ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಹೊಸ ಮಾಹಿತಿ
Posted On:
10 JUN 2020 4:20PM by PIB Bengaluru
ಕೋವಿಡ್-19 ಹೊಸ ಮಾಹಿತಿ
ಚೇತರಿಸಿಕೊಂಡ ರೋಗಿಗಳ ಸಂಖ್ಯೆಯು ಸಕ್ರಿಯ ರೋಗಿಗಳ ಸಂಖ್ಯೆಗಿಂತ ಹೆಚ್ಚಾಗಿದೆ
ಐಸಿಎಂಆರ್ ನಿಂದ 50 ಲಕ್ಷಕ್ಕೂ ಹೆಚ್ಚು ಮಾದರಿಗಳ ಪರೀಕ್ಷೆ
ಕೋವಿಡ್-19 ನಿರ್ವಹಣೆಯಲ್ಲಿ ರಾಜ್ಯಗಳಿಗೆ ಸಹಾಯ ಮಾಡಲು ಕೇಂದ್ರದ ತಂಡಗಳನ್ನು 6 ನಗರಗಳಲ್ಲಿ ನಿಯೋಜಿಸಲಾಗಿದೆ
ಕಳೆದ 24 ಗಂಟೆಗಳಲ್ಲಿ 5,991 ರೋಗಿಗಳು ಕೋವಿಡ್-19ರಿಂದ ಗುಣಹೊಂದಿದ್ದಾರೆ. ಇದು ಚೇತರಿಸಿಕೊಂಡ ಒಟ್ಟು ರೋಗಿಗಳ ಸಂಖ್ಯೆಯನ್ನು 1,35,205 ಕ್ಕೆ ಮಾಡಿದೆ, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಈಗ 1,33,632 ಆಗಿದೆ. ಮೊದಲ ಬಾರಿಗೆ, ಚೇತರಿಸಿಕೊಂಡ ರೋಗಿಗಳ ಒಟ್ಟು ಸಂಖ್ಯೆಯು ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು ಮೀರಿದೆ. ಚೇತರಿಕೆಯ ಪ್ರಮಾಣ ಈಗ 48.88% ರಷ್ಟಿದೆ.
ಅಲ್ಲದೆ, ಐಸಿಎಂಆರ್ ನಡೆಸಿದ ಪರೀಕ್ಷೆಗಳ ಸಂಖ್ಯೆ 50 ಲಕ್ಷ ಮೀರಿದೆ; ಇದು ಇಂದು 50,61,332 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಐಸಿಎಂಆರ್ 1,45,216 ಮಾದರಿಗಳನ್ನು ಪರೀಕ್ಷಿಸಿದೆ. ಐಸಿಎಂಆರ್ ಸೋಂಕಿತ ವ್ಯಕ್ತಿಗಳಲ್ಲಿ ನಾವೆಲ್ ಕೊರೊನಾವೈರಸ್ ಅನ್ನು ಪತ್ತೆಹಚ್ಚುವ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸುತ್ತಿದೆ. ಸರ್ಕಾರಿ ಪ್ರಯೋಗಾಲಯಗಳ ಸಂಖ್ಯೆಯನ್ನು 590 ಕ್ಕೆ ಮತ್ತು ಖಾಸಗಿ ಪ್ರಯೋಗಾಲಯಗಳನ್ನು 233 ಕ್ಕೆ ಹೆಚ್ಚಿಸಲಾಗಿದೆ (ಒಟ್ಟು 823).
ಮುಂಬೈ, ಅಹಮದಾಬಾದ್, ಚೆನ್ನೈ ಕೋಲ್ಕತಾ, ದೆಹಲಿ ಮತ್ತು ಬೆಂಗಳೂರಿನ ಆರು ನಗರಗಳಲ್ಲಿ ಕೋವಿಡ್-19ಕ್ಕಾಗಿ ಕೈಗೊಳ್ಳುತ್ತಿರುವ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಪರಿಶೀಲಿಸಲು ತಾಂತ್ರಿಕ ಬೆಂಬಲವನ್ನು ಒದಗಿಸಲು ಮತ್ತು ರಾಜ್ಯ ಆರೋಗ್ಯ ಇಲಾಖೆಗಳು ಮತ್ತು ಪುರಸಭೆಯ ಆರೋಗ್ಯ ಅಧಿಕಾರಿಗಳನ್ನು ಕೇಂದ್ರ ತಂಡಗಳನ್ನು ನಿಯೋಜಿಸಲಾಗುತ್ತಿದೆ.
