ಪ್ರಧಾನ ಮಂತ್ರಿಯವರ ಕಛೇರಿ

ಗರೀಬ್ ಕಲ್ಯಾಣ್ ರೋಜ್ಗಾರ್ ಅಭಿಯಾನಕ್ಕೆ ಪ್ರಧಾನಿ ಮೋದಿಯವರಿಂದ ಜೂನ್ 20 ರಂದು ಚಾಲನೆ

Posted On: 18 JUN 2020 9:24AM by PIB Bengaluru

ಗ್ರಾಮೀಣ ಭಾರತದಲ್ಲಿ ಜೀವನೋಪಾಯದ ಅವಕಾಶಗಳ ಹೆಚ್ಚಳದ 

ಗರೀಬ್ ಕಲ್ಯಾಣ್ ರೋಜ್ಗಾರ್ ಅಭಿಯಾನಕ್ಕೆ ಪ್ರಧಾನಿ ಮೋದಿಯವರಿಂದ ಜೂನ್ 20 ರಂದು ಚಾಲನೆ

125 ದಿನಗಳ ಅಭಿಯಾನವು 6 ರಾಜ್ಯಗಳ 116 ಜಿಲ್ಲೆಗಳಲ್ಲಿ ವಲಸೆ ಕಾರ್ಮಿಕರಿಗೆ ನೆರವಾಗುತ್ತದೆ

ಅಭಿಯಾನವು ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದರ ಜೊತೆಗೆ ದೀರ್ಘಬಾಳಿಕೆಯ ಮೂಲಸೌಕರ್ಯಗಳನ್ನು ಸೃಷ್ಟಿಸುತ್ತದೆ

ಗರೀಬ್ ಕಲ್ಯಾಣ್ ರೋಜ್ಗಾರ್ ಅಭಿಯಾನದ ಅಡಿಯಲ್ಲಿ 50,000 ಕೋಟಿ ರೂಮೌಲ್ಯದ ಸಾರ್ವಜನಿಕ ಕಾಮಗಾರಿಗಳನ್ನು ನಡೆಸಲಾಗುವುದು

 

ತಮ್ಮ ಊರುಗಳಿಗೆ ಮರಳಿರುವ ವಲಸೆ ಕಾರ್ಮಿಕರು ಮತ್ತು ಗ್ರಾಮೀಣ ಜನರಿಗೆ ಜೀವನೋಪಾಯದ ಅವಕಾಶಗಳನ್ನು ಒದಗಿಸಲು ‘ಗರೀಬ್ ಕಲ್ಯಾಣ್ ರೋಜ್ಗಾರ್ ಅಭಿಯಾನ್’ ಎಂಬ ಬೃಹತ್ ಗ್ರಾಮೀಣ ಸಾರ್ವಜನಿಕ ಯೋಜನೆಯನ್ನು ಭಾರತ ಸರ್ಕಾರವು ಆರಂಭಿಸಲಿದೆಪ್ರಧಾನಿ ನರೇಂದ್ರ ಮೋದಿ ಅವರು 2020  ಜೂನ್ 20 ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ-ಕಾನ್ಫರೆನ್ಸ್ ಮೂಲಕ ಬಿಹಾರದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಸಮ್ಮುಖದಲ್ಲಿ  ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆಅಭಿಯಾನವನ್ನು ಬಿಹಾರದ ಖಗಾರಿಯಾ ಜಿಲ್ಲೆಯ ಬೆಲ್ದೌರ್ ಬ್ಲಾಕ್ನ ತೆಲಿಹಾರ್ ಗ್ರಾಮದಿಂದ ಪ್ರಾರಂಭಿಸಲಾಗುವುದುಇದಲ್ಲದೆಇತರ ಐದು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಸಚಿವಾಲಯಗಳ ಕೇಂದ್ರ ಸಚಿವರು ಸಹ ವರ್ಚುವಲ್ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆಆರು ರಾಜ್ಯಗಳ 116 ಜಿಲ್ಲೆಗಳ ಹಳ್ಳಿಗಳು ಸಾಮಾನ್ಯ ಸೇವಾ ಕೇಂದ್ರಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ  ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದುಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸಲಾಗುತ್ತದೆ.

125 ದಿನಗಳ  ಅಭಿಯಾನವು ಮಿಷನ್ ಮೋಡ್ನಲ್ಲಿ ಕಾರ್ಯನಿರ್ವಹಿಸಲಿದ್ದುವಲಸೆ ಕಾರ್ಮಿಕರಿಗೆ ಉದ್ಯೋಗ ಒದಗಿಸಲು ಮತ್ತು ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ಸೃಷ್ಟಿಸಲು 50,000 ಕೋಟಿ ರೂಮೌಲ್ಯದ 25 ರೀತಿಯ ಕಾಮಗಾರಿಗಳನ್ನು ನಡೆಸಲಾಗುವುದು.

27 ಮಹತ್ವಾಕಾಂಕ್ಷಿ ಜಿಲ್ಲೆಗಳನ್ನು ಒಳಗೊಂಡ ಅಭಿಯಾನಕ್ಕೆ ಬಿಹಾರಉತ್ತರ ಪ್ರದೇಶಮಧ್ಯಪ್ರದೇಶರಾಜಸ್ಥಾನಜಾರ್ಖಂಡ್ ಮತ್ತು ಒಡಿಶಾ ರಾಜ್ಯಗಳಲ್ಲಿ 25,000 ಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಹೊಂದಿರುವ ಒಟ್ಟು 116 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ ಜಿಲ್ಲೆಗಳು ಸುಮಾರು ಮೂರನೇ ಎರಡರಷ್ಟು ವಲಸೆ ಕಾರ್ಮಿಕರನ್ನು ಹೊಂದಿವೆ ಎಂದು ಅಂದಾಜಿಸಲಾಗಿದೆ.

ಅಭಿಯಾನವು ಗ್ರಾಮೀಣಾಭಿವೃದ್ಧಿಪಂಚಾಯತಿ ರಾಜ್ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳುಗಣಿಕುಡಿಯುವ ನೀರು ಮತ್ತು ನೈರ್ಮಲ್ಯಪರಿಸರರೈಲ್ವೆಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲಹೊಸ ಮತ್ತು ನವೀಕರಿಸಬಹುದಾದ ಇಂಧನಗಡಿ ರಸ್ತೆಗಳು , ಟೆಲಿಕಾಂ ಮತ್ತು ಕೃಷಿ ಯಂತಹ 12 ವಿವಿಧ ಸಚಿವಾಲಯಗಳು / ಇಲಾಖೆಗಳ ನಡುವೆ ಸಂಘಟಿತ ಪ್ರಯತ್ನವಾಗಿರಲಿದೆ.

***(Release ID: 1632303) Visitor Counter : 228