡುಹಿಡಿಯುವ ಪರೀಕ್ಷಾ ಸಾಮರ್ಥ್ಯವನ್ನು ಐಸಿಎಂಆರ್ ಮತ್ತಷ್ಟು ಹೆಚ್ಚಿಸಿದೆ. ಸರ್ಕಾರಿ ಪ್ರಯೋಗಾಲಯಗಳ ಸಂಖ್ಯೆಯನ್ನು 520 ಕ್ಕೆ ಮತ್ತು ಖಾಸಗಿ ಪ್ರಯೋಗಾಲಯಗಳನ್ನು 222 ಕ್ಕೆ ಹೆಚ್ಚಿಸಲಾಗಿದೆ (ಒಟ್ಟು 742) . 1,37,938 ಮಾದರಿಗಳನ್ನು ಕಳೆದ 24 ಗಂಟೆಗಳಲ್ಲಿ ಪರೀಕ್ಷಿಸಲಾಯಿತು. ಇಲ್ಲಿಯವರೆಗೆ ಪರೀಕ್ಷಿಸಿದ ಒಟ್ಟು ಮಾದರಿಗಳ ಸಂಖ್ಯೆಯು 45,24,317 ಆಗಿದೆ.

ಕೋವಿಡ್-19ಕ್ಕೆ ಸಂಬಂಧಿತ ತಾಂತ್ರಿಕ ಸಮಸ್ಯೆಗಳು, ಮಾರ್ಗಸೂಚಿಗಳು ಮತ್ತು ಸಲಹೆಗಳ ಎಲ್ಲಾ ಅಧಿಕೃತ ಮತ್ತು ಹೊಸ ಮಾಹಿತಿಗಾಗಿ ದಯವಿಟ್ಟು ಇಲಾಖೆಯ ಜಾಲತಾಣಕ್ಕೆ ನಿಯಮಿತವಾಗಿ ಭೇಟಿ ನೀಡಿರಿ: https://www.mohfw.gov.in

ಕೋವಿಡ್-19ಕ್ಕೆ ಸಂಬಂಧಿಸಿದ ತಾಂತ್ರಿಕ ಪ್ರಶ್ನೆಗಳನ್ನು technquery.covid19@gov.in , ಇತರ ಪ್ರಶ್ನೆಗಳನ್ನು ಕೇಳಲು ncov2019@gov.in ಗೆ ಇಮೇಲ್ ಮಾಡಬಹುದು ಮತ್ರು @CovidIndiaSeva ಗೆ ಟ್ವೀಟ್ ಮಾಡಬಹುದು.

ಕೋವಿಡ್-19 ಬಗ್ಗೆ ಯಾವುದೇ ಪ್ರಶ್ನೆಗಳಿದ್ದಲ್ಲಿ, ದಯವಿಟ್ಟು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ.: +91-11-23978046 ಅಥವಾ 1075 (ಟೋಲ್-ಫ್ರೀ). ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕೋವಿಡ್-19ಕ್ಕೆ ಸಂಬಂಧಿಸಿದ ಸಹಾಯವಾಣಿ ಸಂಖ್ಯೆಗಳ ಪಟ್ಟಿ https://www.mohfw.gov.in/pdf/coronvavirushelplinenumber.pdf ನಲ್ಲಿಯೂ ಲಭ್ಯವಿದೆ.

***(Release ID: 1630170) Visitor Counter : 10