ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಹೊಸ ಮಾಹಿತಿ

Posted On: 16 JUN 2020 2:15PM by PIB Bengaluru

ಕೋವಿಡ್-19 ಹೊಸ ಮಾಹಿತಿ

ಚೇತರಿಕೆಯ ಪ್ರಮಾಣ 52.47% ಕ್ಕೆ ಸುಧಾರಣೆ

ಕೋವಿಡ್-19 ಸಂಬಂಧಿ ಕೈಪಿಡಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಬಿಡುಗಡೆ ಮಾಡಿದೆ

 

ಕಳೆದ 24 ಗಂಟೆಗಳಲ್ಲಿ 10,215 ಕೋವಿಡ್ -19 ರೋಗಿಗಳನ್ನು ಗುಣಪಡಿಸಲಾಗಿದೆ. ಒಟ್ಟು 1,80,012 ರೋಗಿಗಳನ್ನು ಈವರೆಗೆ ಕೋವಿಡ್-19ರಿಂದ ಗುಣಪಡಿಸಲಾಗಿದೆ. ಚೇತರಿಕೆಯ ಪ್ರಮಾಣವು 52.47% ಕ್ಕೆ ಏರಿದೆ, ಇದು ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ರೋಗದಿಂದ ಚೇತರಿಸಿಕೊಂಡಿವೆ ಎಂಬ ಅಂಶವನ್ನು ಸೂಚಿಸುತ್ತದೆ.

ಪ್ರಸ್ತುತ, 1,53,178 ಸಕ್ರಿಯ ಪ್ರಕರಣಗಳು ವೈದ್ಯಕೀಯ ಮೇಲ್ವಿಚಾರಣೆಯಲ್ಲಿವೆ.

ಕೋವಿಡ್-19ರಿಂದ ಬಳಲುತ್ತಿರುವ ಜನರು, ಕೋವಿಡ್-19ರಿಂದ ಚೇತರಿಸಿಕೊಂಡ ರೋಗಿಗಳು, ಮುಂಚೂಣಿ ಆರೋಗ್ಯ ಸೇವೆ ಒದಗಿಸುವವರು, ಅವರ ಕುಟುಂಬಗಳು ಸೇರಿದಂತೆ ಕೋವಿಡ್-19 ಪೀಡಿತ ಜನರು ಎದುರಿಸುತ್ತಿರುವ ಕಳಂಕದ ಸಮಸ್ಯೆಯನ್ನು ಪರಿಹರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ವಿವರವಾದ ಸಚಿತ್ರ ಕೈಪಿಡಿಯನ್ನು ಬಿಡುಗಡೆ ಮಾಡಿದೆ. ಕೈಪಿಡಿಯನ್ನು ಇಲ್ಲಿ ಕಾಣಬಹುದು:

https://www.mohfw.gov.in/pdf/GuidetoaddressstigmaassociatedwithCOVID19.pdf

ಕೋವಿಡ್-19ಕ್ಕೆ ಸಂಬಂಧಿತ ತಾಂತ್ರಿಕ ಸಮಸ್ಯೆಗಳು, ಮಾರ್ಗಸೂಚಿಗಳು ಮತ್ತು ಸಲಹೆಗಳ ಎಲ್ಲಾ ಅಧಿಕೃತ ಮತ್ತು ಹೊಸ ಮಾಹಿತಿಗಾಗಿ ದಯವಿಟ್ಟು ಇಲಾಖೆಯ ಜಾಲತಾಣಕ್ಕೆ ನಿಯಮಿತವಾಗಿ ಭೇಟಿ ನೀಡಿರಿ: https://www.mohfw.gov.in

ಕೋವಿಡ್-19ಕ್ಕೆ ಸಂಬಂಧಿಸಿದ ತಾಂತ್ರಿಕ ಪ್ರಶ್ನೆಗಳನ್ನು technquery.covid19[at]gov[dot]in , ಇತರ ಪ್ರಶ್ನೆಗಳನ್ನು ಕೇಳಲು ncov2019[at]gov[dot]in ಗೆ ಇಮೇಲ್ ಮಾಡಬಹುದು ಮತ್ರು @CovidIndiaSeva ಗೆ ಟ್ವೀಟ್ ಮಾಡಬಹುದು.

ಕೋವಿಡ್-19 ಬಗ್ಗೆ ಯಾವುದೇ ಪ್ರಶ್ನೆಗಳಿದ್ದಲ್ಲಿ, ದಯವಿಟ್ಟು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ.: +91-11-23978046 ಅಥವಾ 1075 (ಟೋಲ್-ಫ್ರೀ). ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕೋವಿಡ್-19ಕ್ಕೆ ಸಂಬಂಧಿಸಿದ ಸಹಾಯವಾಣಿ ಸಂಖ್ಯೆಗಳ ಪಟ್ಟಿ https://www.mohfw.gov.in/pdf/coronvavirushelplinenumber.pdf ನಲ್ಲಿಯೂ ಲಭ್ಯವಿದೆ.

***



(Release ID: 1632026) Visitor Counter : 176