ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಹೊಸ ಮಾಹಿತಿ
Posted On:
17 JUN 2020 2:06PM by PIB Bengaluru
ಕೋವಿಡ್-19 ಹೊಸ ಮಾಹಿತಿ
ಚೇತರಿಕೆಯ ಪ್ರಮಾಣ 52.8% ಕ್ಕೆ ಹೆಚ್ಚಳ
ಕಳೆದ 24 ಗಂಟೆಗಳಲ್ಲಿ 6922 ಕೋವಿಡ್-19 ರೋಗಿಗಳನ್ನು ಗುಣಪಡಿಸಲಾಯಿತು. ಒಟ್ಟು 1,86,934 ರೋಗಿಗಳನ್ನು ಈವರೆಗೆ ಕೋವಿಡ್-19ರಿಂದ ಗುಣಪಡಿಸಲಾಗಿದೆ. ಚೇತರಿಕೆಯ ಪ್ರಮಾಣವು 52.80% ಕ್ಕೆ ಏರಿದೆ. ಪ್ರಸ್ತುತ, 1,55,227 ಸಕ್ರಿಯ ಪ್ರಕರಣಗಳು ವೈದ್ಯಕೀಯ ಮೇಲ್ವಿಚಾರಣೆಯಲ್ಲಿವೆ.
ಸರ್ಕಾರಿ ಪ್ರಯೋಗಾಲಯಗಳ ಸಂಖ್ಯೆಯನ್ನು 674 ಕ್ಕೆ ಮತ್ತು ಖಾಸಗಿ ಪ್ರಯೋಗಾಲಯಗಳನ್ನು 250 ಕ್ಕೆ ಹೆಚ್ಚಿಸಲಾಗಿದೆ (ಒಟ್ಟು 924). ಅವುಗಳ ವಿವರಣೆಯು ಹೀಗಿವೆ;
ರಿಯಲ್-ಟೈಮ್ ಆರ್ಟಿ ಪಿಸಿಆರ್ ಆಧಾರಿತ ಪರೀಕ್ಷಾ ಪ್ರಯೋಗಾಲಯಗಳು: 535 (ಸರ್ಕಾರಿ: 347 + ಖಾಸಗಿ: 188)
ಟ್ರೂನಾಟ್ ಆಧಾರಿತ ಪರೀಕ್ಷಾ ಪ್ರಯೋಗಾಲಯಗಳು: 316 (ಸರ್ಕಾರಿ: 302 + ಖಾಸಗಿ: 14)
ಸಿಬಿಎನ್ಎಟಿ ಆಧಾರಿತ ಪರೀಕ್ಷಾ ಪ್ರಯೋಗಾಲಯಗಳು: 73 (ಸರ್ಕಾರಿ: 25 + ಖಾಸಗಿ: 48)
ಕಳೆದ 24 ಗಂಟೆಗಳಲ್ಲಿ 1,63,187 ಮಾದರಿಗಳನ್ನು ಪರೀಕ್ಷಿಸಲಾಯಿತು. ಇಲ್ಲಿಯವರೆಗೆ ಪರೀಕ್ಷಿಸಿದ ಒಟ್ಟು ಮಾದರಿಗಳ ಸಂಖ್ಯೆ 60,84,256 ಆಗಿದೆ.
ಕೋವಿಡ್-19ಕ್ಕೆ ಸಂಬಂಧಿತ ತಾಂತ್ರಿಕ ಸಮಸ್ಯೆಗಳು, ಮಾರ್ಗಸೂಚಿಗಳು ಮತ್ತು ಸಲಹೆಗಳ ಎಲ್ಲಾ ಅಧಿಕೃತ ಮತ್ತು ಹೊಸ ಮಾಹಿತಿಗಾಗಿ ದಯವಿಟ್ಟು ಇಲಾಖೆಯ ಈ ಜಾಲತಾಣಕ್ಕೆ ನಿಯಮಿತವಾಗಿ ಭೇಟಿ ನೀಡಿರಿ: https://www.mohfw.gov.in
ಕೋವಿಡ್-19ಕ್ಕೆ ಸಂಬಂಧಿಸಿದ ತಾಂತ್ರಿಕ ಪ್ರಶ್ನೆಗಳನ್ನು technquery.covid19[at]gov[dot]in , ಇತರ ಪ್ರಶ್ನೆಗಳನ್ನು ಕೇಳಲು ncov2019[at]gov[dot]in ಗೆ ಇಮೇಲ್ ಮಾಡಬಹುದು ಮತ್ರು @CovidIndiaSeva ಗೆ ಟ್ವೀಟ್ ಮಾಡಬಹುದು.
ಕೋವಿಡ್-19 ಬಗ್ಗೆ ಯಾವುದೇ ಪ್ರಶ್ನೆಗಳಿದ್ದಲ್ಲಿ, ದಯವಿಟ್ಟು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ.: +91-11-23978046 ಅಥವಾ 1075 (ಟೋಲ್-ಫ್ರೀ). ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕೋವಿಡ್-19ಕ್ಕೆ ಸಂಬಂಧಿಸಿದ ಸಹಾಯವಾಣಿ ಸಂಖ್ಯೆಗಳ ಪಟ್ಟಿ https://www.mohfw.gov.in/pdf/coronvavirushelplinenumber.pdf ನಲ್ಲಿಯೂ ಲಭ್ಯವಿದೆ.
https://www.mohfw.gov.in/pdf/coronvavirushelplinenumber.pdf ನಲ್ಲಿಯೂ ಲಭ್ಯವಿದೆ.
***
(Release ID: 1632247)
Visitor Counter : 201
Read this release in:
Bengali
,
English
,
Urdu
,
Hindi
,
Marathi
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam