ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್ -19 ಹೊಸ ಮಾಹಿತಿ
Posted On:
15 JUN 2020 5:38PM by PIB Bengaluru
ಕೋವಿಡ್ -19 ಹೊಸ ಮಾಹಿತಿ
ಚೇತರಿಕೆಯ ಪ್ರಮಾಣ 51.08% ಕ್ಕೆ ಸುಧಾರಣೆ
ಪ್ರಸ್ತುತ ಭಾರತದಲ್ಲಿ 900ಕ್ಕೂ ಹೆಚ್ಚು ಕೋವಿಡ್-19 ಪ್ರಯೋಗಾಲಯಗಳ ಕಾರ್ಯನಿರ್ವಹಣೆ
ಕಳೆದ 24 ಗಂಟೆಗಳಲ್ಲಿ 7419 ಕೋವಿಡ್-19 ರೋಗಿಗಳನ್ನು ಗುಣಪಡಿಸಲಾಯಿತು. ಒಟ್ಟು 1,69,797 ರೋಗಿಗಳನ್ನು ಈವರೆಗೆ ಕೋವಿಡ್-19ರಿಂದ ಗುಣಪಡಿಸಲಾಗಿದೆ. ಚೇತರಿಕೆಯ ಪ್ರಮಾಣವು 51.08% ಕ್ಕೆ ಏರಿದೆ, ಇದು ಅರ್ಧಕ್ಕಿಂತ ಹೆಚ್ಚು ಸೋಂಕಿತ ಪ್ರಕರಣಗಳು ರೋಗದಿಂದ ಚೇತರಿಸಿಕೊಂಡಿವೆ ಎಂಬ ಅಂಶವನ್ನು ಸೂಚಿಸುತ್ತದೆ.
ಪ್ರಸ್ತುತ, 1,53,106 ಸಕ್ರಿಯ ಪ್ರಕರಣಗಳು ವೈದ್ಯಕೀಯ ಮೇಲ್ವಿಚಾರಣೆಯಲ್ಲಿವೆ.
ಸೋಂಕಿತ ವ್ಯಕ್ತಿಗಳಲ್ಲಿ ನಾವೆಲ್ ಕೊರೊನಾವೈರಸ್ಸನ್ನು ಪತ್ತೆಹಚ್ಚಲು ಐಸಿಎಂಆರ್ ಪರೀಕ್ಷಾ ಸಾಮರ್ಥ್ಯವನ್ನು ನಿರಂತರವಾಗಿ ಹೆಚ್ಚಿಸಲಾಗುತ್ತಿದೆ. ಸರ್ಕಾರಿ ಪ್ರಯೋಗಾಲಯಗಳ ಸಂಖ್ಯೆಯನ್ನು 653ಕ್ಕೆ ಮತ್ತು ಖಾಸಗಿ ಪ್ರಯೋಗಾಲಯಗಳನ್ನು 248 ಕ್ಕೆ ಹೆಚ್ಚಿಸಲಾಗಿದೆ (ಒಟ್ಟು 901 ). ವಿವರಗಳು ಈ ಕೆಳಗಿನಂತಿರುತ್ತದೆ:
ರಿಯಲ್-ಟೈಮ್ ಆರ್ಟಿ ಪಿಸಿಆರ್ ಆಧಾರಿತ ಪರೀಕ್ಷಾ ಪ್ರಯೋಗಾಲಯಗಳು: 534 (ಸರ್ಕಾರಿ: 347 + ಖಾಸಗಿ: 187)
ಟ್ರೂನಾಟ್ ಆಧಾರಿತ ಪರೀಕ್ಷಾ ಪ್ರಯೋಗಾಲಯಗಳು: 296 (ಸರ್ಕಾರಿ: 281 + ಖಾಸಗಿ: 15)
ಸಿಬಿಎನ್ಎಟಿ ಆಧಾರಿತ ಪರೀಕ್ಷಾ ಪ್ರಯೋಗಾಲಯಗಳು: 71 (ಸರ್ಕಾರಿ: 25 + ಖಾಸಗಿ: 46)
ಕಳೆದ 24 ಗಂಟೆಗಳಲ್ಲಿ 1,15,519 ಮಾದರಿಗಳನ್ನು ಪರೀಕ್ಷಿಸಲಾಯಿತು. ಇಲ್ಲಿಯವರೆಗೆ ಒಟ್ಟು 57,74,133 ಮಾದರಿಗಳನ್ನು ಪರೀಕ್ಷಿಸಲಾಗಿದೆ
ಕೋವಿಡ್-19ಕ್ಕೆ ಸಂಬಂಧಿತ ತಾಂತ್ರಿಕ ಸಮಸ್ಯೆಗಳು, ಮಾರ್ಗಸೂಚಿಗಳು ಮತ್ತು ಸಲಹೆಗಳ ಎಲ್ಲಾ ಅಧಿಕೃತ ಮತ್ತು ಹೊಸ ಮಾಹಿತಿಗಾಗಿ ದಯವಿಟ್ಟು ಇಲಾಖೆಯ ಈ ಜಾಲತಾಣಕ್ಕೆ ನಿಯಮಿತವಾಗಿ ಭೇಟಿ ನೀಡಿರಿ: https://www.mohfw.gov.in
ಕೋವಿಡ್-19ಕ್ಕೆ ಸಂಬಂಧಿಸಿದ ತಾಂತ್ರಿಕ ಪ್ರಶ್ನೆಗಳನ್ನು technquery.covid19[at]gov[dot]in , ಇತರ ಪ್ರಶ್ನೆಗಳನ್ನು ಕೇಳಲು ncov2019[at]gov[dot]in ಗೆ ಇಮೇಲ್ ಮಾಡಬಹುದು ಮತ್ರು @CovidIndiaSeva ಗೆ ಟ್ವೀಟ್ ಮಾಡಬಹುದು.
ಕೋವಿಡ್-19 ಬಗ್ಗೆ ಯಾವುದೇ ಪ್ರಶ್ನೆಗಳಿದ್ದಲ್ಲಿ, ದಯವಿಟ್ಟು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ.: +91-11-23978046 ಅಥವಾ 1075 (ಟೋಲ್-ಫ್ರೀ). ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕೋವಿಡ್-19ಕ್ಕೆ ಸಂಬಂಧಿಸಿದ ಸಹಾಯವಾಣಿ ಸಂಖ್ಯೆಗಳ ಪಟ್ಟಿ https://www.mohfw.gov.in/pdf/coronvavirushelplinenumber.pdf ನಲ್ಲಿಯೂ ಲಭ್ಯವಿದೆ.
***
(Release ID: 1631852)
Visitor Counter : 215
Read this release in:
Bengali
,
English
,
Urdu
,
Hindi
,
Marathi
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam