ಪ್ರಧಾನ ಮಂತ್ರಿಯವರ ಕಛೇರಿ

ಕೋಯಿಕ್ಕೋಡ್ ವಿಮಾನ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪ್ರಧಾನಿ ಸಂತಾಪ

ಪ್ರಕಟಣಾ ದಿನಾಂಕ: 07 AUG 2020 10:39PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೋಯಿಕ್ಕೋಡ್ ನಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಕೋಯಿಕ್ಕೋಡ್ ವಿಮಾನ ಅಪಘಾತದಿಂದ ತೀವ್ರ ದುಃಖವಾಗುತ್ತಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದು ಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ. ಘಟನೆಯ ಬಗ್ಗೆ ಕೇರಳ ಮುಖ್ಯಮಂತ್ರಿ ವಿಜಯನ್ ಪಿನರಾಯಿ ಜಿ ಅವರೊಂದಿಗೆ ಚರ್ಚಿಸಿದ್ದೇನೆ. ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದು, ತೊಂದರೆಗೀಡಾದವರಿಗೆ ಎಲ್ಲಾ ರೀತಿಯ ನೆರವು ನೀಡಲಾಗುತ್ತಿದೆ’’ಎಂದು ಹೇಳಿದ್ದಾರೆ.

***


(ಪ್ರಕಟಣೆ ಐ.ಡಿ.: 1644692) ವಿಸಿಟರ್ ಕೌಂಟರ್ : 230