ಕೋವಿಡ್-19ಕ್ಕಾಗಿ ಕೈಗೊಳ್ಳುತ್ತಿರುವ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಪರಿಶೀಲಿಸಲು ತಂಡಗಳು ಮುಂದಿನ ಒಂದು ವಾರದೊಳಗೆ ಪ್ರಸ್ತಾಪಿಸಲಾದ ನಗರಗಳಿಗೆ ಭೇಟಿ ನೀಡಲಿವೆ. ತಂಡಗಳು ಕೈಗೊಂಡ ಚಟುವಟಿಕೆಗಳ ವರದಿಯನ್ನು ರಾಜ್ಯ ಆರೋಗ್ಯ ಇಲಾಖೆ ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ಸಲ್ಲಿಸಲಿವೆ. ತುರ್ತು ಪ್ರಾಮುಖ್ಯತೆಯ ಯಾವುದೇ ವಿಷಯದ ಬಗ್ಗೆ ತಂಡವು ತಿಳಿಸುತ್ತದೆ ಮತ್ತು ಭೇಟಿಯನ್ನು ಮುಕ್ತಾಯಗೊಳಿಸುವ ಮೊದಲು ಅದರ ಅವಲೋಕನಗಳು ಮತ್ತು ಸಲಹೆಗಳ ವರದಿಯನ್ನು ಸಹ ಸಲ್ಲಿಸುತ್ತದೆ.
ಕೋವಿಡ್-19ಕ್ಕೆ ಸಂಬಂಧಿತ ತಾಂತ್ರಿಕ ಸಮಸ್ಯೆಗಳು, ಮಾರ್ಗಸೂಚಿಗಳು ಮತ್ತು ಸಲಹೆಗಳ ಎಲ್ಲಾ ಅಧಿಕೃತ ಮತ್ತು ಹೊಸ ಮಾಹಿತಿಗಾಗಿ ದಯವಿಟ್ಟು ಇಲಾಖೆಯ ಈ ಜಾಲತಾಣಕ್ಕೆ ನಿಯಮಿತವಾಗಿ ಭೇಟಿ ನೀಡಿರಿ: https://www.mohfw.gov.in
ಕೋವಿಡ್-19ಕ್ಕೆ ಸಂಬಂಧಿಸಿದ ತಾಂತ್ರಿಕ ಪ್ರಶ್ನೆಗಳನ್ನು technquery.covid19[at]gov[dot]in , ಇತರ ಪ್ರಶ್ನೆಗಳನ್ನು ಕೇಳಲು ncov2019[at]gov[dot]in ಗೆ ಇಮೇಲ್ ಮಾಡಬಹುದು ಮತ್ರು @CovidIndiaSeva ಗೆ ಟ್ವೀಟ್ ಮಾಡಬಹುದು.
ಕೋವಿಡ್-19 ಬಗ್ಗೆ ಯಾವುದೇ ಪ್ರಶ್ನೆಗಳಿದ್ದಲ್ಲಿ, ದಯವಿಟ್ಟು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ.: +91-11-23978046 ಅಥವಾ 1075 (ಟೋಲ್-ಫ್ರೀ). ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕೋವಿಡ್-19ಕ್ಕೆ ಸಂಬಂಧಿಸಿದ ಸಹಾಯವಾಣಿ ಸಂಖ್ಯೆಗಳ ಪಟ್ಟಿ https://www.mohfw.gov.in/pdf/coronvavirushelplinenumber.pdf ನಲ್ಲಿಯೂ ಲಭ್ಯವಿದೆ.
***
(Release ID: 1630808)
Visitor Counter : 250
Read this release in:
English
,
Urdu
,
Hindi
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam