ಪ್ರಧಾನ ಮಂತ್ರಿಯವರ ಕಛೇರಿ

ಜೂನ್ 26 ಶುಕ್ರವಾರದಂದು ಪ್ರಧಾನ ಮಂತ್ರಿಯವರು ‘ಆತ್ಮ ನಿರ್ಭರ್ ಉತ್ತರ ಪ್ರದೇಶ ರೋಜ್ ಗಾರ್ ಅಭಿಯಾನ’ ಉದ್ಘಾಟಿಸಲಿದ್ದಾರೆ

Posted On: 25 JUN 2020 2:49PM by PIB Bengaluru

ಸಾರ್ವತ್ರಿಕವಾಗಿ ಕೋವಿಡ್-19 ಸಾಂಕ್ರಾಮಿಕ ರೋಗ ಕಾರ್ಮಿಕ ವರ್ಗದ ಮೇಲೆ ಅದರಲ್ಲೂ ವಿಶೇಷವಾಗಿ ವಲಸೆ ಕಾರ್ಮಿಕರ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆಬಹು ದೊಡ್ಡ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ವಿವಿಧ ರಾಜ್ಯಗಳಿಗೆ ಹಿಂದಿರುಗಿದ್ದಾರೆಕೋವಿಡ್-19 ರಿಂದ ಉದ್ಭವಿಸಿದ ಸವಾಲುಗಳು ವಲಸಿಗರಿಗೆ ಮತ್ತು ಗ್ರಾಮೀಣ ಭಾಗದ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳು ಮತ್ತು ಜೀವನೋಪಾಯದ ಸಾಧನಗಳನ್ನು ಒದಗಿಸುವ ಅಗತ್ಯತೆಯನ್ನು ಒಳಗೊಂಡಿವೆವಿವಿಧ ಕ್ಷೇತ್ರಗಳನ್ನು ಉತ್ತೇಜಿಸಲು ಭಾರತ ಸರ್ಕಾರ ಸ್ವಾವಲಂಬಿ ಭಾರತ ಪ್ಯಾಕೇಜ್ ನ್ನು ಘೋಷಿಸಿದೆದೇಶದ ಹಿಂದುಳಿದ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಮತ್ತು ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಗರೀಬ್ ಕಲ್ಯಾಣ ರೋಜ್ ಗಾರ್ ಅಭಿಯಾನ್ ನ್ನು 2020  ಜೂನ್ 20 ರಂದು ಪ್ರಾರಂಭಿಸಲಾಯಿತು.     

ಕೇವಲ ಉತ್ತರ ಪ್ರದೇಶಕ್ಕೆ ಸುಮಾರು 30 ಲಕ್ಷ ವಲಸೆ ಕಾರ್ಮಿಕರು ಹಿಂದಿರುಗಿದ್ದಾರೆಉತ್ತರ ಪ್ರದೇಶದ 31 ಜಿಲ್ಲೆಗಳಲ್ಲಿ 25,000 ಕ್ಕೂ ಹೆಚ್ಚು ಹಿಂದಿರುಗಿದ ವಲಸೆ ಕಾರ್ಮಿಕರಿದ್ದಾರೆಇದು ಮಹತ್ವಾಕಾಂಕ್ಷೆಯ ಜಿಲ್ಲೆಗಳನ್ನು ಒಳಗೊಂಡಿದೆಉತ್ತರ ಪ್ರದೇಶ ಸರ್ಕಾರ ಸ್ವಾವಲಂಬಿ ಉತ್ತರ ಪ್ರದೇಶ ರೋಜ್ ಗಾರ್ ಅಭಿಯಾನ್’ ಎಂಬ ವಿಶಿಷ್ಟ ಉಪಕ್ರಮವನ್ನು ರಚಿಸಿದೆಇದು ಉದ್ಯಮಗಳು ಮತ್ತು ಇತರ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರ ರೂಪಿಸುತ್ತಿರುವ ಕಾರ್ಯಕ್ರಮಗಳಾಗಿವೆ ಅಭಿಯಾನ ಉದ್ಯೋಗಾವಕಾಶ ಕಲ್ಪಿಸುವುದುಸ್ಥಳೀಯ ಉದ್ಯಮಶೀಲತೆಗೆ ಪ್ರೋತ್ಸಾಹ ನೀಡುವುದು ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಕೈಗಾರಿಕಾ ಸಂಘ ಸಂಸ್ಥೆಗಳೊಂದಿಗೆ ಒದಗಿಸುವ ಸಹಭಾಗಿತ್ವವನ್ನು ವೃದ್ಧಿಸಿಕೊಳ್ಳುವತ್ತ ಗಮನ ಕೇಂದ್ರೀಕರಿಸಿದೆ.    

26 ಜೂನ್ 2020 ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪ್ರಧಾನ ಮಂತ್ರಿಯವರು  ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆಇದರ ಜೊತೆಗೆ ಉತ್ತರ ಪ್ರದೇಶದ ಸಂಬಂಧಿತ ಸಚಿವರುಗಳೂ ಸಹ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಭಾಗವಹಿಸಲಿದ್ದಾರೆಪ್ರಧಾನ ಮಂತ್ರಿಯವರು ಉತ್ತರ ಪ್ರದೇಶದ ಜಿಲ್ಲೆಗಳ ಗ್ರಾಮಸ್ಥರೊಂದಿಗೆ ಮಾತನಾಡಲಿದ್ದಾರೆಕೋವಿಡ್ -19 ಸಾಂಕ್ರಾಮಿಕ ರೋಗ ಸ್ಫೋಟಿಸಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಕಪಾಡಿಕೊಂಡು ಉತ್ತರ ಪ್ರದೇಶದ ಎಲ್ಲ ಜಿಲ್ಲೆಗಳ ಗ್ರಾಮಸ್ಥರು ಸಾಮಾನ್ಯ ಸೇವಾ ಕೇಂದ್ರಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ  ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

***



(Release ID: 1634263) Visitor Counter : 216