ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ತಾಂಜಾನಿಯಾ ಸಂಯುಕ್ತ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಡಾ. ಜಾನ್ ಪೊಂಬೆ ಜೋಸೆಫ್ ಮಾಗುಫುಲಿ ಅವರೊಂದಿಗೆ ದೂರವಾಣಿ ಸಮಾಲೋಚನೆ
Posted On:
12 JUN 2020 8:29PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ತಾಂಜಾನಿಯಾ ಸಂಯುಕ್ತ ಗಣರಾಜ್ಯದ ಅಧ್ಯಕ್ಷ
ಗೌರವಾನ್ವಿತ ಡಾ. ಜಾನ್ ಪೊಂಬೆ ಜೋಸೆಫ್ ಮಾಗುಫುಲಿ ಅವರೊಂದಿಗೆ ದೂರವಾಣಿ ಸಮಾಲೋಚನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಾಂಜಾನಿಯಾ ಸಂಯುಕ್ತ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಡಾ. ಜಾನ್ ಪೊಂಬೆ ಜೋಸೆಫ್ ಮಾಗುಫುಲಿ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.
ಪ್ರಧಾನಮಂತ್ರಿ ಅವರು, 2016ರಲ್ಲಿ ತಾವು ದಾರ್-ಎಸ್-ಸಲಾಂಗೆ ಭೇಟಿ ನೀಡಿದ್ದನ್ನು ಆತ್ಮೀಯವಾಗಿ ಸ್ಮರಿಸಿಕೊಂಡ ಅವರು, ತಾಂಜಾನಿಯಾ ಜೊತೆಗೆ ಭಾರತ ಹೊಂದಿರುವ ಸಾಂಪ್ರದಾಯಿಕ ಸ್ನೇಹ ಸಂಬಂಧಗಳ ಪ್ರಾಮುಖ್ಯತೆಯನ್ನು ಬಲವಾಗಿ ಪ್ರತಿಪಾದಿಸಿದರು. ತಾಂಜಾನಿಯಾದ ಸರ್ಕಾರ ಮತ್ತು ಅಲ್ಲಿನ ಜನರ ಅಗತ್ಯ ಮತ್ತು ಅಪೇಕ್ಷೆಯಂತೆ ಅಭಿವೃದ್ಧಿ ಪಯಣದಲ್ಲಿ ಭಾರತದ ಪಾಲುದಾರಿಕೆಯ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.
ಪ್ರಧಾನಮಂತ್ರಿ ಅವರು, ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ತಾಂಜಾನಿಯಾದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ತಾಂಜಾನಿಯಾ ಅಧಿಕಾರಿಗಳು ನೀಡಿದ ಸಹಕಾರಕ್ಕಾಗಿ ಅವರು ಅಧ್ಯಕ್ಷ ಮಾಗುಫುಲಿ ಅವರಿಗೆ ಧನ್ಯವಾದಗಳನ್ನು ಹೇಳಿದರು.
ಉಭಯ ನಾಯಕರು ಒಟ್ಟಾರೆ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಪರಾಮರ್ಶೆ ನಡೆಸಿದರು. ಅವರು, ಭಾರತ ಮತ್ತು ತಾಂಜಾನಿಯಾ ನಡುವೆ ವ್ಯಾಪಾರ ಮತ್ತು ಬಂಡವಾಳ ಹರಿವು, ಶೈಕ್ಷಣಿಕ ಸಂಬಂಧಗಳು ಮತ್ತು ಅಭಿವೃದ್ಧಿ ಪಾಲುದಾರಿಕೆ ಬೆಳವಣಿಗೆ ಹೊಂದುತ್ತಿರುವ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು ಮತ್ತು ಈ ಸಂಬಂಧಗಳನ್ನು ಮತ್ತಷ್ಟು ವೃದ್ಧಿಸುವ ಸಾಧ್ಯತೆಗಳ ಬಗ್ಗೆ ಚರ್ಚಿಸಿದರು.
ತಾಂಜಾನಿಯಾ ಈ ವರ್ಷಾಂತ್ಯದಲ್ಲಿ ಅಧ್ಯಕ್ಷೀಯ ಮತ್ತು ಸಂಸದೀಯ ಚುನಾವಣೆಗಳನ್ನು ಎದುರಿಸಲಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಅವರು, ಗೌರವಾನ್ವಿತ ಅಧ್ಯಕ್ಷ ಮಾಗುಫುಲಿ ಮತ್ತು ತಾಂಜಾನಿಯಾ ಜನರಿಗೆ ಶುಭಾಶಯ ಕೋರಿದರು.
***
(Release ID: 1631636)
Visitor Counter : 298
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam