ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಲಾವೊ ಜನ ಪ್ರಜಾತಂತ್ರ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಡಾ. ತೊಂಗ್ಲೌನ್ ಸಿಸೌಲಿತ್ ಅವರೊಂದಿಗೆ ದೂರವಾಣಿ ಸಮಾಲೋಚನೆ

Posted On: 12 JUN 2020 8:44PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಲಾವೊ ಜನ ಪ್ರಜಾತಂತ್ರ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಡಾ. ತೊಂಗ್ಲೌನ್ ಸಿಸೌಲಿತ್ ಅವರೊಂದಿಗೆ ದೂರವಾಣಿ ಸಮಾಲೋಚನೆ

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಾವೊ ಜನ ಪ್ರಜಾತಂತ್ರ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಡಾ. ತೊಂಗ್ಲೌನ್ ಸಿಸೌಲಿತ್ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.

ಉಭಯ ನಾಯಕರು ಜಾಗತಿಕ ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಎದುರಾಗಿರುವ ಆರೋಗ್ಯ ಮತ್ತು ಆರ್ಥಿಕ ಸವಾಲುಗಳ ಕುರಿತಂತೆ ವಿಚಾರ ವಿನಿಮಯ ನಡೆಸಿದರು. ಪ್ರಧಾನಮಂತ್ರಿ ಅವರು ಲಾವೋಸ್ ನಲ್ಲಿ ಸಾಂಕ್ರಾಮಿಕ ನಿಯಂತ್ರಣಕ್ಕೆ ಅಲ್ಲಿನ ಲಾವೊ ಪಿಡಿಆರ್ ಸರ್ಕಾರ ಕೈಗೊಂಡ ಪರಿಣಾಮಕಾರಿ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಉಭಯ ನಾಯಕರು ಕೋವಿಡ್ ನಂತರದ ಜಗತ್ತಿಗೆ ಸಿದ್ಧವಾಗಲು ಅಂತಾರಾಷ್ಟ್ರೀಯ ಸಹಕಾರದ ಅಗತ್ಯತೆ ಮತ್ತು ಉತ್ತಮ ಪದ್ಧತಿಗಳು ಹಾಗೂ ಅನುಭವಗಳ ಹಂಚಿಕೆಗೆ ಒಪ್ಪಿಗೆ ನೀಡಿದರು.

ಪ್ರಧಾನಮಂತ್ರಿ ಅವರು, ಲಾವೋಸ್ ಜೊತೆಗಿನ ಭಾರತದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು ಮತ್ತು ವ್ಯಾಟ್ ಫೌನಲ್ಲಿ ವಿಶ್ವ ಪಾರಂಪರಿಕ ತಾಣದ ಪುನರುಜ್ಜೀವನ ಕಾರ್ಯದಲ್ಲಿ ತೊಡಗಿಕೊಂಡಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದರು. ಲಾವೊ ಪ್ರಧಾನಮಂತ್ರಿ ಅವರು, ಲಾವೊ ಅಭಿವೃದ್ಧಿ ಕಾರ್ಯಕ್ರಮಗಳು, ವಿದ್ಯಾರ್ಥಿ ವೇತನಕ್ಕೆ ಸಾಮರ್ಥ್ಯವೃದ್ಧಿ ಕಾರ್ಯಕ್ರಮಕ್ಕೆ ಬೆಂಬಲ ನೀಡುತ್ತಿರುವುದಕ್ಕಾಗಿ ಭಾರತದ ಪ್ರಧಾನಮಂತ್ರಿ ಅವರಿಗೆ ಧನ್ಯವಾದಗಳನ್ನು ಹೇಳಿದರು.

ಲಾವೊ ಪಿಡಿಆರ್ ಜೊತೆ ಅಭಿವೃದ್ಧಿ ಪಾಲುದಾರಿಕೆ ಮುಂದುವರಿಸುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ ಅವರು, ಭಾರತದ ನೆರೆಯಲ್ಲಿರುವ ಲಾವೋಸ್ ಮೌಲ್ಯಯುತ ಪಾಲುದಾರ ರಾಷ್ಟ್ರ ಎಂದು ಹೇಳಿದ್ದಾರೆ.

***


(Release ID: 1631637) Visitor Counter : 275