ಪ್ರಧಾನ ಮಂತ್ರಿಯವರ ಕಛೇರಿ
ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2020 ಗ್ರ್ಯಾಂಡ್ ಫಿನಾಲೆ ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ
Posted On:
31 JUL 2020 1:04PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2020ರ ಆಗಸ್ಟ್ 1 ರಂದು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2020ಯ ಗ್ರ್ಯಾಂಡ್ ಫಿನಾಲೆಯನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆ. ಅಲ್ಲದೆ ಅವರು ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು.
ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ದಿನನಿತ್ಯ ನಮ್ಮ ಜೀವನದಲ್ಲಿ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ವಿದ್ಯಾರ್ಥಿಗಳಿಗಾಗಿ ಒದಗಿಸಿರುವ ಒಂದು ರಾಷ್ಟ್ರೀಯ ವೇದಿಕೆಯಾಗಿದೆ. ಆ ಮೂಲಕ ಸಮಸ್ಯೆಗಳನ್ನು ಬಗೆಹರಿಸುವುದು ಮತ್ತು ಉತ್ಪನ್ನಗಳ ಆವಿಷ್ಕಾರ ಸಂಸ್ಕೃತಿಯನ್ನು ವೃದ್ಧಿಸುವ ಗುರಿ ಹೊಂದಲಾಗಿದೆ. ಯುವ ಮನಸ್ಸುಗಳಲ್ಲಿ ಚೌಕಟ್ಟಿನಾಚೆ ಯೋಚಿಸುವ ಮನೋಭಾವವನ್ನು ರೂಢಿಸುವಲ್ಲಿ ಇದು ಅತ್ಯುತ್ತಮ ಯಶಸ್ಸು ಸಾಧಿಸಿದೆ.
ಮೊದಲನೇ ಆವೃತ್ತಿಯ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2017ರಲ್ಲಿ 42,000 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಂತರ 2018ರಲ್ಲಿ ಒಂದು ಲಕ್ಷ ಮತ್ತು 2019ರಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಎರಡು ಲಕ್ಷಕ್ಕೆ ಏರಿಕೆಯಾಯಿತು. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2020ಯ ಮೊದಲ ಸುತ್ತಿನಲ್ಲಿ 4.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ವರ್ಷ ಗ್ರ್ಯಾಂಡ್ ಫಿನಾಲೆಯನ್ನು ಆನ್ ಲೈನ್ ಮೂಲಕ ಆಯೋಜಿಸಿದ್ದು, ಅತ್ಯಾಧುನಿಕವಾಗಿ ಅಭಿವೃದ್ಧಿಪಡಿಸಿರುವ ವಿಶೇಷ ವೇದಿಕೆಯಲ್ಲಿ ದೇಶಾದ್ಯಂತ ಇರುವ ವಿದ್ಯಾರ್ಥಿಗಳನ್ನು ಒಂದೇ ವೇದಿಕೆಗೆ ತರಲಾಗುವುದು. 10,000ಕ್ಕೂ ಅಧಿಕ ವಿದ್ಯಾರ್ಥಿಗಳು ಕೇಂದ್ರ ಸರ್ಕಾರಿ ಇಲಾಖೆಗಳ 37, ರಾಜ್ಯ ಸರ್ಕಾರಗಳ 17, ಉದ್ಯಮದ 20 ಸೇರಿದಂತೆ ಒಟ್ಟು 243 ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯಲಿದ್ದಾರೆ.
***
(Release ID: 1642791)
Visitor Counter : 215
Read this release in:
Malayalam
,
Bengali
,
English
,
Urdu
,
Marathi
,
Hindi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu